ಸಾಂದರ್ಭಿಕ ಚಿತ್ರ Representational image
ರಾಜ್ಯ

ಮುಳ್ಳಯ್ಯನಗಿರಿಯಲ್ಲಿ ಕಾಡ್ಗಿಚ್ಚಿಗೆ ನೂರಾರು ಎಕರೆ ಅರಣ್ಯ ಭಸ್ಮ: ಬೆಂಕಿ ಹೊತ್ತಿಕೊಳ್ಳಲು ಚಾರಣಿಗನ ಸಿಗರೇಟ್ ಕಾರಣ?

ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಹಾಗೂ ದೇಶ-ವಿದೇಶಿಗರ ನೆಚ್ಚಿನ ಪ್ರವಾಸಿ ತಾಣವು ಆಗಿರುವ ಚಂದ್ರದ್ರೋಣ ಪರ್ವತಗಳ ಸಾಲಿನ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಕಾಡ್ಗಿಚ್ಚು ಹಬ್ಬಿದ್ದು, ಬೆಂಕಿಯ ಕೆನ್ನಾಲಿಗೆಗೆ 500 ಎಕರೆಯಷ್ಟು ಅರಣ್ಯ ಸಂಪೂರ್ಣ ಸುಟ್ಟು ಕರಕಲಾಗಿದೆ.

ಬೆಂಗಳೂರು: ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಹಾಗೂ ದೇಶ-ವಿದೇಶಿಗರ ನೆಚ್ಚಿನ ಪ್ರವಾಸಿ ತಾಣವು ಆಗಿರುವ ಚಂದ್ರದ್ರೋಣ ಪರ್ವತಗಳ ಸಾಲಿನ ಮುಳ್ಳಯ್ಯನಗಿರಿ ಬೆಟ್ಟದಲ್ಲಿ ಕಾಡ್ಗಿಚ್ಚು ಹಬ್ಬಿದ್ದು, ಬೆಂಕಿಯ ಕೆನ್ನಾಲಿಗೆಗೆ 500 ಎಕರೆಯಷ್ಟು ಅರಣ್ಯ ಸಂಪೂರ್ಣ ಸುಟ್ಟು ಕರಕಲಾಗಿದೆ.

ಕಾರಲ್ಲಿ ಹೋಗುವಾಗ ಚಾರಣಿಗನೊಬ್ಬ ಸಿಗರೇಟಿನ ತುಂಡು ಎಸೆದ ಪರಿಣಾಮ ಕಾಡ್ಗಿಚ್ಚು ಹೊತ್ತಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಕಂದಾಯ ಇಲಾಖೆಯೊಂದಿಗೆ ಮಾತುಕತೆ ನಡೆಸಿ ಕನಿಷ್ಠ ಮೂರು ತಿಂಗಳ ಕಾಲ ಅರಣ್ಯ ಪ್ರದೇಶ ಮತ್ತು ಸುತ್ತಮುತ್ತಲಿನ ಟ್ರೆಕ್ಕಿಂಗ್ ಮತ್ತು ಇತರ ಪ್ರವಾಸೋದ್ಯಮ ಚಟುವಟಿಕೆಗಳನ್ನು ನಿಲ್ಲಿಸಲು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರಣ್ಯ ಇಲಾಖೆಯು ಸಫಾರಿಗಳಲ್ಲಿಯೂ ಸಹ ಅರಣ್ಯ ಪ್ರದೇಶಗಳ ಮೂಲಕ ಹಾದುಹೋಗುವ ಜನರ ಸಂಚಾರವನ್ನು ನಿಯಂತ್ರಿಸುವ ಕೆಲಸ ಮಾಡಲಾಗುತ್ತಿದೆ.

ಕಂದಾಯ ಭೂಮಿಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳ ಮೇಲೆ ನಮಗೆ ಯಾವುದೇ ನಿಯಂತ್ರಣವಿಲ್ಲ. ಆದರೆ ಮುಳ್ಳಯ್ಯನಗಿರಿ ಕಾಡ್ಗಿಚ್ಚಿನಂತೆ ಅದರ ಪರಿಣಾಮಗಳು ಕಾಡುಗಳಲ್ಲಿ ಕಂಡುಬರುತ್ತವೆ.

ಸಕಲೇಶಪುರದಲ್ಲೂ ಇಂತಹುದೇ ನಿದರ್ಶನಗಳು ಕಂಡುಬಂದಿವೆ. ಸದ್ಯಕ್ಕೆ ಪ್ರವಾಸೋದ್ಯಮ ಮತ್ತಿತರ ಚಟುವಟಿಕೆಗಳನ್ನು ನಿಯಂತ್ರಿಸುವ ಅಥವಾ ನಿರ್ಬಂಧಿಸುವ ಅವಶ್ಯಕತೆಯಿದೆ. ಕಾಡಿನ ಹುಲ್ಲು ಒಣಗಿದೆ, ಒಂದು ಸಣ್ಣ ಬೆಂಕಿ ಕೂಡ ತೀವ್ರ ರೀತಿಯ ಹಾನಿಗೆ ಕಾರಣವಾಗುತ್ತದೆ. ಬರ ಮತ್ತು ಕಠಿಣವಾದ ಬೇಸಿಗೆಯ ಶಾಖ, ಬಲವಾಗಿ ಬೀಸುವ ಗಾಳಿಯೊಂದಿಗೆ ಸೇರಿಕೊಂಡು ಪರಿಸ್ಥಿತಿ ಇನ್ನಷ್ಟು ಹದಗೆಡುತ್ತಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದರು.

ಪ್ರವಾಸಿಗರು ಮತ್ತು ಚಾರಣಿಗರೇ ಕಾಡ್ಗಿಚ್ಚಿನ ಬಗ್ಗೆ ಮಾಹಿತಿ ನೀಡಿದ ನಿದರ್ಶನಗಳಿವೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನು ಹೇಗೆ ನಿಯಂತ್ರಿಸಬಹುದು ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಅವರು ಹೇಳಿದರು.

ಕಂದಾಯ ಜಮೀನುಗಳಲ್ಲಿ ಪ್ರವಾಸೋದ್ಯಮವನ್ನು ನಿಯಂತ್ರಿಸುವುದನ್ನು ಸ್ಥಳೀಯವಾಗಿಯೇ ನಿರ್ವಹಿಸಬೇಕು. ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ, ವಿವಿಧ ಪ್ರದೇಶಗಳ ನೆಲದ ವಾಸ್ತವತೆಯ ಆಧಾರದ ಮೇಲೆ ಪ್ರವಾಸಿಗರ ಮೇಲೆ ನಿರ್ಬಂಧ ಹೇರಲಾಗುವುದು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಪ್ರವಾಸೋದ್ಯಮ, ಕಂದಾಯ ಮತ್ತು ಅರಣ್ಯ ಇಲಾಖೆಗಳ ನಡುವೆ ಉತ್ತಮ ಮತ್ತು ಸುಗಮ ಹೊಂದಾಣಿಕೆಯ ಅಗತ್ಯವಿದೆ ಎಂದು ಕಂದಾಯ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕುಮಾರಪರ್ವತದಲ್ಲಿ ಜನಜಂಗುಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಜನವರಿ 26ರಂದು ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅವರು ಆನ್‌ಲೈನ್‌ನಲ್ಲಿ ಮುಂಗಡವಾಗಿ ಟ್ರೆಕ್ಕಿಂಗ್ ಬುಕ್ ಮಾಡದ ಹೊರತು ಅರಣ್ಯ ಪ್ರದೇಶದಲ್ಲಿ ಟ್ರೆಕ್ಕಿಂಗ್‌ಗೆ ಅನುಮತಿ ನೀಡುವುದಿಲ್ಲ ಎಂದು ಘೋಷಿಸಿದ್ದರು.

ಇದರ ಬೆನ್ನಲ್ಲೇ ಹಲವು ಪ್ರದೇಶಗಳಲ್ಲಿ ಚಾರಣ ಬಂದ್ ಮಾಡಲಾಗಿದೆ. ಆದಾಗ್ಯೂ, ಕುದುರೆಮುಖದಂತಹ ಜನಪ್ರಿಯ ಸ್ಥಳಗಳಲ್ಲಿ ಟ್ರೆಕ್ಕಿಂಗ್ ಮುಂದುವರಿಯುತ್ತಿದೆ, ಅಲ್ಲಿ ಆನ್‌ಲೈನ್ ಬುಕಿಂಗ್ ಗೆ ಮಾತ್ರ ಅವಕಾಶವಿದೆ. ಇದಲ್ಲದೆ, ಅರಣ್ಯದ ಹೊರಗಿನ ಪ್ರದೇಶಗಳ ಬೆಂಕಿಯ ಮೇಲೆ ನಿಗಾ ಇಡಲು, ಕಾಡ್ಗಿಚ್ಚು ತಗ್ಗಿಸುವ ವಿಭಾಗವು ಈಗ ಅರಣ್ಯದಿಂದ 500 ಮೀಟರ್ ವ್ಯಾಪ್ತಿಯಲ್ಲಿ ಸಂಭವಿಸುವ ಕಾಡ್ಗಿಚ್ಚಿಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಅರಣ್ಯ ಅಧಿಕಾರಿಯೊಬ್ಬರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT