ಮಡಿಕೇರಿ: ಕ್ಷುಲಕ್ಕ ಕಾರಣಕ್ಕೆ ಯುವಕನೋರ್ವನ ಬರ್ಬರ ಹತ್ಯೆ
ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದೆ.
ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದೆ.
ಮೃತ ಯುವಕನನ್ನು 22 ವರ್ಷದ ಸಾಜಿದ್ ಎಂದು ಗುರುತಿಸಲಾಗಿದೆ. ಮೈಸೂರು ರಸ್ತೆಯಲ್ಲಿರುವ ಶ್ರೀನಿಧಿ ಎಂಬವರ ಸರ್ವಿಸ್ ಸ್ಟೇಷನ್ ನಲ್ಲಿ ಬೈಕ್ ಸರ್ವಿಸ್ ಮಾಡಲೆಂದು ಸಾಜೀದ್ ಬಂದಿದ್ದನು. ಈ ವೇಳೆ ಇಬ್ಬರ ನುಡವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದೆ.
ಈ ವೇಳೆ ಕೋಪಗೊಂಡ ಶ್ರೀನಿಧಿ ಹರಿತವಾದ ಆಯುಧದಿಂದ ಸಾಜಿದ್ಗೆ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಸಾಜಿದ್ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕುಶಾಲನಗರ ಟೌನ್ ಠಾಣಾ ಪೊಲೀಸರು ಆರೋಪಿ ಶ್ರೀನಿಧಿನನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.