ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ ಬಜೆಟ್ 2024: ನೀರಾವರಿ ಅಭಿವೃದ್ಧಿಗೆ ಸಿಕ್ಕಿದ್ದೆಷ್ಟು?

ಬೆಂಗಳೂರು: ಕರ್ನಾಟಕ ರಾಜ್ಯದ ಸಮಗ್ರ ನೀರಾವರಿ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಬರೋಬ್ಬರಿ 19,179 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದಾರೆ.

ಈ ಪೈಕಿ ಯಾವೆಲ್ಲಾ ಯೋಜನೆಗಳಿಗೆ ಎಷ್ಟು ಅನುದಾನ ನಿಗದಿಯಾಗಿದೆ? ಯಾವೆಲ್ಲಾ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂಬ ವಿವರ ಇಂತಿದೆ...

  • ಕೃಷ್ಣಾ ಮೇಲ್ದಂಡೆ ಯೋಜನೆ ಹಂತ - 3 ಯೋಜನೆ ಅಡಿ ಉಪ ಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆ

  • ಕೃಷ್ಣಾ ನ್ಯಾಯಾಧಿಕರಣ - 2ರ ಅಂತಿಮ ತೀರ್ಪಿನ ಬಾಕಿ ಇರುವ ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರಕ್ಕೆ ಒತ್ತಾಯ

  • ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಡ

  • ಭದ್ರಾ ಮೇಲ್ದಂಡೆ ಯೋಜನೆ - ಕೇಂದ್ರ ಸರ್ಕಾರ ಘೋಷಿಸಿದ್ದ 5,300 ಕೋಟಿ ರೂ. ಅನುದಾನ ನೀಡುವಂತೆ ಆಗ್ರಹ

  • ಕಳಸಾ - ಬಂಡೂರಿ ನಾಲಾ ತಿರುವು ಯೋಜನೆ ಜಾರಿಗೆ ಸರ್ವ ಕ್ರಮ

  • ಕೊಪ್ಪಳ ಜಿಲ್ಲೆಯ ನವಲಿ ಬಳಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ ಯೋಜನಾ ವರದಿ ಸಿದ್ದ

  • ಕೆಆರ್‌ಎಸ್ ಡ್ಯಾಂನ ಬೃಂದಾವನ ಉದ್ಯಾನವನ ಅಭಿವೃದ್ಧಿಗೆ ಖಾಸಗಿ ಸಹಭಾಗಿತ್ವ

  • ಪ್ರಗತಿಯಲ್ಲಿ ಇರುವ ಏತ ನೀರಾವರಿ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲು ಪಣ

  • ಏತ ನೀರಾವರಿ ಯೋಜನೆಗಳು-ಬೂದಿಹಾಳ್-ಪೀರಾಪುರ ಹಂತ- 1, ಶ್ರೀ ವೆಂಕಟೇಶ್ವರ ಹಾಗೂ ಕೆಂಪವಾಡ ಬಸವೇಶ್ವರ, ಕೆರೆ ತುಂಬಿಸುವ ಯೋಜನೆಗಳಾದ ಮುಂಡಗೋಡ, ತುಪರೀಹಳ್ಳ, ಸಾಸಿವೆಹಳ್ಳಿ, ದೇವದುರ್ಗ ಹಾಗೂ ಗುರುಮಿಠಕಲ್ ಯೋಜನೆ ಶೀಘ್ರ ಪೂರ್ಣ

  • ಹೇಮಾವತಿ ಯೋಜನೆ: ವೈನಾಲೆಯಡಿ 5.45 ಕಿ. ಮೀ. ಉದ್ದದ ನಾಲೆ ಆಧುನೀಕರಣ, ತುಮಕೂರು ಶಾಖಾ ನಾಲೆಯಡಿ 166.90 ಕಿ. ಮೀ. ಉದ್ದದ ನಾಲೆ ಆಧುನೀಕರಣ

  • ಕರ್ನಾಟಕದ ನೀರಾವರಿ ನಿಗಮದ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮ

  • ರಾಜ್ಯಾದ್ಯಂತ ಏತ ನೀರಾವರಿ ಯೋಜನೆಗಳ ಅನುಷ್ಟಾನಕ್ಕೆ 7,280 ಕೋಟಿ ರೂ. ಅಂದಾಜು ಮೊತ್ತ.

  • ಕೃಷ್ಣ ಭಾಗ್ಯ ಜಲ ನಿಗಮದ ಅಡಿ ಏತ ನೀರಾವರಿ ಯೋಜನೆಗಳಿಗೆ 3,779 ಕೋಟಿ ರೂ.

  • ಕೊಪ್ಪಳದ ಯಲಬುರ್ಗಾ - ಕುಕನೂರು ತಾಲ್ಲುಕಿನ 38 ಕೆರೆಗಳ ಅಭಿವೃದ್ಧಿಗೆ 970 ಕೋಟಿ ರೂ.

  • ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ನಾರಾಯಣ ಪುರ ಬಲದಂಡೆ ಕಾಲುವೆಯಿಂದ ಅಂದಾಜು 990 ಕೋಟಿ ಮೊತ್ತದಲ್ಲಿ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆ

  • ಕುಡಿಯುವ ನೀರು, ಕೃಷಿ ಹಾಗೂ ಕೈಗಾರಿಕೆಗಳಿಗೆ ನೀರನ್ನು ಸಮರ್ಪಕವಾಗಿ ಪೂರೈಸಲು ಕೆರೆಗಳ ಅಭಿವೃದ್ಧಿ, ಚೆಕ್ ಡ್ಯಾಂ ಮತ್ತು ಬ್ರಿಡ್ಜ್ ಕಂ ಬ್ಯಾರೇಜ್ ನಂತಹ 115 ಕಾಮಗಾರಿಗಳನ್ನು 200 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಪ್ರಸಕ್ತ ಸಾಲಿನಲ್ಲಿ ಕೈಗೆತ್ತಿಕೊಳ್ಳಲಾಗುವುದು.ಪ್ರಗತಿಯಲ್ಲಿರುವ 455 ಕೋಟಿ ರೂ. ಮೊತ್ತದ ಕೆ.ಸಿ ವ್ಯಾಲಿ 2ನೇ ಹಂತದ ಉದ್ದೇಶಿತ 272 ಕೆರೆ ತುಂಬಿಸುವ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು.

  • ರಾಯಚೂರು ಜಿಲ್ಲೆಯ ಚಿಕ್ಕಲಪರ್ವಿ ಹತ್ತಿರ ತುಂಗಭದ್ರಾ ನದಿಗೆ ಬಿ.ಸಿ.ಬಿ ನಿರ್ಮಾಣ, ಮಾನ್ವಿ ತಾಲ್ಲೂಕಿನ ಕುರ್ಡಿ ಕೆರೆ ತುಂಬಿಸುವ ಯೋಜನೆ, ಮೈಸೂರು ಜಿಲ್ಲೆಯ ಕೆ. ಆರ್. ನಗರ ತಾಲ್ಲೂಕಿನ ಕೆಸ್ತೂರು ಕೊಪ್ಪಲು ಏತ ನೀರಾವರಿ, ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದ ಬಳಿ ಏತ ನೀರಾವರಿ, ಚಿತ್ತಾಪುರ ತಾಲ್ಲೂಕಿನ ಕೆರೆ ತುಂಬಿಸುವ ಯೋಜನೆ, ಸೊರಬ ತಾಲ್ಲೂಕಿನ ವರದಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್, ಜೇವರ್ಗಿ ತಾಲ್ಲೂಕಿನಲ್ಲಿ ಬಾಂದಾರು ಹಾಗೂ ಕೆರೆ ತುಂಬಿಸುವ ಕಾಮಗಾರಿ ಮತ್ತು ಕುಕನೂರು ಹಾಗೂ ಯಲಬುರ್ಗಾ ತಾಲ್ಲೂಕಿನಲ್ಲಿ ಕೆರೆ / ಬ್ರಿಡ್ಜ್ ಕಂ ಬ್ಯಾರೇಜ್ ಯೋಜನೆಗಳನ್ನು 850 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೆತ್ತಿಕೊಳ್ಳಲಾಗುವುದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT