ಸಂಸದ ಪ್ರತಾಪ್ ಸಿಂಹ 10 ವರ್ಷಗಳಲ್ಲಿ ತಂದಿರುವ ಹಾಗೂ ಕಾರ್ಯಗತ ಮಾಡಿರುವ ಪ್ರಮುಖ ಯೋಜನೆಗಳ “ರಿಪೋರ್ಟ್ ಕಾರ್ಡ್” ನ್ನು ಮಾಜಿ ಸಚಿವ ಅಶ್ವಥ್ ನಾರಾಯಣ ಬಿಡುಗಡೆ ಮಾಡಿದರು. 
ರಾಜ್ಯ

10 ವರ್ಷಗಳಲ್ಲಿ 11 ರೈಲು ತಂದಿದ್ದೀನಿ, ಮೈಸೂರು-ರಾಮೇಶ್ವರಂ 12ನೇ ರೈಲು ಬರಲಿದೆ: ಪ್ರತಾಪ್ ಸಿಂಹ

ಶೀಘ್ರದಲ್ಲಿಯೇ ಬೆಂಗಳೂರು-ಮೈಸೂರು ಮೆಟ್ರೋ ರೈಲು

ಮೈಸೂರು: ನನ್ನ ಸಂಸದ ಸೇವೆ ಅವಧಿಯಲ್ಲಿ ಕರ್ನಾಟಕಕ್ಕೆ 11 ರೈಲು ಸೇವೆ ತರಿಸಿದ್ದೇನೆ. 2014ಕ್ಕೂ ಮೊದಲು ಒಂದು ರೈಲು ಬಂದಿಲ್ಲ. ಶೀಘ್ರದಲ್ಲೇ 12ನೇ ಮೈಸೂರು-ರಾಮೇಶ್ವರಂ ರೈಲು ಬರಲಿದೆ ಎಂದು ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಘೋಷಿಸಿದ್ದಾರೆ.

ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಇಂದು ಮೈಸೂರು ಕೊಡಗು ಲೋಕಸಭಾ ಚುನಾವಣಾ ಕಾರ್ಯಾಲಯ ಉದ್ಘಾಟನೆ ಮಾಡಿದ ಅವರು, ಈ ವೇಳೆ ಮುಂದೆ ಬೆಂಗಳೂರು ಮೈಸೂರು ಮೆಟ್ರೋ ಬರಲಿದೆ ಎಂದರು. ಚುನಾವಣೆಗೆ ಹೋಗಬೇಕಾದರೆ ಏನು ಮಾಡುತ್ತೇವೆ? ಅಧಿಕಾರದಲ್ಲಿ ಇದ್ದಾಗ ಏನು ಮಾಡಿದ್ದೇವೆ. 10 ವರ್ಷದಲ್ಲಿ ನಾನು ಕೆಲಸ ಮಾಡಿದ ರಿಪೋರ್ಟ್ ಕಾರ್ಡ್ ನೀಡಿದ್ದೇನೆ. ಪ್ರಧಾನಿ ಮೋದಿ ಕೊಟ್ಟಿದ್ದೇನು? ಪ್ರತಾಪ್ ಸಿಂಹ ತಂದಿದ್ದೇನು? ಅನ್ನೋ ಬುಕ್‌ಲೆಟ್ ಇದರಲ್ಲಿ ಕೇಂದ್ರದ ಡಿಪಾಲ್ಟ್ ಯೋಜನೆ ಪಟ್ಟಿ ಇಲ್ಲಿ ಮಾಡಿಲ್ಲ. 2014ರ ಹಿಂದೆ ಒಂದು ಟ್ರೈನ್ ಬಂದಿಲ್ಲ. ನಾನು 11 ಟ್ರೈನ್ ತಂದಿದ್ದೇನೆ. 12ನೇ ರೈಲು ಸದ್ಯದಲ್ಲೇ ಬರಲಿದೆ ಎಂದು ತಿಳಿಸಿದರು.

ಬೊಮ್ಮಾಯಿ, ಯಡಿಯೂರಪ್ಪ ಅನುದಾನ ನೀಡಿದ್ದಾರೆ: ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಬಿ ಎಸ್ ಯಡಿಯೂರಪ್ಪನವರು ಸಾಕಷ್ಟು ಅನುದಾನ ನೀಡಿದ್ದಾರೆ. ಮುಂದೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆಗಲಿದೆ. ಮೈಸೂರು ಬೆಂಗಳೂರು ಮೆಟ್ರೋ ಬರಲಿದೆ. ಮೈಸೂರು ಚೆನ್ನೈ ಬುಲೆಟ್ ರೈಲು ಶೀಘ್ರವಾಗಿ ಆಗಲಿದೆ. ನಾನು ಮತ್ತೊಮ್ಮೆ ಆಶೀರ್ವಾದ ಕೇಳುತ್ತಿದ್ದೇನೆ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ. 2014, 2019ರಲ್ಲಿ ಜನ ನನ್ನನ್ನು ಗೆಲ್ಲಿಸಿದ್ದಾರೆ. ಸತತವಾಗಿ ಆಯ್ಕೆಯಾಗಿ ದಾಖಲೆ ಮಾಡಿದ್ದೇನೆ. ಪಕ್ಷ ಆಶೀರ್ವಾದ, ತೀರ್ಮಾನ ಮಾಡಿದರೆ ಜನರು ಆಶೀರ್ವಾದ ಮಾಡಿ ಮತ್ತೊಮ್ಮೆ ಮೂರನೇ ಬಾರಿಗೆ ಸಂಸದನಾಗಿ ಬರುತ್ತೇನೆ ಎಂದರು.

ಬಿಜೆಪಿ ಗೆಲುವು ನಿಶ್ಚಿತ: ಬಿಜೆಪಿ, ಜೆಡಿಎಸ್​​​ ಮೈತ್ರಿಯಾಗಿ ಕೆಲಸ ಮಾಡುವ ಜವಾಬ್ದಾರಿಯಿದೆ. ಮೈಸೂರು ಲೋಕಸಭಾ ಕ್ಷೇತ್ರವನ್ನು ನಿಶ್ಚಿತವಾಗಿ ನಾವು ಗೆಲ್ಲುತ್ತೇವೆ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಎಸ್​​​.ಎ ರಾಮದಾಸ್​​ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!