ಕರೆಮ್ಮ ನಾಯಕ್ 
ರಾಜ್ಯ

ಕರ್ತವ್ಯ ನಿರತ ಕಾನ್‌ಸ್ಟೆಬಲ್ ಮೇಲೆ ಹಲ್ಲೆ: ದೇವದುರ್ಗ ಜೆಡಿಎಸ್ ಶಾಸಕಿ ಪುತ್ರನ ವಿರುದ್ಧ ಎಫ್ಐಆರ್ ದಾಖಲು

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ತಡೆದ ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರ ಸೇರಿ ಸಂತೋಷ ಹಾಗೂ ಇತರ ಏಳು ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

ರಾಯಚೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ತಡೆದ ಕರ್ತವ್ಯ ನಿರತ ಪೊಲೀಸ್ ಪೇದೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೇವದುರ್ಗ ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರ ಸೇರಿ ಸಂತೋಷ ಹಾಗೂ ಇತರ ಏಳು ಮಂದಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಭಾನುವಾರ ದೇವದುರ್ಗ ಪೊಲೀಸ್ ಠಾಣೆಯಲ್ಲಿ ನಿಯೋಜಿತರಾಗಿರುವ ಕಾನ್‌ಸ್ಟೆಬಲ್ ಹನುಮಂತರಾಯ ಅವರು ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ತಡೆದು ವಾಹನ ಮತ್ತು ಅದರ ಚಾಲಕನನ್ನು ತನಿಖೆಗಾಗಿ ಠಾಣೆಗೆ ಕರೆದೊಯ್ದಾಗ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಪೊಲೀಸರ ಪ್ರಕಾರ, ಕಾನ್‌ಸ್ಟೆಬಲ್‌ಗೆ ನಂತರ ಶಾಸಕಿಯ ಪುತ್ರ ಸಂತೋಷ್‌ನಿಂದ ಕರೆ ಬಂದಿದ್ದು, ಇನ್‌ಸ್ಪೆಕ್ಷನ್ ಬಂಗಲೆಯಲ್ಲಿ ಸಭೆ ನಡೆಸುವಂತೆ ಸೂಚಿಸಿದ್ದಾರೆ. ಅದರಂತೆ ಕಾನ್‌ಸ್ಟೆಬಲ್‌ ಹನುಮಂತರಾಯ ಅವರು ಪ್ರವಾಸಿ ಮಂದಿರ ತಲುಪಿದ ನಂತರ, ಜೆಡಿಎಸ್ ಕಾರ್ಯಕರ್ತರ ಗುಂಪು ಅವರನ್ನು ಥಳಿಸಿದೆ.

ಗಾಯಗೊಂಡ ಕಾನ್‌ಸ್ಟೆಬಲ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್‌ಸ್ಟೆಬಲ್ ನೀಡಿದ ದೂರಿನ ಆಧಾರದ ಮೇಲೆ ಸಂತೋಷ್ ಮತ್ತು ಘಟನೆಯಲ್ಲಿ ಭಾಗಿಯಾಗಿರುವ ಇತರ ಏಳು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಭಾನುವಾರ ಸಂಜೆ ದೇವದುರ್ಗ ಪೊಲೀಸ್ ಠಾಣೆಯ ಮುಂದೆ ಶಾಸಕಿ ಮತ್ತು ಅವರ ಬೆಂಬಲಿಗರು ತಮ್ಮ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದರು.

"ಈ ಪ್ರಕರಣದಲ್ಲಿ ಇನ್ನೂ ಯಾವುದೇ ಬಂಧನವಾಗಿಲ್ಲ. ಆದರೆ ನಾವು ಶೀಘ್ರದಲ್ಲೇ ಘಟನೆಯಲ್ಲಿ ಭಾಗಿಯಾಗಿರುವ ಸಂತೋಷ್ ಮತ್ತು ಇತರರನ್ನು ವಿಚಾರಣೆ ಮಾಡುತ್ತೇವೆ. ತನಿಖೆ ನಡೆಯುತ್ತಿದೆ" ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆ ಅಕ್ರಮ ಮರಳುಗಾರಿಕೆ ವಿರುದ್ಧ ಶಾಸಕಿ ಕರೆಮ್ಮ ನಾಯಕ್ ತೊಡೆ ತಟ್ಟಿದ್ದರು. ಆದ್ರೀಗ ಅಕ್ರಮ ಮರಳುಗಾರಿಕೆಗೆ‌ ಪುತ್ರನ ಮೂಲಕ ಕುಮ್ಮಕ್ಕು ನೀಡುತ್ತಿರುವ ಆರೋಪ ಕೇಳಿಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT