ರಾಜ್ಯ

ED raid: ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ನಿವಾಸ, ಕಚೇರಿ ಸೇರಿ 4 ಕಡೆ ದಾಳಿ; ದಾಖಲೆಗಳ ವಶ

Sumana Upadhyaya

ಬಳ್ಳಾರಿ/ಬೆಂಗಳೂರು: ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಮತ್ತು ಅವರ ಸಂಬಂಧಿಕರ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ED) ಶನಿವಾರ ರಾಜ್ಯದ ಹತ್ತಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ.

34 ವರ್ಷದ ಶಾಸಕ ಭರತ್ ರೆಡ್ಡಿಯವರ ಬಳ್ಳಾರಿ ನಿವೇಶನ ಮತ್ತು ಕರ್ನಾಟಕ ಹಾಗೂ ತೆಲಂಗಾಣದ ಕೆಲವು ಸ್ಥಳಗಳಲ್ಲಿ ಶೋಧ ನಡೆಸಲಾಗುತ್ತಿದೆ. ಕೇಂದ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಬಳ್ಳಾರಿ ಮತ್ತು ಬೆಂಗಳೂರಿನಲ್ಲಿ ಭರತ್ ರೆಡ್ಡಿಯವರಿಗೆ ಸಂಬಂಧಪಟ್ಟ ಸ್ಥಳಗಳನ್ನು ಶೋಧಿಸಿದ್ದಾರೆ.

ಶಾಸಕ ಭರತ್ ರೆಡ್ಡಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣವು ಕರ್ನಾಟಕ ಪೊಲೀಸರು ದಾಖಲಿಸಿದ ಎಫ್‌ಐಆರ್ ಮತ್ತು ಇಡಿ ಸ್ಕ್ಯಾನರ್ ಅಡಿಯಲ್ಲಿ ಭೂ ವ್ಯವಹಾರಗಳ ಆರೋಪಗಳಿಂದ ಕೇಳಿಬಂತು. ಶಾಸಕರೊಂದಿಗೆ ನಂಟು ಹೊಂದಿರುವ ಕೆಲವು ಗಣಿಗಾರಿಕೆ ಮತ್ತು ಕಲ್ಲುಗಣಿಗಾರಿಕೆ ವ್ಯವಹಾರಗಳ ಸ್ಥಳಗಳಲ್ಲಿಯೂ ತನಿಖೆ ನಡೆಸಲಾಗಿದೆ.  

ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು ಬೆಳಗ್ಗೆ 6.30ಕ್ಕೆ ಏಕಕಾಲಕ್ಕೆ ಶಾಸಕ ನಾರಾ ಭರತ ರೆಡ್ಡಿ ಮನೆ, ಅವರ ತಂದೆಯ ಕಚೇರಿ, ಅವರ ಚಿಕ್ಕಪ್ಪ ಪ್ರತಾಪ ರೆಡ್ಡಿ ಮನೆ ಮತ್ತು ಕಚೇರಿಯ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.

ಇಡಿ ಅಧಿಕಾರಿಗಳ ನಾಲ್ಕು ತಂಡಗಳು ಶೋಧ ಕಾರ್ಯಾಚರಣೆಯಲ್ಲಿ ತೊಡಗಿವೆ. ಭರತ್ ರೆಡ್ಡಿ ಮತ್ತು ಅವರ ಸಂಬಂಧಿಕರ ಮೇಲೆ ಯಾವ ಪ್ರಕರಣದಲ್ಲಿ ದಾಳಿ ನಡೆಸಲಾಗುತ್ತಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ನಾರಾ ಭರತ್ ರೆಡ್ಡಿ ಕಾಂಗ್ರೆಸ್ ನಿಂದ ಮೊದಲ ಬಾರಿಗೆ ಶಾಸಕರಾಗಿದ್ದಾರೆ. ಕಳೆದ ಕೆಲ ವರ್ಷಗಳ ಹಿಂದೆ ಭರತ್‌ ರೆಡ್ಡಿ ಅವರ ನಿವಾಸ ಹಾಗೂ ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.

SCROLL FOR NEXT