ಆರೋಪಿ ಪವಿತ್ರಾ 
ರಾಜ್ಯ

ಬೆಂಗಳೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರು ಹೇಳಿ ಕೋಟ್ಯಂತರ ರು. ವಂಚನೆ!

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಹೆಸರನ್ನು ಬಳಸಿಕೊಂಡು, ಬೇಕಾದಷ್ಟು ಸಾಲ ನೀಡುವುದಾಗಿ ಹಾಗೂ ಅರ್ಧದಷ್ಟು ಸಬ್ಸಿಡಿ ನೀಡುವುದಾಗಿ ಹೇಳಿ ಅಮಾಯಕರಿಂದ ಕೋಟಿ ರೂ. ಹಣ ಪಡೆದು ಮಹಿಳೆಯೊಬ್ಬಳು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ,

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಆರ್‌ಬಿಐ ಹೆಸರನ್ನು ಬಳಸಿಕೊಂಡು, ಬೇಕಾದಷ್ಟು ಸಾಲ ನೀಡುವುದಾಗಿ ಹಾಗೂ ಅರ್ಧದಷ್ಟು ಸಬ್ಸಿಡಿ ನೀಡುವುದಾಗಿ ಹೇಳಿ ಅಮಾಯಕರಿಂದ ಕೋಟಿ ರೂ. ಹಣ ಪಡೆದು ಮಹಿಳೆಯೊಬ್ಬಳು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ,

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ತಮಿಳುನಾಡಿನ ಹೊಸೂರು ಮೂಲದ ಪವಿತ್ರಾ ಈ ಪ್ರಕರಣದ ಆರೋಪಿ. ಬ್ಲೂ ವಿಂಗ್ಸ್ ಎಂಬ ಹೆಸರಿನ ಟ್ರಸ್ಟ್ ಮಾಡಿಕೊಂಡು ಮುಗ್ಧ ಜನರಿಗೆ ವಂಚಿಸಿದ್ದಾಳೆ.

ಟ್ರಸ್ಟ್‌ಗೆ ಆರ್‌ಬಿಐನಿಂದ 17 ಕೋಟಿ ರೂ. ಬಂದಿರುವುದಾಗಿ ಮೊದಲು ಈಕೆ ಜನರಿಗೆ ನಂಬಿಸಿದ್ದಾಳೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸಹಿ ಇರುವಂತೆ ನಕಲಿ ಪತ್ರ ಸೃಷ್ಟಿಸಿಕೊಂಡು ಅದನ್ನು ತೋರಿಸಿದ್ದಾಳೆ. ಕಂತೆ ಕಂತೆ ಹಣದ ನೋಟುಗಳ ವಿಡಿಯೋಗಳನ್ನು ಕಳುಹಿಸಿ ಜನರನ್ನು ನಂಬಿಸಿದ್ದಳು. ಸುಲಭವಾಗಿ ಸಾಲ ಕೊಡುತ್ತೇನೆ. ಒಬ್ಬರಿಗೆ ಹತ್ತು ಲಕ್ಷ ಲೋನ್ ನೀಡಿದರೆ ಅದರಲ್ಲಿ ಐದು ಲಕ್ಷ ಸಬ್ಸಿಡಿ ಎಂದು ಹೇಳಿದ್ದಾಳೆ. ಆದರೆ ಲೋನ್ ಬೇಕು ಅಂದರೆ ಮೊದಲು ಹಣ ಡೆಪಾಸಿಟ್ ಮಾಡಬೇಕು ಎಂದು ಕಥೆ ಕಟ್ಟಿದ್ದಳು.

ಇದನ್ನು ನಂಬಿದ ಜನರು ಒಂದು ಗುಂಪು ಮಾಡಿಕೊಂಡು ಈಕೆಗೆ ಲಕ್ಷಾಂತರ ರೂಪಾಯಿ ಹಣ ನೀಡಿದ್ದರು. ಸಿಕ್ಕ ಸಿಕ್ಕ ಕಡೆಗಳಲ್ಲಿ ಸಾಲ ಮಾಡಿ ಹಣ ಕೊಟ್ಟಿದ್ದರು. ತಿಂಗಳುಗಳು ಕಳೆದರೂ ಲೋನ್ ಬಾರದೆ ಇದ್ದಾಗ ವಂಚಕಿ ಪವಿತ್ರಾಳ ಕಳ್ಳಾಟ ಬಯಲಾಗಿದೆ. ಸಾಲದ ಸುಳಿಗೆ ಸಿಲುಕಿದ ಅಮಾಯಕ ಜನರು ಬೀದಿಪಾಲಾಗಿದ್ದಾರೆ. ಚಂದಾಪುರು, ಅತ್ತಿಬೆಲೆ, ಹೊಸೂರು, ಧರ್ಮಪುರಿ ಸೇರಿದಂತೆ ಹಲವು ಕಡೆಗಳಲ್ಲಿ ಈಕೆ ವಂಚನೆ ಮಾಡಿದ್ದು, ನೂರಾರು ಮಂದಿಗೆ  ಪಂಗನಾಮ ಹಾಕಿದ್ದಾಳೆ.

ಸೂರ್ಯನಗರದ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ವಂಚನೆ ಕುರಿತು ಪ್ರಕರಣ ದಾಖಲಾಗಿದೆ. ವಂಚಕಿ ಪವಿತ್ರಾ ಹಾಗೂ ಆಕೆಯ ಸಹಚರರಾದ ಪ್ರವೀಣ್, ಯಲ್ಲಪ್ಪ, ಶೀಲಾ, ರುಕ್ಮಿಣಿ, ರಾಧಾ, ಮಮತಾ, ನೆಹರೂಜಿ, ಶರತ್ ಕುಮಾರ್, ಸತೀಶ್, ಮಂಜುಳಾ, ಮಾರ್ಟಿನ್, ಹೇಮಲತಾ, ಶಾಲಿನಿ ಹಾಗೂ ಇತರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT