ಸೋಮೇಶ್ವರ ದೇವಸ್ಥಾನ 
ರಾಜ್ಯ

ಕಲಬುರಗಿ ಕೋಟೆಯಲ್ಲಿ ಸೋಮೇಶ್ವರ ದೇವಸ್ಥಾನ ಪುನರ್ ನಿರ್ಮಾಣಕ್ಕೆ ಹಿಂದೂ ಜಾಗೃತಿ ಸೇನೆ ಆಗ್ರಹ

ವಾರಣಾಸಿ ನ್ಯಾಯಾಲಯ, ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ನೀಡಿದ್ದರಿಂದ ಉತ್ತೇಜನಗೊಂಡಿರುವ ಕಲಬುರಗಿಯ ಹಿಂದೂ ಜಾಗೃತಿ ಸೇನೆ, ಕಲಬುರಗಿ ಕೋಟೆಯಲ್ಲಿರುವ ಸೋಮೇಶ್ವರ ದೇವಾಲಯ ಪುನರ್...

ಕಲಬುರಗಿ: ವಾರಣಾಸಿ ನ್ಯಾಯಾಲಯ, ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ನೀಡಿದ್ದರಿಂದ ಉತ್ತೇಜನಗೊಂಡಿರುವ ಕಲಬುರಗಿಯ ಹಿಂದೂ ಜಾಗೃತಿ ಸೇನೆ, ಕಲಬುರಗಿ ಕೋಟೆಯಲ್ಲಿರುವ ಸೋಮೇಶ್ವರ ದೇವಾಲಯ ಪುನರ್ ನಿರ್ಮಾಣ ಮಾಡುವಂತೆ ಜಿಲ್ಲಾಡಳಿತಕ್ಕೆ ಒತ್ತಾಯಿಸಿದೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಹಿಂದೂ ಜಾಗೃತಿ ಸೇನೆಯ ಅಧ್ಯಕ್ಷ ಲಕ್ಷ್ಮೀಕಾಂತ್ ಸ್ವಾದಿ, ನಿಜಾಮರು ಈ ಭಾಗವನ್ನು ಆಳುತ್ತಿದ್ದಾಗ ಕೋಟೆಯೊಳಗಿನ ದೇವಾಲಯವನ್ನು ಕೆಡವಿದರು. “ದೇವಾಲಯದೊಳಗೆ ಶಿವಲಿಂಗ ಇಲ್ಲದಿದ್ದರೂ ಆ ಸ್ಥಳದಲ್ಲಿ ದೇವಸ್ಥಾನ ಇತ್ತು ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ. ದೇವಾಲಯದ ಶಿಥಿಲಗೊಂಡ ರಚನೆಯು ಇಂದಿಗೂ ಅಸ್ತಿತ್ವದಲ್ಲಿದೆ. ಇದು ಆ ಕಾಲದ ದುಃಖದ ಕಥೆಯನ್ನು ಹೇಳುತ್ತದೆ” ಎಂದಿದ್ದಾರೆ.

ಕೋಟೆಯೊಳಗಿರುವ ದೇವಸ್ಥಾನವನ್ನು ಪುನರ್‌ನಿರ್ಮಿಸಿ, ಸಕಲ ವಿಧಿವಿಧಾನಗಳೊಂದಿಗೆ ದೇವಸ್ಥಾನದಲ್ಲಿ ಶಿವಲಿಂಗವನ್ನು ಪ್ರತಿಷ್ಠಾಪಿಸುವಂತೆ ಕಳೆದ ಎರಡು ವರ್ಷಗಳಿಂದ ತಮ್ಮ ಸಂಘಟನೆ ತೀವ್ರ ಹೋರಾಟ ನಡೆಸುತ್ತಿದ್ದು, ಸರ್ಕಾರದ ಮೇಲೆ ಒತ್ತಡ ಹೇರುತ್ತಿದೆ. ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಎಂದು ಲಕ್ಷ್ಮೀಕಾಂತ ಸ್ವಾದಿ ತಿಳಿಸಿದ್ದಾರೆ.

ಒಂದು ವೇಳೆ ದೇವಾಲಯವನ್ನು ಪುನರ್‌ನಿರ್ಮಾಣ ಮಾಡಲು ಜಿಲ್ಲಾಡಳಿತ ವಿಫಲವಾದರೆ, ಶಿವರಾತ್ರಿಯಂದು ಶಿವಲಿಂಗವನ್ನು ಪ್ರತಿಷ್ಠಾಪಿಸಿ ಭಕ್ತರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

SCROLL FOR NEXT