ಬಿಜೆಪಿ ಪ್ರತಿಭಟನೆ 
ರಾಜ್ಯ

ಕಾಂಗ್ರೆಸ್ 'ದೆಹಲಿ ಚಲೋ' ಪ್ರತಿಭಟನೆಗೆ ಬಿಜೆಪಿ ಸಡ್ಡು: ಆಡಳಿತ ವೈಫಲ್ಯ ವಿರೋಧಿಸಿ ಬೆಂಗಳೂರಿನಲ್ಲಿ ಧರಣಿ

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿರುವಂತೆಯೇ ಇದಕ್ಕೆ ಪ್ರತಿಯಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ.

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿದೆ ಎಂದು ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿರುವಂತೆಯೇ ಇದಕ್ಕೆ ಪ್ರತಿಯಾಗಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದೆ.

ವಿಧಾನಸೌಧದ ಎದುರು ರಾಜ್ಯದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗಿಯಾಗಿದ್ದು, ಸರ್ಕಾರದ ಈ ಧೋರಣೆಯನ್ನು ಖಂಡಿಸಿ ಬಿಜೆಪಿ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಈ ಮೂಲಕ ಒಂದೇ ದಿನ ಎರಡು ಪಕ್ಷಗಳು ದೆಹಲಿ ಹಾಗೂ ರಾಜ್ಯದಲ್ಲಿ ಪ್ರತಿಭಟನೆಯನ್ನು ನಡೆಸುವ ಮೂಲಕ ಏಟಿಗೆ ಎದಿರೇಟು ನೀಡಲು ಸಜ್ಜಾಗಿವೆ.

ದೆಹಲಿಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಧರಣಿಯನ್ನು ಎದುರಿಸಲು ಕರ್ನಾಟಕ ಬಿಜೆಪಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಶಾಸಕರು ಮತ್ತು ಮುಖಂಡರು ಕರ್ನಾಟಕ ರಾಜ್ಯ ವಿಧಾನಸೌಧ ಮತ್ತು ಕಾರ್ಯದರ್ಶಿ ಕಚೇರಿ ಇರುವ ವಿಧಾನಸೌಧದ ಬಳಿಯ ಮಹಾತ್ಮ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದರು. ರಾಜ್ಯದ 223 ತಾಲ್ಲೂಕುಗಳು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಹೀಗಿದ್ದರೂ ರಾಜ್ಯ ಸರ್ಕಾರ ಪರಿಹಾರವನ್ನು ನೀಡಿಲ್ಲ. 2000 ರೂಪಾಯಿ ರೈತರಿಗೆ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ. ಆದರೆ ಈ ಹಣ ಇನ್ನೂ ತಲುಪಿಲ್ಲ. ಸರ್ಕಾರ ಪರಿಹಾರವನ್ನು ನೀಡುವ ಬದಲಾಗಿ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ಬರಪೀಡಿತ ರೈತರಿಗೆ ಪರಿಹಾರ ಹಾಗೂ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುವಲ್ಲಿ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರವನ್ನು ಖಂಡಿಸಿ ಘೋಷಣಾ ಫಲಕಗಳನ್ನು ಹಿಡಿದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಸೇರಿದಂತೆ ಹಲವು ಮಾಜಿ ಸಚಿವರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಸಂಸದ ಬಿ ವೈ ರಾಘವೇಂದ್ರ, ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ರಾಜಕೀಯ ನಾಟಕ ಮಾಡುತ್ತಿದೆ. ಕರ್ನಾಟಕದ ಮತದಾರರು ಸಾಕಷ್ಟು ನಿರೀಕ್ಷೆಗಳೊಂದಿಗೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದಿದ್ದಾರೆ ಆದರೆ ಕೇವಲ ಆರು ತಿಂಗಳಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದ ಕಾರಣ ಜನರು ಮತ್ತು ಆಡಳಿತ ಪಕ್ಷದ ಶಾಸಕರು ಸರ್ಕಾರದ ಮೇಲೆ ಭರವಸೆ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

ಅಂತೆಯೇ 'ಮುಂಬರುವ ಲೋಕಸಭಾ ಚುನಾವಣೆಯನ್ನು ಎದುರಿಸುವ ಸ್ಥಿತಿಯಲ್ಲಿ ಸರ್ಕಾರ ಇಲ್ಲ, ತಮ್ಮ ವೈಫಲ್ಯಗಳಿಂದ ಜನಮನವನ್ನು ಬೇರೆಡೆಗೆ ಸೆಳೆಯಲು ಯತ್ನಿಸುತ್ತಿದ್ದಾರೆ, ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳಲು ಕೇಂದ್ರದತ್ತ ಬೊಟ್ಟು ಮಾಡುವ ರಾಜಕೀಯ ನಾಟಕವಾಡುತ್ತಿದ್ದಾರೆ ಎಂದು ರಾಘವೇಂದ್ರ ಹೇಳಿದರು. 

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಬಿಎಸ್ ವೈ ಪುತ್ರ ಬಿವೈ ವಿಜಯೇಂದ್ರ, 'ಕಾಂಗ್ರೆಸ್ ಸರ್ಕಾರ ನಮ್ಮ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಕಾರ್ಯಕರ್ತರು ಪ್ರತಿಭಟನೆ ನಡೆಸಿದರೆ ಲಾಠಿ ಚಾರ್ಜ್ ಮಾಡುತ್ತಾರೆ, ಶಾಸಕರು ಪ್ರತಿಭಟಿಸಿದರೆ ವಿಧಾನ ಸೌಧದ ಒಳಗೆ ಪ್ರವೇಶ ನಿರಾಕರಿಸುತ್ತಾರೆ. ಒಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದ ಅಮಲಿನಲ್ಲಿದೆ. ಕಾಂಗ್ರೆಸ್ ನಾಯಕರು ಇಂದು ಚುನಾವಣೆ ಹತ್ತಿರ ಬರುತ್ತಿದ್ದಂತೆ ಗಾಬರಿಯಾಗುತ್ತಿದ್ದಾರೆ ಎಂದು ಕಿಡಿಕಾರಿದರು.

ವಿಪಕ್ಷ ನಾಯಕ ಆರ್ ಆಶೋಕ್ ಮಾತನಾಡಿ, 'ಸಿದ್ದರಾಮಯ್ಯ ಸರ್ಕಾರದಲ್ಲಿ ರೈತರಿಗೆ ಬರ ಪರಿಹಾರ ನೀಡಲು ಹಣವಿಲ್ಲ, ಆದರೆ ಅಲ್ಪಸಂಖ್ಯಾತರಿಗೆ ಕೊಡಲು ಹಣವಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ರೈತರ ಆತ್ಮಹತ್ಯೆ ಹೆಚ್ಚುತ್ತಿರುತ್ತದೆ, ಬರಗಾಲ ಕಾಡುತ್ತಿರುತ್ತದೆ ಎಂದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!