ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನ ಅಗತ್ಯತೆಗಳ ಪೂರೈಸಲು ಶರಾವತಿ ನದಿ ನೀರು ತಿರುಗಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಕೆಜೆ ಜಾರ್ಜ್

ಬೆಂಗಳೂರಿನ ಅಗತ್ಯತೆಗಳ ಪೂರೈಸಲು ಶರಾವತಿ ನದಿ ನೀರು ತಿರುಗಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಶನಿವಾರ ಹೇಳಿದರು.

ಶಿವಮೊಗ್ಗ: ಬೆಂಗಳೂರಿನ ಅಗತ್ಯತೆಗಳ ಪೂರೈಸಲು ಶರಾವತಿ ನದಿ ನೀರು ತಿರುಗಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗನಮಕ್ಕಿ ಅಣೆಕಟ್ಟೆಯಿಂದ ಜಲವಿದ್ಯುತ್ ಉತ್ಪಾದಿಸಿ ನೀರು ವಾಪಸ್ ನದಿಗೆ ಕಳುಹಿಸದೇ ಅದನ್ನು ಮರು ಬಳಕೆ ಮಾಡಲು ಪಂಪ್ ಸ್ಟೋರೇಜ್ ಮಾಡಲಾಗುತ್ತಿದೆ. ಇದರಿಂದ 24 ಗಂಟೆ ವಿದ್ಯುತ್ ಉತ್ಪಾದನೆ ಮಾಡಬಹುದು. ಶರಾವತಿ ಅಲ್ಲದೇ ವರಾಹಿಯಲ್ಲೂ ಸಹ ಪಂಪ್ ಸ್ಟೋರೇಜ್ ನಿರ್ಮಿಸಿ ಹೆಚ್ಚು ವಿದ್ಯುತ್ ಉತ್ಪಾದನೆಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿ ಇರುವ ವಿದ್ಯುತ್ ಅಭಾವ ನೀಗಿಸಲು ಕ್ರಮ ತೆಗೆದುಕೊಂಡಿದ್ದೇವೆ. ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ವಿಚಾರ ನಮ್ಮ ಮುಂದೆ ಇಲ್ಲ ಎಂದು ಹೇಳಿದರು.

1.62 ಕೋಟಿ ಕುಟುಂಬಗಳಿಗೆ ನಿರಂತರ ವಿದ್ಯುತ್ ಕೊಡುತ್ತಿದ್ದೇವೆ. ಇದಕ್ಕಾಗಿ ನಮ್ಮ ರಾಜ್ಯ ಸರ್ಕಾರದಿಂದ ಅನುದಾನವನ್ನು ಬಿಡುಗಡೆ ಮಾಡುತ್ತಿದ್ದೇವೆ. ಮೊದಲು ಮಳೆಗಾಲ ಬಂದಾಗ ಕಲ್ಲಿದ್ದಲು ವಿದ್ಯುತ್​ ಸ್ಥಾವರಗಳನ್ನು ನಾವು ವಾರ್ಷಿಕ ಮೆಂಟೆನೆನ್ಸ್ ಗಾಗಿ ಬಂದ್ ಮಾಡುತ್ತಿದ್ದೆವು. ಈ ವರ್ಷವೂ ಹಾಗೆ ಮಾಡಿದ್ದೆವು. ಆದರೆ ಮಳೆ ಕೊರತೆಯಿಂದ ವಿದ್ಯುತ್ ಬೇಡಿಕೆ ಹೆಚ್ಚಾಯಿತು. 16-17 ಸಾವಿರ ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇತ್ತು. ಕಳೆದ ವರ್ಷ 8-9 ಮೆಗಾವ್ಯಾಟ್ ಬೇಡಿಕೆ ಇತ್ತು. ಈ ವರ್ಷ ಅದು ದ್ವಿಗುಣವಾಯಿತು. ಇದರಿಂದ ರೈತರಿಗೆ 7 ಗಂಟೆ ಸತತ ವಿದ್ಯುತ್ ನೀಡುವುದನ್ನು ಈಗ 5 ಗಂಟೆಗೆ ಇಳಿಸಿದ್ದೇವೆ ಎಂದು ತಿಳಿಸಿದರು.

ಕಳೆದ ಒಂದು ತಿಂಗಳಿನಿಂದ ಮತ್ತೆ 7 ಗಂಟೆ ತಡೆ ರಹಿತ ವಿದ್ಯುತ್ ನೀಡುತ್ತಿದ್ದೇವೆ. ನಮಗೆ ಈಗ ವಿದ್ಯುತ್ ಅಭಾವವಿಲ್ಲ. ಆದರೆ ಒಂದು ವೇಳೆ ವಿದ್ಯುತ್ ಅಭಾವ ಉಂಟಾದರೆ, ವಿದ್ಯುತ್ ಖರೀದಿಸಿ ನೀಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ನಿರಂತರ ಜ್ಯೋತಿ ಕಳಪೆ ಕಾಮಗಾರಿ ತನಿಖೆ ನಡೆದು ವರದಿ ಬಂದರೆ, ಯಾರೇ ತಪ್ಪು ಮಾಡಿದರು ಸಹ ಅವರನ್ನು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: ಇಂಡಿಯಾ ಕೂಟದ 9 ಗಂಟೆಗಳ ಧರಣಿಗೆ ಬ್ರೇಕ್!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚುನಾವಣಾ ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!