ರಾಜ್ಯ

ಫೆ.9ರಂದು ಶಾಸಕರಿಗೆ ರಾಜ್ಯ ಬಜೆಟ್‌ ಕುರಿತು ವಿಶೇಷ ತರಬೇತಿ ಕಾರ್ಯಕ್ರಮ: ಯುಟಿ ಖಾದರ್

Vishwanath S

ಮಂಗಳೂರು: ಫೆಬ್ರವರಿ 9ರಂದು ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ಶಾಸಕರಿಗೆ ರಾಜ್ಯ ಬಜೆಟ್ ಕುರಿತು ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಭಾನುವಾರ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಖಾದರ್, ಫೆಬ್ರವರಿ 12ರಿಂದ 23ರ ನಡುವೆ ಬಜೆಟ್ ಅಧಿವೇಶನ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಬಜೆಟ್ ಕುರಿತಂತೆ ಶಾಸಕರಿಗೆ ತರಬೇತಿ ನೀಡಲಾಗುತ್ತದೆ. 'ಹೆಚ್ಚು ಶಾಸಕರು ಬರಲೆಂದು 11ರ ಬದಲಿಗೆ 9ಗಂಟೆಗೆ ವಿಧಾನಸಭೆ ಕಲಾಪವನ್ನು ಮುಂಚಿತವಾಗಿ ಪ್ರಾರಂಭಿಸಲು ನಾನು ಪ್ರಸ್ತಾಪಿಸಿದ್ದೇನೆ.

ಅಧಿವೇಶನದಲ್ಲಿ ಪ್ರಶ್ನೆಗಳನ್ನು ಕೇಳಲು ಮತ್ತು ಕಾರ್ಯವೈಖರಿಯನ್ನು ಪರಿಣಾಮಕಾರಿಯಾಗಿ ಮಾಡಲು ಅವಕಾಶ ಮತ್ತು ತರಬೇತಿ ಸಮಯದಲ್ಲಿ ಮಾಜಿ ಅಧಿಕಾರಿಗಳು ಸೇರಿದಂತೆ ತಜ್ಞರು ಬಜೆಟ್‌ನ ವಿವಿಧ ಅಂಶಗಳ ಕುರಿತು ಮಾತುಕತೆ ನಡೆಸುತ್ತಾರೆ. ಹಣ ಹೇಗೆ ಮಂಜೂರು ಮಾಡುತ್ತಾರೆ ಇತ್ಯಾದಿ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಈ ಸಂದರ್ಭದಲ್ಲಿ ಉಪನ್ಯಾಸ ನೀಡಲಿದ್ದು, ಕಾರ್ಯಕ್ರಮವನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉದ್ಘಾಟಿಸಲಿದ್ದು, ಎಲ್ಲಾ ಶಾಸಕರು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.

ರಾಜ್ಯ ವಿಧಾನಮಂಡಲದ ಜಂಟಿ ಅದಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಭಾಷಣದೊಂದಿಗೆ ಫೆಬ್ರವರಿ 12ರಂದು ಬಜೆಟ್ ಅಧಿವೇಶನ ಪ್ರಾರಂಭವಾಗುತ್ತದೆ ಎಂದು ಖಾದರ್ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.16ರಂದು ಬಜೆಟ್ ಮಂಡಿಸುವ ನಿರೀಕ್ಷೆ ಇದೆ ಎಂದರು.

SCROLL FOR NEXT