ಸಾಂದರ್ಭಿಕ ಚಿತ್ರ Representational image
ರಾಜ್ಯ

5 ಲಕ್ಷ ಕೊಡದಿದ್ದರೆ ಅಳಿಯನಿಗೆ ನಗ್ನ ಫೋಟೋ ಕಳಿಸ್ತೀನಿ: ಜೈಲಿನಲ್ಲಿದ್ದುಕೊಂಡೆ ರೌಡಿಯಿಂದ ಮಹಿಳೆಗೆ ಬ್ಲ್ಯಾಕ್ ಮೇಲ್!

ಜೈಲಿನಲ್ಲಿದ್ದುಕೊಂಡೆ ಮಹಿಳೆಗೆ ಹಣಕ್ಕಾಗಿ ರೌಡಿಯೊಬ್ಬ ಬ್ಲ್ಯಾಕ್‌ಮೇಲ್‌ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಯುವತಿಯೊಬ್ಬಳ ತಿರುಚಿದ ನಗ್ನ ಫೋಟೋ ಕಳಿಸಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾನೆ.

ಬೆಂಗಳೂರು: ಜೈಲಿನಲ್ಲಿದ್ದುಕೊಂಡೆ ಮಹಿಳೆಗೆ ಹಣಕ್ಕಾಗಿ ರೌಡಿಯೊಬ್ಬ ಬ್ಲ್ಯಾಕ್‌ಮೇಲ್‌ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಯುವತಿಯೊಬ್ಬಳ ತಿರುಚಿದ ನಗ್ನ ಫೋಟೋ ಕಳಿಸಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾನೆ.

ರೌಡಿ ಮನೋಜ್ ಅಲಿಯಾಸ್‌ ಕೆಂಚ ಬೆತ್ತಲೆ ಫೋಟೊ ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿದವನು. ಕಳೆದ ಆಗಸ್ಟ್‌ನಲ್ಲಿ ಈ ರೌಡಿ ಮನೋಜ್ ಮತ್ತವನ ಗ್ಯಾಂಗ್ ಯುವತಿಯ ತಾಯಿಗೆ ಫೋಟೊ ಕಳಿಸಿ ಹಣ ಕಿತ್ತಿತ್ತು. ʼಹಣ ಕೊಡದಿದ್ದರೆ ನಿನ್ನ ಮಗಳ ಬೆತ್ತಲೆ ಫೋಟೊ ನಿನ್ನ ಅಳಿಯನಿಗೆ ಕಳಿಸುವುದಾಗಿ ಬೆದರಿಕೆ ಹಾಕಿದ್ದ. ಹೀಗೆ ಫೋಟೊ ತೋರಿಸಿ ತಾಯಿಯಿಂದ 40 ಸಾವಿರ ಹಣ ಕಿತ್ತಿದ್ದ. ಅದರಂತೆ ಮಹಿಳೆ ತಾಯಿ ಚೋಟು ಎಂಬವನ ಖಾತೆಗೆ 20 ಸಾವಿರ ರೂ., ಮತ್ತೊಬ್ಬನ ಖಾತೆಗೆ 20 ಸಾವಿರ ರೂ. ಹಣ ಹಾಕಿದ್ದರು.

ಫೆಬ್ರವರಿ 9ರಂದು ಮತ್ತೆ ಮನು ಸಹಚರ ರೌಡಿ ಕಾರ್ತಿಕ್ ಎಂಬಾತ ತಾಯಿಗೆ ಮತ್ತೆ ವಾಟ್ಸ್ಯಾಪ್ ಕರೆ ಮಾಡಿ ಬೆದರಿಕೆ ಹಾಕಿದ್ದಾನೆ. ಮನು ಕಡೆಯ ಹುಡುಗ ನಾನು. 5 ಲಕ್ಷ ರೂ. ಹಣ ಕೊಡದಿದ್ದರೆ ಫೋಟೊವನ್ನು ನಿನ್ನ ಅಳಿಯನಿಗೆ ಕಳಿಸ್ತೀನಿ ಎಂದು ಅವಾಜ್ ಹಾಕಿದ್ದಾನೆ. ಫೆಬ್ರವರಿ 12ರಂದು ರೌಡಿ ಮನು ಜೈಲಿನಿಂದಲೇ ಕರೆ ಮಾಡಿ ಧಮಕಿ ಹಾಕಿದ್ದಾನೆ.

ಫೋಟೊ ಮಾರ್ಫ್ ಮಾಡಿ ಬೆದರಿಸುತ್ತಿದ್ದಾರೆ ಎಂದು ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಮಹಿಳೆಯ ದೂರಿನ ಅನ್ವಯ ಮಾಹಿತಿ ತಂತ್ರಜ್ಞಾನ ಆ್ಯಕ್ಟ್‌ 67, ಐಪಿಸಿ ಸೆಕ್ಷನ್‌ 34, 384ರ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ಟೌನ್‌ ಪೊಲೀಸರು ಮತ್ತೊಬ್ಬ ಆರೋಪಿ ಕಾರ್ತಿಕ್‌ ಪತ್ತೆಗೆ ಬಲೆ ಬೀಸಿದ್ದಾರೆ. ಸದ್ಯ ಮನುವನ್ನ ಜೈಲಿನಿಂದ ಬಾಡಿವಾರೆಂಟ್ ಆಧಾರದ ಮೇಲೆ ಮೇಲೆ ವಶಕ್ಕೆ ಪಡೆಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!