ಆರೋಪಿ ಮಣಿ Express
ರಾಜ್ಯ

ಮಡಿಕೇರಿ: ಎರಡು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ

ಕೊಡಗು ಜಿಲ್ಲೆಯಲ್ಲಿ ಎರಡು ವರ್ಷದ ಬಾಲಕಿ ಮೇಲೆ 37 ವರ್ಷದ ವ್ಯಕ್ತಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ದಕ್ಷಿಣ ಕೊಡಗಿನ ಸಿದ್ದಾಪುರದಲ್ಲಿ ಬುಧವಾರ ಈ ಘಟನೆ ವರದಿಯಾಗಿದೆ. ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎರಡು ವರ್ಷದ ಬಾಲಕಿ ಮೇಲೆ 37 ವರ್ಷದ ವ್ಯಕ್ತಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ದಕ್ಷಿಣ ಕೊಡಗಿನ ಸಿದ್ದಾಪುರದಲ್ಲಿ ಬುಧವಾರ ಈ ಘಟನೆ ವರದಿಯಾಗಿದೆ. ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಮಣಿ (37) ಬಂಧಿತ ಆರೋಪಿಯಾಗಿದ್ದಾನೆ. ಈತ ಸಿದ್ದಾಪುರ ಸಮೀಪದ ಪ್ರತಿಷ್ಠಿತ ಎಸ್ಟೇಟ್‌ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ.

ಬುಧವಾರ ಯಾರು ಇಲ್ಲದ ಸಮಯದಲ್ಲಿ ಅಪ್ರಾಪ್ತ ವಯಸ್ಸಿನ ಸಂತ್ರಸ್ತೆಯ ಮನೆಗೆ ಭೇಟಿ ನೀಡಿದ ಮಣಿ, ಮದ್ಯದ ಅಮಲಿನಲ್ಲಿ ಅತ್ಯಾಚಾರವೆಸಗಿದ್ದಾನೆ. ಮಗುವಿನ ಜನನಾಂಗದ ಪ್ರದೇಶದಲ್ಲಿ ತೀವ್ರ ರಕ್ತಸ್ರಾವವಾಗಿದ್ದು, ಕಚ್ಚಿದ ಗುರುತುಗಳು ಕಂಡುಬಂದಾಗ ಘಟನೆ ಬೆಳಕಿಗೆ ಬಂದಿದೆ. ಅಪರಾಧ ಕೃತ್ಯದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ. ಆದರೆ, ಘಟನೆಯಿಂದ ಎಚ್ಚೆತ್ತ ಇತರೆ ಎಸ್ಟೇಟ್ ಕಾರ್ಮಿಕರು ಮಣಿಯನ್ನು ಹಿಡಿದು ಸಿದ್ದಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪ್ರಕರಣವನ್ನು ಮಡಿಕೇರಿಯ ಕೊಡಗು ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದ್ದು, ತನಿಖೆ ಮುಂದುವರಿದಿದೆ. ಸಂತ್ರಸ್ತೆಯ ಪೋಷಕರು ಬೇರೆ ರಾಜ್ಯದವರಾಗಿದ್ದು, ಜಿಲ್ಲೆಯಲ್ಲಿ ಎಸ್ಟೇಟ್ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಶಿಶುವಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಮಗು ಅಪಾಯದಿಂದ ಪಾರಾಗಿದೆ ಎಂದು ಪೊಲೀಸ್ ಮೂಲಗಳು ಖಚಿತಪಡಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT