ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆ ಬೆಳಿಗ್ಗೆ 4.30 ರಿಂದ ಸಂಚಾರ ಆರಂಭ!
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಗುಡ್ ನ್ಯೂಸ್ ನೀಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಫೆ.4ರಂದು ಬೆಳಿಗ್ಗೆ 4.30 ರಿಂದಲೇ ಎಲ್ಲಾ ನಾಲ್ಕು ಟರ್ಮಿನಲ್ ಗಳಿಂದ ಮೆಟ್ರೋ ರೈಲು ಕಾರ್ಯಾಚರಣೆ ಆರಂಭಿಸಿದೆ.
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಗುಡ್ ನ್ಯೂಸ್ ನೀಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಫೆ.4ರಂದು ಬೆಳಿಗ್ಗೆ 4.30ರಿಂದಲೇ ಎಲ್ಲಾ ನಾಲ್ಕು ಟರ್ಮಿನಲ್ ಗಳಿಂದ ಮೆಟ್ರೋ ರೈಲು ಕಾರ್ಯಾಚರಣೆ ಆರಂಭಿಸಿದೆ.
ವಿಶ್ವಕ್ಯಾನ್ಸರ್ ದಿನದ ಪ್ರಯುಕ್ತ ಕ್ಯಾನ್ವಾಕ್ ಮತ್ತು ರನಾಥಾನ್ ಆಯೋಜನೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ನಗರದ ಸಾಕಷ್ಟು ಜನ ಸಾರ್ವಜನಿಕರು ಭಾಗಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಸಾರ್ವಜನಿಕರ ಸುಗಮ ಪ್ರಯಾಣಕ್ಕಾಗಿ ಬೆಳಿಗ್ಗೆ 4.30 ಕ್ಕೆ ಮೆಟ್ರೋ ಸೇವೆ ಆರಂಭ ಮಾಡಲಾಗುತ್ತಿದೆ.
ಇದನ್ನೂ ಓದಿ: ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಕಡಿವಾಣ ಹಾಕಲು ಬಿಎಂಆರ್ಸಿಎಲ್ ಮುಂದು: ಅಸಭ್ಯ ವರ್ತನೆ ಮಾಡಿದವರಿಗೆ 10,000 ರೂ. ದಂಡ!
ಸಾಮಾನ್ಯವಾಗಿ ಭಾನುವಾರದಂದು ಬೆಳಗ್ಗೆ 7 ಗಂಟೆಗೆ ಬಿಎಂಆರ್ಸಿಎಲ್ ಮೆಟ್ರೋ ಸೇವೆ ಆರಂಭವಾಗುತ್ತಿತ್ತು. ಸದ್ಯ ಫೆಬ್ರವರಿ 4 ರಂದು ಎರಡುವರೆ ಗಂಟೆ ಮುಂಚಿತವಾಗಿ ಮೆಟ್ರೋ ಸೇವೆ ಆರಂಭವಾಗಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.