ಹಾಕಿ ಆಟಗಾರ ವರುಣ್ ಕುಮಾರ್ 
ರಾಜ್ಯ

ಪೋಕ್ಸೋ ಪ್ರಕರಣ: ಸಿಗದ ಭಾರತೀಯ ಹಾಕಿ ಆಟಗಾರ, ಖಾಲಿ ಕೈಯಲ್ಲಿ ವಾಪಸಾದ ಪೊಲೀಸರು!

ಪೋಕ್ಸೋ ಪ್ರಕರಣದಲ್ಲಿ ಬೆಂಗಳೂರು ಪೊಲೀಸರಿಗೆ ಬೇಕಾಗಿರುವ ಭಾರತೀಯ ಹಾಕಿ ಆಟಗಾರ ವರುಣ್ ಕುಮಾರ್ (28) ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಅವರ ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ತಂಡ ಖಾಲಿ ಕೈಯಲ್ಲಿ ವಾಪಸಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬೆಂಗಳೂರು ಪೊಲೀಸರಿಗೆ ಬೇಕಾಗಿರುವ ಭಾರತೀಯ ಹಾಕಿ ಆಟಗಾರ ವರುಣ್ ಕುಮಾರ್ (28) ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಅವರ ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ತಂಡ ಖಾಲಿ ಕೈಯಲ್ಲಿ ವಾಪಸಾಗಿದ್ದಾರೆ ಎಂದು ತಿಳಿದುಬಂದಿದೆ.

ವರುಣ್ ಕುಮಾರ್ ರನ್ನು ಕರೆತರಲು ತೆರಳಿದ್ದ ಎರಡು ಪೊಲೀಸ್ ತಂಡಗಳು ಬರಿಗೈಯಲ್ಲಿ ವಾಪಸಾಗಿದ್ದಾರೆ. ವರುಣ್ ಕುಮಾರ್ ಬಂಧನಕ್ಕೆ ಇನ್ನೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ) ಎಸ್ ಗಿರೀಶ್ TNIE ಗೆ ತಿಳಿಸಿದ್ದಾರೆ. ಆತನನ್ನು ಬಂಧಿಸಲು ಎರಡು ತಂಡಗಳನ್ನು ಕಳುಹಿಸಲಾಗಿತ್ತು. ಎರಡೂ ತಂಡಗಳು ಬರಿಗೈಯಲ್ಲಿ ವಾಪಸಾಗಿವೆ ಎಂದು ಅವರು ಹೇಳಿದರು.

ಅರ್ಜುನ ಪ್ರಶಸ್ತಿ ಪುರಸ್ಕೃತರಾದ ವರುಣ್ ಕುಮಾರ್ ಪಂಜಾಬ್ ಪೊಲೀಸ್‌ನಲ್ಲಿ ಡಿಎಸ್‌ಪಿ ಶ್ರೇಣಿಯ ಅಧಿಕಾರಿಯೂ ಆಗಿದ್ದಾರೆ. ಹೈದರಾಬಾದ್‌ನ 21 ವರ್ಷದ ವೃತ್ತಿಪರ ವಾಲಿಬಾಲ್ ಆಟಗಾರ್ತಿಯೊಬ್ಬರು ಅವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದರು. ಫೆಬ್ರವರಿ 5 ರಂದು ಬದುಕುಳಿದವರು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ವರುಣ್ ಕುಮಾರ್ ವಿರುದ್ಧ ದೂರು ದಾಖಲಿಸಿದ್ದರು. ಪೋಕ್ಸೋ ಜೊತೆಗೆ ಜ್ಞಾನಭಾರತಿ ಪೊಲೀಸರು ಆತನ ಮೇಲೆ ಅತ್ಯಾಚಾರ ಮತ್ತು ವಂಚನೆ ಆರೋಪವನ್ನೂ ದಾಖಲಿಸಿದ್ದಾರೆ.

ವರುಣ್ ತಾನು ಅಪ್ರಾಪ್ತ ವಯಸ್ಕಳೆಂದು ತಿಳಿದೇ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಆರಂಭಿಸಿದ್ದ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ತಾನು 16 ವರ್ಷ ವಯಸ್ಸಿನವಳಾಗಿದ್ದಾಗ 2017 ರಲ್ಲಿ SAI ನಲ್ಲಿ ವಾಲಿಬಾಲ್ ತರಬೇತಿಗಾಗಿ ಬಂದಿದ್ದೆ. SAI ಆವರಣದಲ್ಲಿರುವ ಮಹಿಳಾ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದೆ. 2018 ರಲ್ಲಿ ವರುಣ್ ತರಬೇತಿಗಾಗಿ SAI ಗೆ ಬಂದರು. ಇನ್ಸ್ಟಾಗ್ರಾಮ್ ಮೂಲಕ ವರುಣ್ ನನ್ನ ಸಂಪರ್ಕಕ್ಕೆ ಬಂದರು.  ತನ್ನ ಸ್ನೇಹಿತರ ಮೂಲಕ ನನ್ನನ್ನು ಭೇಟಿಯಾಗಲು ಯತ್ನಿಸಿದ್ದ ಎಂದು ಆರೋಪಿಸಿದ್ದಾರೆ. ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದು ಸ್ನೇಹ ಪ್ರೀತಿಯಾಗಿ ಬದಲಾಗಿದೆ. ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ ನಂತರ, ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದರು ಎಂದು ಆರೋಪಿಸಿದ್ದಾರೆ. 

ಜಯನಗರದಲ್ಲಿ ರಾತ್ರಿ ಊಟಕ್ಕೆ ಕರೆದುಕೊಂಡು ಹೋಗಿ ಹೋಟೆಲ್‌ನಲ್ಲಿ ಅತ್ಯಾಚಾರ ಎಸಗಿದ್ದಾನೆ. ಅಲ್ಲದೆ ಕಳೆದ ಐದು ವರ್ಷಗಳಿಂದ ಇವರಿಬ್ಬರ ನಡುವೆ ಸಂಬಂಧವಿತ್ತು ಎಂದು ಆರೋಪಿಸಿದ್ದಾರೆ. ಆಕೆ ವರುಣ್‌ನನ್ನು ಮದುವೆಗೆ ಒತ್ತಾಯಿಸಲು ಪ್ರಾರಂಭಿಸಿದಾಗ, ಆತ ತಮ್ಮಬ್ಬಿರ ನಡುವಿನ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಆಕೆ ಆರೋಪಿಸಿದ್ದಾರೆ. ಅಲ್ಲದೆ ಈಗ ತನ್ನ ಕರೆ ಮತ್ತು ಮಸೆಜ್ ಗಳಿಗೂ ಪ್ರತಿಕ್ರಿಯಿಸುವುದನ್ನು ನಿಲ್ಲಿಸಿದ್ದಾನೆ ಎಂದು ಆರೋಪಿಸಿದ್ದಾರೆ.

ಹಿಮಾಚಲ ಪ್ರದೇಶದವರಾದ ವರುಣ್ ಹಾಕಿಗಾಗಿ ಪಂಜಾಬ್‌ಗೆ ತೆರಳಿದ್ದರು. ಪ್ರಕರಣದ ತನಿಖೆಗಳು ನಡೆಯುತ್ತಿವೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT