ರೋಹನ್ ಬೋಪಣ್ಣ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸನ್ಮಾನ 
ರಾಜ್ಯ

ಟೆನಿಸ್ ಆಟಗಾರ ರೋಹನ್ ಬೋಪಣ್ಣಗೆ ಸಿಎಂ ಸಿದ್ದರಾಮಯ್ಯ ಸನ್ಮಾನ: 50 ಲಕ್ಷ ರೂ. ಬಹುಮಾನ ಘೋಷಣೆ

ಇತ್ತೀಚೆಗೆ ಆಸ್ಟ್ರೇಲಿಯಾ ಮುಕ್ತ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ರೋಹನ್ ಬೋಪಣ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನಿಸಿ ಸನ್ಮಾನಿಸಿ 50 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ. 

ಬೆಂಗಳೂರು: ಇತ್ತೀಚೆಗೆ ಆಸ್ಟ್ರೇಲಿಯಾ ಮುಕ್ತ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ರೋಹನ್ ಬೋಪಣ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹ್ವಾನಿಸಿ ಸನ್ಮಾನಿಸಿ 50 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ. 

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ರೋಹನ್ ಬೋಪಣ್ಣ ಅವರ ಕುಟುಂಬದವರು ಹಾಜರಿದ್ದರು.

ಕಳೆದ ಜನವರಿ 27ರಂದು ಮೆಲ್ಬೋರ್ನ್ ನಲ್ಲಿ ನಡೆದ ಆಸ್ಟ್ರೇಲಿಯಾ ಓಪನ್​ ಟೆನಿಸ್​ ಟೂರ್ನಿಯ ಪುರುಷರ ಡಬಲ್ಸ್​ ಫೈನಲ್​(Australian Open Men’s Doubles Final) ಪಂದ್ಯದಲ್ಲಿ ರೋಹನ್ ಬೋಪಣ್ಣ ಮತ್ತು ಅವರ ಜತೆಗಾರ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡೆನ್‌ (Matthew Ebden) ಸೇರಿಕೊಂಡು ಇಟಲಿಯ ಸಿಮೋನ್​ ಬೊಲೆಲ್ಲಿ-ಆ್ಯಂಡ್ರಿಯಾ ವಸಸ್ಸೊರಿ ವಿರುದ್ಧ 7-6(7-0), 7-5 ನೇರ ಸೆಟ್​ಗಳಿಂದ ಗೆಲುವು ಸಾಧಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ