ಡಿಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಜೆಡಿಎಸ್ ದೂರು
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ಮಂಗಳವಾರ ದೂರು ನೀಡಿದೆ.
ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ಮಂಗಳವಾರ ದೂರು ನೀಡಿದೆ.
ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬೆಂಗಳೂರು ನಗರ ಜಿಲ್ಲೆ ಡಿಡಿಪಿಐ, ಬಿಇಒಗಳ ಜೊತೆ ಸಭೆ ಸೇರಿಸಿ ಪ್ರಚಾರ ಮಾಡುತ್ತಿರುವ ಕುರಿತು ದೂರು ಸಲ್ಲಿಸಿದ್ದಾರೆ.
ಇದನ್ನೂ ಓದಿ: ಡಿ.ಕೆ ಬ್ರದರ್ಸ್ ಕಟ್ಟಿ ಹಾಕಲು ಷಡ್ಯಂತ್ರ: ಜೆಡಿಎಸ್ -ಬಿಜೆಪಿಯಿಂದ ಏಜೆನ್ಸಿಗಳ ದುರ್ಬಳಕೆ; ಡಿಕೆ ಶಿವಕುಮಾರ್
ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಪ್ರಭಾವ ಬೀರುತ್ತಿದ್ದಾರೆ ಎಂದು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ದೂರು ನೀಡಿದೆ.
ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ದೂರು
ಬಿಜೆಪಿ ಹಿರಿಯ ನಾಯಕರ ಫೋಟೋ ಬಳಸಿ ಕರ್ನಾಟಕ ಕಾಂಗ್ರೆಸ್ ಫೇಸ್ಬುಕ್ ಪೇಜ್ನಲ್ಲಿ ಪೋಸ್ಟ್ ಮಾಡಿದ್ದ ಹಿನ್ನೆಲೆ ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹಾಗೂ ಕೆಪಿಸಿಸಿ ಫೇಸ್ಬುಕ್ ಹ್ಯಾಂಡ್ಲರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕೋರ್ಟ್ನಲ್ಲಿ ದೂರು ದಾಖಲು ಮಾಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.