ರಾಜ್ಯ

ಕೇಂದ್ರದಿಂದ ರಾಜ್ಯಕ್ಕೆ ಬಂದಿರುವ ಅನುದಾನ ಕುರಿತು ಅಧಿವೇಶನದಲ್ಲೇ ಶ್ವೇತಪತ್ರ ಹೊರಡಿಸುತ್ತೇವೆ: ಡಿಕೆಶಿ

Manjula VN

ಬೆಂಗಳೂರು/ನವದೆಹಲಿ: ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಶ್ವೇತಪತ್ರ ಮಂಡಿಸಬೇಕೆಂದು ಬಿಜೆಪಿ ಒತ್ತಾಯಿಸುತ್ತಿದೆ. ನಾವು ಕೇಂದ್ರದಿಂದ ರಾಜ್ಯಕ್ಕೆ ಬಿಡುಗಡೆಯಾಗಿರುವ ಅನುದಾನಗಳ ಕುರಿತು ಅಧಿವೇಶನದಲ್ಲಿ ಶ್ವೇತಪತ್ರ ಮಂಡಿಸುತ್ತೇವೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುರುವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಂಸತ್ತಿನಲ್ಲಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಮಾತನಾಡಲೂ ಅವಕಾಶ ಕೊಡದೆ, ನಮ್ಮ ಧ್ವನಿ ಅಡಗಿಸುವ ಯತ್ನ ನಡೆದಿದೆ. ಜೊತೆಗೆ ಕೇಂದ್ರ ಸರ್ಕಾರ ರಾಜ್ಯದ ಪ್ರತಿ ಬಡವನ ಹೊಟ್ಟೆ ಮೇಲೆ ಹೊಡೆಯುತ್ತಿದೆ’ ಎಂದು ಕಿಡಿಕಾರಿದರು.

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಮಾತಿನ ನಂತರ ಕಲಾಪ ಅಂತ್ಯಗೊಳಿಸಿ, ರಾಜ್ಯದ ಪರ ಧ್ವನಿ ಎತ್ತಲು ಸುರೇಶ್ ಅವರಿಗೆ ಅವಕಾಶ ಕೊಡದೆ ಅನ್ಯಾಯ ಮಾಡಲಾಗಿದೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ರಾಜ್ಯದ ಪರವಾಗಿ ಮಾತನಾಡದೆ ಪಕ್ಷಪಾತಿಯಾಗಿ ಮಾತನಾಡುತ್ತಿದ್ದರು. ನಮ್ಮ ಪಕ್ಷದ ಎಲ್ಲಾ ಸಚಿವರು, ಶಾಸಕರು, ಸಂಸದರು ದೆಹಲಿಗೆ ಬಂದು ರಾಜ್ಯದ ಪರ ದನಿ ಎತ್ತಿದರು. ಈ ಬಗ್ಗೆ ಬಿಜೆಪಿ ಸಂಸದರಿಗೆ ನಾಚಿಕೆಯಾಗಬೇಕು’ ಎಂದು ಕಿಡಿಕಾರಿದರು.

ನಾವು ರಾಜ್ಯದ ಕೂಲಿ ಕಾರ್ಮಿಕರ ಪರವಾಗಿ ಹೋರಾಡುತ್ತೇವೆ. ಉದ್ಯೋಗ ಖಾತ್ರಿ ಯೋಜನೆ ಹಾಗೂ ರಾಜ್ಯದ ಅಭಿವೃದ್ದಿಗೆ ಬೇಕಾದ ಅನುದಾನಕ್ಕಾಗಿ ಹೋರಾಡುತ್ತೇವೆ. ಕರ್ನಾಟಕ ಸರ್ಕಾರ ನೀಡಿರುವ ಅಂಕಿ-ಅಂಶಗಳು ಸುಳ್ಳು ಎಂದು ಬಿಜೆಪಿಯವರು ಸುಳ್ಳು ಎನ್ನುತ್ತಿದ್ದಾರೆ. ನಾವು ಸತ್ಯ ಎನ್ನುತ್ತಿದ್ದೇವೆ. ಬಿಜೆಪಿಯವರು ಅಧಿವೇಶನದಲ್ಲಿ ಶ್ವೇತಪತ್ರ ಹೊರಡಿಸಬೇಕು ಎಂದು ಹೇಳುತ್ತಿದ್ದಾರೆ. ನಾವು ಶ್ವೇತ ಪತ್ರವನ್ನೇ ಅವರ ಮುಂದೆ ಇಡುತ್ತೇವೆ. ನಾವು ಯಾವುದೇ ಸುಳ್ಳು ಹೇಳುತ್ತಿಲ್ಲ ಎಂದು ತಿಳಿಸಿದರು.

‘ಬರಪರಿಹಾರವಾಗಿ ರಾಜ್ಯಕ್ಕೆ ರೂ.6 ಸಾವಿರ ಕೋಟಿಯನ್ನು ಮುಂಗಡವಾಗಿ ನೀಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ರಾಜ್ಯಕ್ಕೆ ಒಂದೇ ಒಂದು ರೂಪಾಯಿಯನ್ನು ಕೊಟ್ಟಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ಅಧಿವೇಶನದಲ್ಲಿ ಉತ್ತರ ನೀಡಲಿದ್ದಾರೆ ಎಂದರು.

SCROLL FOR NEXT