ರಾಜ್ಯ

ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರೆಂಟ್ ಜಾರಿ

Vishwanath S

ಬೆಂಗಳೂರು: ಮೇಕೆದಾಟು ಪಾದಯತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. 

ರಾಮಲಿಂಗಾ ರೆಡ್ಡಿ ವಿರುದ್ಧ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿದ್ದರೂ ರಾಮಲಿಂಗಾರೆಡ್ಡಿ ನ್ಯಾಯಾಲಯಕ್ಕೆ ಹಾಜರಾಗದೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಜೆ.ಪ್ರೀತ್ ಅವರು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

SCROLL FOR NEXT