ಸಿಎಂ ಸಿದ್ದರಾಮಯ್ಯ 
ರಾಜ್ಯ

ದೆಹಲಿಗೆ ತೆರಳುತ್ತಿದ್ದ ಹುಬ್ಬಳ್ಳಿಯ ರೈತರನ್ನು ಬಂಧಿಸಿದ ಮಧ್ಯಪ್ರದೇಶ ಸರ್ಕಾರದ ಕ್ರಮ ಖಂಡನೀಯ: ಸಿಎಂ ಸಿದ್ದರಾಮಯ್ಯ

ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ...

ಬೆಂಗಳೂರು: ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಂಧಿಸಲಾದ ರಾಜ್ಯದ ನಮ್ಮ ಎಲ್ಲ ರೈತರನ್ನು ತಕ್ಷಣ ಬಿಡುಗಡೆಗೊಳಿಸಿ ನಾಳೆ ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಿಲು ಅವಕಾಶ ನೀಡಬೇಕು ಎಂದು‌ ಮಧ್ಯಪ್ರದೇಶ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ನಮ್ಮ ರೈತರನ್ನು ಬಂಧಿಸಿರುವುದು ಮಧ್ಯಪ್ರದೇಶದ ಸರ್ಕಾರವಾದರೂ ಈ  ದುಷ್ಕೃತ್ಯದ ಹಿಂದಿನ ಕ್ರಿಮಿನಲ್ ಮೆದುಳು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎನ್ನುವುದು ಸ್ಪಷ್ಟ.

ಈ ರೀತಿ ಬಂಧಿಸಿ, ಬೆದರಿಸಿ ರೈತರ ಹೋರಾಟವನ್ನು ಹತ್ತಿಕ್ಕಲಾಗದು. ಇಂತಹ ದಬ್ಬಾಳಿಕೆಯಿಂದ ಇನ್ನಷ್ಟು ರೈತರು ಬೀದಿಗಿಳಿಯಬಹುದೇ ಹೊರತು ಮಣ್ಣಿನ ಮಕ್ಕಳ ಹೋರಾಟ ನಿಲ್ಲದು. ಶಾಂತಿ-ಸುವ್ಯವಸ್ಥೆಯ‌ ಕಾಳಜಿಯನ್ನು ಕೇಂದ್ರ ಸರ್ಕಾರ ಹೊಂದಿದ್ದರೆ ತಕ್ಷಣ ರೈತರ ಬೇಡಿಕೆಗಳನ್ನು ಈಡೇರಿಸಿ ಸಮಸ್ಯೆ ಬಗೆಹರಿಸಬೇಕೇ ಹೊರತು ಈ ರೀತಿ ದಮನ-ದೌರ್ಜನ್ಯ ನಡೆಸಿ ರೈತರ ಬಾಯಿ ಮುಚ್ಚಿಸುವುದಲ್ಲ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

ಕೇಂದ್ರದಲ್ಲಿ ಇರಲಿ, ರಾಜ್ಯಗಳಲ್ಲಿ ಇರಲಿ‌ ಬಿಜೆಪಿ ಕೈಗೆ ಅಧಿಕಾರ ಬಂದ ಕೂಡಲೇ ಅವರು ಮೊದಲು ದಂಡ ಪ್ರಯೋಗ ಮಾಡುವುದು ಅನ್ನದಾತರ ಮೇಲೆ‌ ಎನ್ನುವುದಕ್ಕೆ ಇತಿಹಾಸ ಸಾಕ್ಷಿ. ಕರ್ನಾಟಕದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದ್ದ ಬಿಜೆಪಿ, ಗೊಬ್ಬರ ಕೇಳಿದ್ದ ರೈತರನ್ನು ನಿರ್ದಯವಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಗುಂಡಿಕ್ಕಿ ಕೊಂದಿತ್ತು. ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ಪ್ರತಿಭಟನಾನಿರತ ರೈತರ ಮೇಲೆ ನಡೆಸಿದ್ದ ದೌರ್ಜನ್ಯದಲ್ಲಿ ಹಲವಾರು ರೈತರು ಸಾವಿಗೀಡಾಗಿದ್ದರು.

ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ‌ ಮಾಡುವುದೇ ಅವರ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದಕ್ಕೂ ಮುನ್ನ ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಂಯುಕ್ತ ಕಿಸಾನ್ ಮೋರ್ಚಾ(ಎಸ್‌ಕೆಎಂ) ದಕ್ಷಿಣ ಭಾರತ ಸಂಚಾಲಕ ಶಾಂತಕುಮಾರ್ ಅವರು, ರೈಲಿನಲ್ಲಿ ರೈತರೊಂದಿಗೆ ಪ್ರಯಾಣಿಸುತ್ತಿದ್ದ ವೇಳೆ "ಪೋಲಿಸ್ ನಮ್ಮನ್ನು ಭೋಪಾಲ್ ನಿಲ್ದಾಣದಲ್ಲಿ ತಡೆದರು ಮತ್ತು ಈ ವೇಳೆ ನಮ್ಮ ಕೆಲವು ಸದಸ್ಯರು ಗಾಯಗೊಂಡಿದ್ದಾರೆ" ಎಂದರು. ಅಲ್ಲದೆ ತಾವು ಹೇಗಾದರೂ ತಪ್ಪಿಸಿಕೊಂಡು ರಾಷ್ಟ್ರ ರಾಜಧಾನಿ ತಲುಪಿರುವುದಾಗಿ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel