ಸಂಗ್ರಹ ಚಿತ್ರ 
ರಾಜ್ಯ

ಕಳಸಾ-ಬಂಡೂರಿ ಯೋಜನೆಗೆ ಮತ್ತೊಂದು ವಿಘ್ನ: ಅರಣ್ಯ ಭೂಮಿ ಪರಿವರ್ತನೆಗೆ ಹುಲಿ ಸಂರಕ್ಷಣಾ ಪ್ರಾಧಿಕಾರ ನಕಾರ!

ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ನಡೆಯುತ್ತಿರುವ ಪ್ರಯತ್ನದಲ್ಲಿ ಕರ್ನಾಟಕಕ್ಕೆ ಭಾರಿ ಹಿನ್ನಡೆಯಾಗಿದೆ. ಯೋಜನೆ ಜಾರಿಗೆ 26.96 ಹೆಕ್ಟೇರ್ ಅರಣ್ಯ ಭೂಮಿಯನ್ನು ಪರಿವರ್ತಿಸುವ ಕರ್ನಾಟಕದ ಬೇಡಿಕೆಯನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ) ತಿರಸ್ಕರಿಸಿದೆ.

ಬೆಳಗಾವಿ: ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ನಡೆಯುತ್ತಿರುವ ಪ್ರಯತ್ನದಲ್ಲಿ ಕರ್ನಾಟಕಕ್ಕೆ ಭಾರಿ ಹಿನ್ನಡೆಯಾಗಿದೆ. ಯೋಜನೆ ಜಾರಿಗೆ 26.96 ಹೆಕ್ಟೇರ್ ಅರಣ್ಯ ಭೂಮಿಯನ್ನು ಪರಿವರ್ತಿಸುವ ಕರ್ನಾಟಕದ ಬೇಡಿಕೆಯನ್ನು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (ಎನ್‌ಟಿಸಿಎ) ತಿರಸ್ಕರಿಸಿದೆ.

ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಪ್ರಾಧಿಕಾರದ ಖಾಯಂ ಸಮಿತಿಯ 77ನೇ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಯೋಜನೆ ಅನುಷ್ಠಾನ ಮತ್ತು ಅದರ ಪರಿಣಾಮಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. 1972 ರ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 38 ರ ಪ್ರಕಾರ, ಪ್ರಾಧಿಕಾರವು ಸಲ್ಲಿಸಿದ ಪ್ರಸ್ತಾವನೆಗಳ ಮೇಲೆ ರ್ಧಾರಗಳನ್ನು ತೆಗೆದುಕೊಳ್ಳಲು ಶಾಶ್ವತ ಸಮಿತಿಗೆ ಅಧಿಕಾರವಿದೆ. ಹೀಗಾಗಿ ಕರ್ನಾಟಕ ಸರ್ಕಾರ ಎನ್‌ಟಿಸಿಎಗೆ ಮನವಿ ಸಲ್ಲಿಸಿತ್ತು.

ಈ ಪ್ರಸ್ತಾವನೆಯಲ್ಲಿ ಯೋಜನೆಗೆ ಅಗತ್ಯವಿರುವ 26.96 ಹೆಕ್ಟೇರ್ ಅರಣ್ಯ ಭೂಮಿ ಬಳಕೆಗೆ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಒಪ್ಪಿಗೆ ಕೂಡ ಸೇರಿದೆ ಎನ್ನಲಾಗಿದ್ದು, ಪ್ರಾಧಿಕಾರ ಸರ್ಕಾರದ ಮನವಿಯನ್ನು ತಿರಸ್ಕರಿಸಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

5 ವರ್ಷದ ಬಾಲಕನ ಜೊತೆ ಅಸ್ವಾಭಾವಿಕ S*x, ವಸತಿ ಶಾಲೆ ವಿದ್ಯಾರ್ಥಿಯ ಗಂಟಲು ಸೀಳಿದ ಗಾರ್ಡ್!

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

SCROLL FOR NEXT