ಸಿಎಂ ಸಿದ್ದರಾಮಯ್ಯ 
ರಾಜ್ಯ

ಹೈಕೋರ್ಟ್ ನಿಂದ 10 ಸಾವಿರ ರೂ. ದಂಡ: ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ(CM Siddaramaiah) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದೆ ಎಂಬ ಕಾರಣಕ್ಕಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ತಮ್ಮ ವಿರುದ್ಧ 10 ಸಾವಿರ ರೂಪಾಯಿ ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ(CM Siddaramaiah) ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ಹಾನಿಯಾಗಿದೆ ಎಂಬ ಕಾರಣಕ್ಕಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ತಮ್ಮ ವಿರುದ್ಧ 10 ಸಾವಿರ ರೂಪಾಯಿ ದಂಡ ವಿಧಿಸಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ.

ಏನಿದು ಪ್ರಕರಣ?: ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸಿದ್ದ ಅಂದಿನ ಸಚಿವ ಕೆ.ಎಸ್.‌ ಈಶ್ವರಪ್ಪ ಅವರ ವಿರುದ್ಧ 2022ರ ಏಪ್ರಿಲ್ 14ರಂದು ಕಾಂಗ್ರೆಸ್‌ ಪ್ರತಿಭಟನೆ ನಡೆಸಿತ್ತು. ಅದರ ನೇತೃತ್ವವನ್ನು ಆಗ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ವಹಿಸಿದ್ದರು.

ಮೃತ ಸಂತೋಷ್‌ ಬರೆದಿಟ್ಟಿದ್ದ ಡೆತ್‌ನೋಟ್‌ನಲ್ಲಿ ಅಂದಿನ ಸಚಿವ ಕೆ.ಎಸ್.‌ ಈಶ್ವರಪ್ಪ ಅವರ ಹೆಸರನ್ನು ಉಲ್ಲೇಖ ಮಾಡಲಾಗಿತ್ತು. ಹೀಗಾಗಿ ನೈತಿಕ ಹೊಣೆ ಹೊತ್ತು ಕೆ.ಎಸ್.‌ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ರೇಸ್ ವ್ಯೂ ಹೋಟೆಲ್ ಬಳಿ ಪ್ರತಿಭಟನೆಯನ್ನು ಕಾಂಗ್ರೆಸ್‌ ನಾಯಕರು ಮಾಡಿದ್ದರು. ಈ ವೇಳೆ ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿ ಪಡಿಸಿದ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ನಗರದ ಹೈ ಗ್ರೌಂಡ್ಸ್‌ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.

ತಮಗೆ ದಂಡ ವಿಧಿಸಿರುವುದು, ಕೋರ್ಟ್‌ಗೆ ಹಾಜರಾಗುವಂತೆ ಸೂಚನೆ ನೀಡಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರತಿಭಟನೆ ಕಾನೂನು ಬದ್ಧವಾಗಿದೆ ಎಂಬ ವಾದದೊಂದಿಗೆ ಅವರು ಸುಪ್ರೀಂಕೋರ್ಟ್‌ನಿಂದ ನ್ಯಾಯದಾನದ ನಿರೀಕ್ಷೆಯಲ್ಲಿ ಅರ್ಜಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT