ಡಿಕೆ.ಶಿವಕುಮಾರ್ 
ರಾಜ್ಯ

ಡಿ ಕೆ ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ವಾಪಸ್‌ ಪಡೆದ ಪ್ರಕರಣ: ಫೆ.29ಕ್ಕೆ ವಿಚಾರಣೆ ಮುಂದೂಡಿಕೆ

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಫೆಬ್ರವರಿ 29ಕ್ಕೆ ಮುಂದೂಡಿದೆ.

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಫೆಬ್ರವರಿ 29ಕ್ಕೆ ಮುಂದೂಡಿದೆ.

ಡಿ ಕೆ ಶಿವಕುಮಾರ್‌ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಡಾ. ಅಭಿಷೇಕ್‌ ಮನು ಸಿಂಘ್ವಿ ಅವರು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್‌ ಮತ್ತು ಉಮೇಶ್‌ ಎಂ. ಅಡಿಗ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ತಿಳಿಸಿದರು.

ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ ಅವರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು. ಈ ಮಧ್ಯೆ, ಲೋಕಾಯುಕ್ತ ಎಡಿಜಿಟಿ ಮಧ್ಯಪ್ರವೇಶಿಕೆ ಕೋರಿರುವ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, ಲೋಕಾಯುಕ್ತದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವೆಂಕಟೇಶ್‌ ಅರಬಟ್ಟಿ ಅವರಿಗೆ ನೋಟಿಸ್‌ ಪಡೆಯಲು ಸೂಚಿಸಲಾಗಿದೆ.

ಬಸನಗೌಡ ಪಾಟೀಲ್‌ ಯತ್ನಾಳ್‌ ಪರ ವಕೀಲ ವೆಂಕಟೇಶ್‌ ದಳವಾಯಿ ಅವರಿಗೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸಲು ನ್ಯಾಯಾಲಯ ಸೂಚಿಸಿತು. ಆಕ್ಷೇಪಣೆ, ಪ್ರತ್ಯುತ್ತರ ಸಲ್ಲಿಸಲು ಕಾಲಾವಕಾಶ ನೀಡಿ, ಅಂತಿಮವಾಗಿ ವಿಚಾರಣೆಯನ್ನು ಫೆಬ್ರವರಿ 29ಕ್ಕೆ ಮುಂದೂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT