ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ಗೆ ಮಹಿಳೆ ಬಲಿ
ರಾಜಧಾನಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ಗೆ ಮಹಿಳೆಯೊಬ್ಬರು ಬಲಿಯಾದ ದಾರುಣ ಘಟನೆ ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣ ಬಳಿ ಶನಿವಾರ ನಡೆದಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ಗೆ ಮಹಿಳೆಯೊಬ್ಬರು ಬಲಿಯಾದ ದಾರುಣ ಘಟನೆ ಮಹಾಲಕ್ಷ್ಮೀ ಲೇಔಟ್ ಮೆಟ್ರೋ ನಿಲ್ದಾಣ ಬಳಿ ಶನಿವಾರ ನಡೆದಿದೆ.
ಆಶಾರಾಣಿ (62) ಮೃತ ಮಹಿಳೆಯಾಗಿದ್ದಾರೆ. ಶ್ರೀರಂಗಪಟ್ಟಣಕ್ಕೆ ಹೋಗಲು ಬೆಳಗಿನ ಜಾವ 5:40ರ ಸುಮಾರಿಗೆ ಮನೆ ಬಿಟ್ಟು ಮಹಾಲಕ್ಷ್ಮಿ ಲೇಔಟ್ ಬಸ್ ನಿಲ್ದಾಣಕ್ಕೆ ಬರುತ್ತಿದ್ದ ವೇಳೆ ಘಟನೆ ನಡೆದಿದೆ.
ನಸುಕಿನ ವೇಳೆ ಬೆಳಕು ಕಡಿಮೆ ಇದ್ದ ಕಾರಣ ಯಾವ ವಾಹನ ಡಿಕ್ಕಿ ಹೊಡೆದಿದೆ ಎಂಬುದು ಪತ್ತೆಯಾಗಿಲ್ಲ. ಅಪಘಾತ ಬಳಿಕ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಸಂಚಾರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.