ರಾಜ್ಯ

ಕಾಂಗ್ರೆಸ್‌ನ 'ಚಲೋ ದೆಹಲಿ' ವಿರೋಧಿಸಿ ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ: 30 ಮಂದಿ ಬಂಧನ

Shilpa D

ಬೆಳಗಾವಿ: ಕಾಂಗ್ರೆಸ್ಸಿನ ‘ಚಲೋ ದೆಹಲಿ’ ಕಾರ್ಯಕ್ರಮ ವಿರೋಧಿಸಿ ಕರ್ನಾಟಕ ಬಿಜೆಪಿ ಘಟಕ ಬುಧವಾರ ಪ್ರತಿಭಟನೆ ನಡೆಸಿ ಬೆಳಗಾವಿಯ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿತು.

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಎದುರು ಹಾಕಿದ್ದ ಬ್ಯಾರಿಕೇಡ್‌ಗಳನ್ನು ಪಕ್ಕಕ್ಕೆ ತಳ್ಳಿ ಬಿಜೆಪಿ ಧ್ವಜ ಹಿಡಿದುಕೊಂಡು ಒಳಗೆ ನುಗ್ಗಲು ಯತ್ನಿಸಿದರು. ಈ ವೇಳೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಚೇರಿಗೆ ನುಗ್ಗದಂತೆ ತಡೆದು 30 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ ಪಕ್ಷ ದೇಶ ವಿರೋಧಿ ಎಂದು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು. ಬೆಂಗಳೂರಿನಲ್ಲಿ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಗೆ ಬೀಗ ಹಾಕಲು ಯತ್ನಿಸಿದ ಬಿಜೆಪಿ ಶಾಸಕ ಆರ್.ಅಶೋಕ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಾಕಿಸ್ತಾನದ ಸಂಸ್ಥಾಪಕ ಮಹಮ್ಮದ್ ಅಲಿ ಜಿನ್ನಾ ಅವರ ರಕ್ತವನ್ನು ಕಾಂಗ್ರೆಸ್ ಆನುವಂಶಿಕವಾಗಿ ಪಡೆದಿದೆ ಎಂದು ಅಶೋಕ ಹೇಳಿದರು. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವ ನೆಪದಲ್ಲಿ ಅವರು ಮಜಾ ಮಾಡಲು ನವದೆಹಲಿಗೆ ಹೋಗಿದ್ದಾರೆ" ಎಂದು ಅವರು ಹೇಳಿದರು.

ಮೇಕೆದಾಟು ಯೋಜನೆ ಕುರಿತ ಆಂದೋಲನ ಪ್ರಹಸನವಾಗಿದ್ದು, ಮಹದಾಯಿ ಯೋಜನೆಗೆ ಕಾಂಗ್ರೆಸ್ ಸರ್ಕಾರದ ಬಳಿ ಹಣವಿಲ್ಲ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಡುಗಡೆ ಮಾಡಿದ್ದ ಯೋಜನೆಗೆ 7,800 ಕೋಟಿ ರೂಪಾಯಿ ನಿಧಿಯನ್ನೂ ಕಾಂಗ್ರೆಸ್ ನಿಲ್ಲಿಸಿದೆ' ಎಂದು ವಿಜಯೇಂದ್ರ ಹೇಳಿದರು.
 
ರಾಜ್ಯದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರ್ಕಾರ ಮತ್ತೊಂದಿಲ್ಲ. ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರು ತಮ್ಮ ತತ್ವ ಆದರ್ಶಗಳನ್ನು ಗಾಳಿಗೆ ತೂರಿದ್ದಾರೆ. ಸ್ವಾರ್ಥ ಮತ್ತು ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಹೋರಾಟ ಮಾಡುತ್ತಿದ್ದಾರೆ. ಕಾವೇರಿ, ಮಹದಾಯಿ ವಿಚಾರದಲ್ಲಿ ಎಡವಟ್ಟು ಮಾಡಿದರೆ, ರೈತರಿಗೆ ಬರ ಪರಿಹಾರ ನೀಡಿಲ್ಲ. ಯಾವ ನೈತಿಕತೆ, ಯಾವ ಮುಖ ಇಟ್ಟುಕೊಂಡು ದೆಹಲಿಯಲ್ಲಿ ಧರಣಿ ಮಾಡುತ್ತಿದ್ದೀರಿ’ ಎಂದು ಪ್ರಶ್ನಿಸಿದರು.

SCROLL FOR NEXT