ರಾಜ್ಯ

ಮಂಗನ ಕಾಯಿಲೆ: ಪ್ರಾರಂಭಿಕ ಹಂತದಲ್ಲೇ ಪತ್ತೆ ಹಚ್ಚಿ, ಚಿಕಿತ್ಸೆ ನೀಡಲು ಸಚಿವ ಗುಂಡೂರಾವ್ ಸೂಚನೆ

Nagaraja AB

ಬೆಂಗಳೂರು: ಪಶ್ಚಿಮ ಘಟ್ಟದ ಭಾಗದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುಂಜಾಗೃತೆ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಿರಿಯ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಉತ್ತರ ಕನ್ನಡ ಜಿಲ್ಲೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಹರಡುತ್ತಿರುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. 

ಪ್ರತಿ ವರ್ಷ ಸಾಗರ ಹಾಗೂ ಸಿದ್ದಾಪುರ ತಾಲೂಕುಗಳಲ್ಲಿ  ಮಂಗನ ಕಯಾಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಈ ಭಾಗದ ಜನರಲ್ಲಿ ಕೆಮ್ಮು ಜ್ಚರದಂತ ಲಕ್ಷಣಗಳು ಕಾಣಿಸಿಕೊಂಡಾಗ ಆರಂಭಿಕ ಹಂತದಲ್ಲಿಯೇ ಟೆಸ್ಟ್ ಮಾಡಿ ಮಂಗನ ಕಾಯಿಲೆಯನ್ನ ಖಚಿತಪಡಿಸಿಕೊಂಡು ತಕ್ಷಣ ಚಿಕಿತ್ಸೆ ನೀಡಬೇಕು. ಅಲ್ಲದೇ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಜನರಲ್ಲಿ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸಚಿವ ಗುಂಡೂರಾವ್ ಸೂಚನೆ ನೀಡಿದರು. 

ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಎಫ್ ಡಿ ಟೆಸ್ಟ್ ಹೆಚ್ಚಿನ ರೀತಿಯಲ್ಲಿ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ರಾಜ್ಯದಲ್ಲಿ ಒಟ್ಟು 65 ಜನರಲ್ಲಿ‌ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಚಿಕಿತ್ಸೆ ಪಡೆದವರಲ್ಲಿ 26 ಜನರು ಗುಣಮುಖರಾಗಿದ್ದಾರೆ. 37 ಸಕ್ರೀಯ ಪ್ರಕರಣಗಳಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
 

SCROLL FOR NEXT