ಜೆರೋಸಾ ಶಾಲೆಯ ಶಿಕ್ಷಕಿ 
ರಾಜ್ಯ

ಮಂಗಳೂರು: ಜೆರೋಸಾ ಘಟನೆ ಬೆನ್ನಲ್ಲೇ ಡಿಡಿಪಿಐ ವರ್ಗಾವಣೆ!

ಸಾರ್ವಜನಿಕ ಶಿಕ್ಷಣ ಇಲಾಖೆಯು ದಕ್ಷಿಣ ಕನ್ನಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ದಯಾನಂದ ಆರ್ ನಾಯ್ಕ್ ಅವರನ್ನು ಬುಧವಾರ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಕಲಬುರ್ಗಿ ಡಿಡಿಪಿಐ ಆಗಿದ್ದ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನೇಮಿಸಿದೆ.

ಮಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ದಕ್ಷಿಣ ಕನ್ನಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ದಯಾನಂದ ಆರ್ ನಾಯ್ಕ್ ಅವರನ್ನು ಬುಧವಾರ ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಕಲಬುರ್ಗಿ ಡಿಡಿಪಿಐ ಆಗಿದ್ದ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನೇಮಿಸಿದೆ.

ಹಿಂದೂ ಧರ್ಮ ಮತ್ತು ಅದರ ದೇವರುಗಳ ವಿರುದ್ಧ ಇಂಗ್ಲಿಷ್ ಶಿಕ್ಷಕಿಯೊಬ್ಬರು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಲಾದ ಸೇಂಟ್ ಜೆರೋಸಾ ಶಾಲೆಯ ಘಟನೆಯನ್ನು ನಾಯಕ್ ನಿರ್ವಹಿಸಿದ ರೀತಿಗೆ ವ್ಯಾಪಕ ಟೀಕೆಗಳು ವ್ಯಕ್ತವಾದ ನಂತರ ಈ ಬೆಳವಣಿಯಾಗಿದೆ. ಡಿಡಿಪಿಐ ನಾಯ್ಕ್ ಅವರು ಸೂಕ್ಷ್ಮ ವಿಷಯವನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ರಮಾನಾಥ್ ರೈ ಮಂಗಳವಾರ ಆರೋಪಿಸಿದ್ದರು. 

ಈ ಘಟನೆಗೆ ಸಿಪಿಐ(ಎಂ) ಮತ್ತು ಇತರ ಸಂಘಟನೆಗಳು ನಾಯಕ್ ಅವರನ್ನು ದೂಷಿಸಿದ್ದವು. ಅಲ್ಲದೇ, ಘಟನೆ ಬಗ್ಗೆ ತನಿಖೆ ನಡೆಸಲು ಅವರಿಗೆ ಅವಕಾಶ ನೀಡದಂತೆ ಸರ್ಕಾರವನ್ನು ಒತ್ತಾಯಿಸಿದ್ದವು. ನಾಯಕ್ ಅವರನ್ನು ಬೆಳಗಾವಿಯ ಸರ್ಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.

ಆರೋಪ ನಿರಾಕರಿಸಿದ ಮಂಗಳೂರು ಧರ್ಮಪ್ರಾಂತ್ಯ, ಬಿಜೆಪಿ ಶಾಸಕನ ವಿರುದ್ಧ ವಾಗ್ದಾಳಿ: ಈ ಮಧ್ಯೆ ಜೆರೋಸಾ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಮಂಗಳೂರು ಧರ್ಮಪ್ರಾಂತ್ಯ ಈ ಬಗ್ಗೆ ನ್ಯಾಯಕ್ಕಾಗಿ ಕೋರಿದೆ.  ಧಾರ್ಮಿಕ ಮುಖಂಡರಾದ ಜೆ ಬಿ ಸಲ್ದಾನ ಮತ್ತು ರಾಯ್ ಕ್ಯಾಸ್ಟಲಿನೊ ಅವರು ಶಿಕ್ಷಕಿ ವಿರುದ್ಧದ ಆರೋಪಗಳನ್ನು ಆಧಾರರಹಿತ ಎಂದು ಬಣ್ಣಿಸಿದ್ದಾರೆ.

ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಮುಖ್ಯಶಿಕ್ಷಕಿ ಭರವಸೆ ನೀಡಿದ ಬಳಿಕವೂ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಅವರು ಶಾಲೆಯ ಮುಂದೆ ಪ್ರತಿಭಟನೆ ನಡೆಸುವ ಮೂಲಕ ನ್ಯಾಯಯುತ ತನಿಖೆಯ ಸಾಂವಿಧಾನಿಕ ಪ್ರಕ್ರಿಯೆಯ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ ಹೇಳಿಕೆಯಲ್ಲಿ  ಆರೋಪಿಸಿದ್ದಾರೆ.

ಶಾಸಕರು ಮಹಿಳಾ ಸಿಬ್ಬಂದಿಯ ಮೇಲೆ ಹಗೆತನದ ವಾತಾವರಣ ಸೃಷ್ಟಿಸಿ ಕಿರುಕುಳ ನೀಡಲು ಆರಂಭಿಸಿದ್ದು, ಅಂತಿಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ವಿದ್ಯಾರ್ಥಿ ಸಮುದಾಯದ ಸುರಕ್ಷತೆಗಾಗಿ ಒತ್ತಡಕ್ಕೆ ಮಣಿದು ಶಿಕ್ಷಕಿಯನ್ನು ಅಮಾನತುಗೊಳಿಸಿದ್ದಾರೆ ಎಂದು ಅವರು ದೂರಿದ್ದಾರೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವಂತೆ  ಶಿಕ್ಷಕಿ ಅಂತಹ ಯಾವುದನ್ನೂ ಕಲಿಸಿಲ್ಲ ಅಥವಾ ಹೇಳಿಲ್ಲ ಎಂದು ಪತ್ರದಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿಗಳು, ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಆಯೋಗ ಈ ಬಗ್ಗೆ ನ್ಯಾಯಯುತ ತನಿಖೆ ನಡೆಸುವಂತೆ ಮಂಗಳೂರು ಧರ್ಮಪ್ರಾಂತ್ಯ ಮನವಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT