ವಿಧಾನ ಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ. 
ರಾಜ್ಯ

ಕರ್ನಾಟಕ ಬಜೆಟ್ 2024: ರಾಜಧಾನಿ ಬೆಂಗಳೂರಿಗೆ ಸಿಕ್ಕಿದ್ದೇನು?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿರುವ 15ನೇ ಆಯವ್ಯಯದಲ್ಲಿ ರಾಜಧಾನಿ ಬೆಂಗಳೂರಿಗೆ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಬೆಂಗಳೂರು ಸುರಂಗ ಮಾರ್ಗ, ಮೆಟ್ರೋ ಸೇವೆ, ಬಿಎಂಟಿಸಿ ಬಸ್‌ ಸೇರಿ ಹತ್ತು ಹಲವು ಕೊಡುಗೆಗಳನ್ನು ಬೆಂಗಳೂರಿನ ಅಭಿವೃದ್ಧಿಗಾಗಿ ಘೋಷಣೆ ಮಾಡಲಾಗಿದೆ.

ಬೆಂಗಳೂರಿಗೆ ಸಿಕ್ಕಿದ್ದೇನು?

  • ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 20 ಲಕ್ಷ ಆಸ್ತಿಗಳ ಆಸ್ತಿ ತೆರಿಗೆ ದಾಖಲೆಗಳನ್ನು ಡಿಜಿಟಲೀಕರಣ

  • 2024 - 25 ನೇ ಮಾಲೀಕರಿಗೆ ಡಿಜಿಟಲ್ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳು ಲಭ್ಯ

  • ನಗರದ ಪ್ರಮುಖ ರಸ್ತೆಗಳಲ್ಲಿ 147 ಕಿ.ಮೀ ಉದ್ದದ ವೈಟ್ ಟಾಪಿಂಗ್ ಕಾಮಗಾರಿ

  • 1,700 ಕೋಟಿ ರೂ. ವೆಚ್ಚದಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿಗಳು ಡಿಸೆಂಬರ್ 2025 ರೊಳಗೆ ಪೂರ್ಣ

  • ಬೆಂಗಳೂರಿನಲ್ಲಿ ಸುರಂಗ ಮಾರ್ಗ (Tunnel) ನಿರ್ಮಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಬಗೆಹರಿಸಲು ನಿರ್ಧಾರ

  • ಹೆಬ್ಬಾಳ ಜಂಕ್ಷನ್ ನಲ್ಲಿ ಪ್ರಾಯೋಗಿಕವಾಗಿ ಟನೆಲ್ ನಿರ್ಮಾಣ

  • ರಾಜಕಾಲುವೆ ನಾಲೆಗಳ ಬಫರ್ ವಲಯದೊಳಗೆ ನಾಲಾ ಬಫರ್ ನ್ನು ನಿರ್ಮಾಣ ಬಳಸಿಕೊಂಡು ಸರ್ವಋತು ರಸ್ತೆಗಳನ್ನು ನಿರ್ಮಾಣ

  • 200 ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಕಿ.ಮೀ. ಉದ್ದದ ಬಫರ್ ರಸ್ತೆ

  • ಪ್ರಸಕ್ತ ಸಾಲಿನಲ್ಲಿ 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿ

  • ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಕಡಿಮೆಗೊಳಿಸಲು ಪೆರಿಫೆರಲ್ ರಿಂಗ್ ರೋಡ್

  • ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ 73 ಕಿ.ಮೀ. ಉದ್ದದ ರಸ್ತೆ

  • 27,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣ

  • ಬೆಂಗಳೂರು ನಗರದಲ್ಲಿ 250 ಮೀಟರ್ ಎತ್ತರದ ಸೈ-ಡೆಕ್ (Sky-Deck) ನಿರ್ಮಾಣ

  • BBMP. BMRCL BWSSB, BDA ಗಳ ವ್ಯಾಪ್ತಿಯಲ್ಲಿ ವಿದ್ಯುತ್ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆಗೊಳಿಸಲು ಸೋಲಾರ್ ಪಾರ್ಕ್ ನಿರ್ಮಾಣ

  • ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ ಸೇವೆಯೊಂದಿಗೆ ಮೆಟ್ರೋ ರೈಲು ಹಾಗೂ ಸಬ್-ಅರ್ಬನ್ ರೈಲು ಯೋಜನೆಗಳು ಸೇರಿ ಬಹುವಿಧ ಸಾರಿಗೆ ವ್ಯವಸ್ಥೆಗಳ ಒಗ್ಗೂಡಿಸುವಿಕೆ

  • ಬೆಂಗಳೂರಿನಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಬೆಂಗಳೂರಿನಲ್ಲಿ ಆಕರ್ಷಕ ಪ್ರವಾಸಿ ತಾಣ ನಿರ್ಮಾಣಕ್ಕೆ ಯೋಜನೆ ಮಾಡಲಾಗಿದೆ. ನಗರಾಭಿವೃದ್ಧಿ ಅಂಗಸಂಸ್ಥೆ ಬಿಬಿಎಂಪಿ, ಬಿಎಂಆರ್‌ಸಿಎಲ್‌, ಬಿಡಬ್ಲ್ಯುಎಸ್‌ಎಸ್‌ಬಿ, ಬಿಡಿಎನಲ್ಲಿ ಸೋಲಾರ್‌ ಪಾರ್ಕ್‌ ನಿರ್ಮಾಣ

  • 2025ರೊಳಗೆ ಹೊಸದಾಗಿ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ, ಮೆಟ್ರೋ ಯೋಜನೆ ಹಂತ-2, 2ಎ ಯೋಜನೆಯಡಿ ಹೊರವರ್ತುಲ ರಸ್ತೆ, ವಿಮಾನ ನಿಲ್ದಾಣ ಮಾರ್ಗವನ್ನು 2026ಕ್ಕೆ ಪೂರ್ಣ, ಅಂದಾಜು 15 ಸಾವಿರದ 661 ಕೋಟಿ ವೆಚ್ಚದಲ್ಲಿ ನಮ್ಮ ಮೆಟ್ರೋ ಹಂತ 3ಕ್ಕೆ ಆಡಳಿತಾತ್ಮಕ ಅನುಮೋದನೆ, ಸರ್ಜಾಪುರ ಅಗ್ರಹಾರ ಕೋರಮಂಗಳ ಡೈರಿ ವೃತ್ತ, ಮೇಖ್ರಿ ವೃತ್ತ ಹೆಬ್ಬಾಳ ಸಂಪರ್ಕಿಸುವ ಮಾರ್ಗ

  • ಬೈಯಪ್ಪನಹಳ್ಳಿಯಿಂದ ಚಿಕ್ಕಬಾಣವರ, ಹೀಲಲಿಗೆಯಿಂದ ರಾಜಾನಕುಂಟೆ ವರೆಗೆ 42.2 ಕಿಲೋ ಮೀಟರ್

  • ನಮ್ಮ ಮೆಟ್ರೋ ಹಂತ-3 ರಡಿ ಅಂದಾಜು 15,611 ಕೋಟಿ ರೂ. ವೆಚ್ಚ. ಇದಕ್ಕೆ ರಾಜ್ಯ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ್ದು. ಉಳಿದಿದ್ದನ್ನು ಕೇಂದ್ರ ಸರ್ಕಾರದ ಅನುಮೋದನೆ ನಿರೀಕ್ಷೆಯಲ್ಲಿದೆ.

  • 3 ಲಕ್ಷ 71 ಸಾವಿರ ಕೋಟಿ ಗಾತ್ರದ ಬಜೆಟ್‌ ಮಂಡನ ...

  • ಬಿ.ಬಿ.ಎಂ.ಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ

  • 200 ಕೋಟಿ ರೂ.ಗಳ ಮೊತ್ತದಲ್ಲಿ 110 ಹಳ್ಳಿಗಳಿಗೆ ಕುಡಿಯುವ ನೀರು ಸೌಲಭ್ಯ

  • ಬೆಂಗಳೂರು ನಗರ - ಜಿಲ್ಲೆಯನ್ನು ನಾಲ್ಕು ವಲಯಗಳನ್ನಾಗಿ ವಿಂಗಡನೆ

  • ನಗರದ ಹೊರವಲಯದ ನಾಲ್ಕು ಕಡೆಗಳಲ್ಲಿ 50 ರಿಂದ 100 ಎಕರೆ ಜಮೀನಿನಲ್ಲಿ ತ್ಯಾಜ್ಯ ಸಂಸ್ಕರಣೆ

  • 30 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟು ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಘಟಕ‌ ನಿರ್ಮಾಣ

  • ಬಿಬಿಎಂಪಿಯ ಅರಣ್ಯ, ಕೆರೆ ಮತ್ತು ತೋಟಗಾರಿಕಾ ವಿಭಾಗವನ್ನು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ನಿರ್ವಹಣಾ ವಿಭಾಗ ಎಂದು ಮರುನಾಮಕರಣ

  • ನಗರದಲ್ಲಿ ವಾತಾವರಣದ ಸ್ವಚ್ಛತೆಗಾಗಿ ಮರಗಳ - ಗಣತಿ,

  • ಕೆರೆ ಮತ್ತು ಉದ್ಯಾನವನಗಳ ತಂತ್ರಾಂಶ ಆಧಾರಿತ ಮೇಲ್ವಿಚಾರಣೆ. ಕೆರೆ ಮತ್ತು ಉದ್ಯಾನಗಳ ಅಭಿವೃದ್ಧಿ

  • ರಾತ್ರಿ 1ರ ವರೆಗೂ ವ್ಯಾಪಾರ ವಹಿವಾಟು ವಿಸ್ತರಣೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT