ಮೋಹನ್‌ ಭಾಗವತ್‌ 
ರಾಜ್ಯ

ಕಲೆ ಜನರ ಗ್ರಹಿಕೆಯನ್ನು ಬದಲಾಯಿಸಬಲ್ಲದು: ಮೋಹನ್‌ ಭಾಗವತ್‌

ಜನರ ಗ್ರಹಿಕೆಯನ್ನು ಬದಲಾಯಿಸುವ ಹಾಗೂ ವಿಶ್ವ ಕಲೆಗಳಿಗೆ ದಾರಿ ಮಾಡಿಕೊಡುವ ಸಾಮರ್ಥ್ಯ ಭಾರತೀಯ ಕಲೆಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಶನಿವಾರ ಹೇಳಿದರು.

ಬೆಂಗಳೂರು: ಜನರ ಗ್ರಹಿಕೆಯನ್ನು ಬದಲಾಯಿಸುವ ಹಾಗೂ ವಿಶ್ವ ಕಲೆಗಳಿಗೆ ದಾರಿ ಮಾಡಿಕೊಡುವ ಸಾಮರ್ಥ್ಯ ಭಾರತೀಯ ಕಲೆಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಶನಿವಾರ ಹೇಳಿದರು.

ಬೆಂಗಳೂರಿನ ಅಖಿಲ ಭಾರತೀಯ ಕಲಾಸಾಧಕ ಸಂಗಮದಲ್ಲಿ ನಡೆದ ಸಮಾರಂಭದಲ್ಲಿ ಜನಪದ ಕಲಾವಿದರಾದ ಗಣಪತ್ ಸಖಾರಾಮ್ ಮಸಗೆ ಮತ್ತು ಚಿತ್ರ ಕಲಾವಿದ ವಿಜಯ ದಶರಥ್ ಆಚ್ರೆಕರ್ ಅವರಿಗೆ ಪ್ರಥಮ ವರ್ಷದ ‘ಭರತ ಮುನಿ’ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಮೋಹನ್ ಭಾಗವತ್ ಅವರು, 75 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಭಾರತೀಯ ಕಲೆಗಳನ್ನು ಅಭ್ಯಾಸ ಮಾಡುವ ಮತ್ತು ಸಮಾಜಕ್ಕೆ ಪರಿಚಯಿಸುವ ಸಾಧಕರನ್ನು ಗುರುತಿಸಿ ಗೌರವಿಸಲು ಈ ರೀತಿಯ ಉಪಕ್ರಮವನ್ನು ಕೈಗೊಳ್ಳಲಾಗಿದೆ. ‘ಕಲೆ ಒಂದು ವಿದ್ಯೆಯಾಗಿದ್ದು, ಅಂತ್ಯದಲ್ಲಿ ನಮ್ಮ ಮುಕ್ತಿಗೂ ಕಾರಣವಾಗುತ್ತದೆ. ಕಲೆ ಜನರ ಗ್ರಹಿಕೆಯನ್ನು ಬದಲಾಯಿಸಬಲ್ಲದು. ವಿಕಾರಗಳಿಂದ ನಮ್ಮನ್ನು ಮೇಲಕ್ಕೆತ್ತಿ ಸಮಾಜದ ವಿಚಾರ, ಸಂವೇದನೆಗಳನ್ನು ಅರ್ಥ ಮಾಡಿಸಿಕೊಡಲು ಕಲೆ ಪ್ರಮುಖ ಪಾತ್ರ ವಹಿಸುತ್ತದೆ, ಭಾರತೀಯತೆಯನ್ನು ಉಳಿಸುವ ಕೆಲಸವನ್ನು ಕಲೆಯ ಮೂಲಕ ಕಲಾವಿದರು ಮಾಡುತ್ತಿದ್ದಾರೆ. ಅವರ ಸಂಖ್ಯೆ ಇನ್ನೂ ಹೆಚ್ಚಾಗಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!