ಅಶ್ವಮೇಧ ಬಸ್ಸುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ 
ರಾಜ್ಯ

ಕೆಎಸ್​ಆರ್​ಟಿಸಿ 100 ಹೊಸ ಅಶ್ವಮೇಧ ಬಸ್ಸುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಕೆಎಸ್ಆರ್ ಟಿಸಿ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸು (ಅಶ್ವಮೇಧ - ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್) ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ ಟಿಸಿ) ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸು (ಅಶ್ವಮೇಧ - ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್) ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಬಣ್ಣ ಬಣ್ಣದ ಬಗೆ ಬಗೆಯ ಹೂವುಗಳಿಂದ ಸಿಂಗಾರಗೊಂಡಿರುವ ಅಶ್ವಮೇಧ - ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್ ಬಸ್​ಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಧಾನಸೌಧದ ಮುಂಭಾಗ ಚಾಲನೆ ನೀಡಿದರು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಹ ಹಾಜರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಸಕ್ತ ಹಣಕಾಸು ವರ್ಷದಲ್ಲಿ ರಾಜ್ಯ ಸಾರಿಗೆ ಘಟಕಗಳಿಗೆ 5,800 ಬಸ್‌ಗಳು ಸೇರ್ಪಡೆಯಾಗಲಿವೆ ಮತ್ತು ಕೆಎಸ್‌ಆರ್‌ಟಿಸಿ ಅನೇಕ ಪ್ರಯಾಣಿಕರ ಸ್ನೇಹಿ ಯೋಜನೆಗಳನ್ನು ತಂದಿದೆ ಎಂದರು.

ಈ ಅಶ್ವಮೇಧ ಬಸ್ಸುಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದ್ದು, ಕೆಎಸ್ಆರ್​​ಟಿಸಿಗೆ ಒಟ್ಟು ಸಾವಿರ ಹೊಸ ಬಸ್​ಗಳು ಬರಲಿವೆ. ಮೊದಲ ಹಂತದಲ್ಲಿ ನೂರು ಹೊಸ ಕ್ಲಾಸಿಕ್ ಬಸ್​​ಗಳಿಗೆ ಚಾಲನೆ ನೀಡಲಾಗಿದೆ.

​ಈ ಬಸ್​​​ಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ 12 ಪ್ಯಾನಿಕ್ ಬಟನ್, ಜಿಪಿಎಸ್, ಎರಡು ರೇರ್ ಕ್ಯಾಮರಾ, ಮೊಬೈಲ್ ಫೋನ್ ಚಾರ್ಜ್ ಹಾಕಿಕೊಳ್ಳಲು ಆರು ಚಾರ್ಜಿಂಗ್ ಪಾಯಿಂಟ್ ವ್ಯವಸ್ಥೆ ಮಾಡಲಾಗಿದೆ. 

ಒಟ್ಟು 52 ಸೀಟಿನ ಬಸ್ಸಿನ ಒಳಗೆ ಮತ್ತು ಹೊರ ಭಾಗದಲ್ಲಿ ಎಲ್ಇಡಿ ಮಾರ್ಗಫಲಕ, ಪ್ರಯಾಣಿಕರು ಲಗೆಜ್ ಇಡಲು ದೊಡ್ಡದಾದ ಸ್ಥಳದ ವ್ಯವಸ್ಥೆ ಮಾಡಲಾಗಿದೆ.

KSRTC ಕಳೆದ ಡಿಸೆಂಬರ್ ಅಂತ್ಯದವರೆಗೆ 180 ಬಸ್‌ಗಳನ್ನು(153 ಡೀಸೆಲ್ ಮತ್ತು 27 ಎಲೆಕ್ಟ್ರಿಕ್) ಹೊಸದಾಗಿ ಪರಿಚಯಿಸಿದ್ದು, ಪ್ರಸಕ್ತ ಹಣಕಾಸು ವರ್ಷದಲ್ಲಿ 948 ಹೊಸ ಡೀಸೆಲ್ ಮತ್ತು 300 ಎಲೆಕ್ಟ್ರಿಕ್ ಬಸ್‌ಗಳನ್ನು ಪರಿಚಯಿಸಲು ಯೋಜಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT