ಬಿಜೆಪಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನೆ 
ರಾಜ್ಯ

ಜಂತರ್‌ ಮಂತರ್‌ನಲ್ಲಿ ನಾಟಕ ಮಾಡಲು ಮೇಕಪ್‌ ಹಾಕಿ ಕೂತಿದ್ದಾರೆ ಕಾಂಗ್ರೆಸ್ಸಿಗರು: ಬಿಜೆಪಿಯಿಂದ ಬೆಂಗಳೂರಿನಲ್ಲಿ ಪ್ರತಿಭಟನೆ

ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು 'ನನ್ನ ತೆರಿಗೆ ನನ್ನ ಹಕ್ಕು' ಘೋಷವಾಕ್ಯದಡಿ ದೆಹಲಿ ಚಲೋ ನಡೆಸಲಿದ್ದರೆ ಇತ್ತ ಬೆಂಗಳೂರಿನಲ್ಲಿ ಇದಕ್ಕೆ ಪ್ರತಿಯಾಗಿ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ವಿಧಾನಸೌಧದ ಮುಂದೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ.

ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಕಾಂಗ್ರೆಸ್ ನಾಯಕರು 'ನನ್ನ ತೆರಿಗೆ ನನ್ನ ಹಕ್ಕು' ಘೋಷವಾಕ್ಯದಡಿ ದೆಹಲಿ ಚಲೋ ನಡೆಸಲಿದ್ದರೆ ಇತ್ತ ಬೆಂಗಳೂರಿನಲ್ಲಿ ಇದಕ್ಕೆ ಪ್ರತಿಯಾಗಿ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ನಾಯಕರು ವಿಧಾನಸೌಧದ ಮುಂದೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದರೂ, ಈವರೆಗೂ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ. 

ಕರ್ನಾಟಕದ ಜನತೆ ಕಾಂಗ್ರೆಸ್​ಗೆ ಮತ ನೀಡಿದ್ದು ಗ್ಯಾರಂಟಿಗಳನ್ನು ನಂಬಿ! ಆದರೆ, ಮಜಾವಾದಿ ಸಿದ್ದರಾಮಯ್ಯ ಅವರ ಸರ್ಕಾರ ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ಮೋಜು ಮಸ್ತಿ ಮಾಡುತ್ತಿದೆ. ಕನ್ನಡಿಗರ ತೆರಿಗೆ ಹಣದಲ್ಲಿ ಬಿಟ್ಟಿ ಜಾಹೀರಾತು ಕೊಟ್ಟು ಪ್ರಚಾರ ಪಡೆದುಕೊಂಡು ದೆಹಲಿಯಲ್ಲಿ ಶೋಕಿ ಮಾಡಲು ಹೋಗಿದೆ. ಕನ್ನಡಿಗರ ಪ್ರಶ್ನೆಗಳಿಗೆ ಉತ್ತರ ಕೊಡಲು ಯೋಗ್ಯತೆ ಇಲ್ಲದ ಕಾಂಗ್ರೆಸ್ಸಿಗರು, ತಾವೇ ಮಾಡಿದ ಸುಳ್ಳುಗಳಿಗೆ ಸತ್ಯ ಹುಡುಕುತ್ತಿದ್ದಾರೆ. ಜಂತರ್‌ ಮಂತರ್‌ನಲ್ಲಿ ಬೃಹನ್ನಳೆ ನಾಟಕ ಮಾಡಲು ಮೇಕಪ್‌ ಹಾಕಿ ಕೂತಿದ್ದಾರೆ ಎಡಬಿಡಂಗಿ ಕಾಂಗ್ರೆಸ್ಸಿಗರು” ಎಂದು ರಾಜ್ಯ ಬಿಜೆಪಿ ಘಟಕ ಟೀಕೆ ಮಾಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!