ಕೆ.ಎಸ್.ಈಶ್ವರಪ್ಪ IANS
ರಾಜ್ಯ

ದೇಶದ್ರೋಹಿಗಳಿಗೆ ಗುಂಡಿಕ್ಕಿ ಕೊಲ್ಲಬೇಕು: ಕೆ.ಎಸ್.ಈಶ್ವರಪ್ಪ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ

ದಕ್ಷಿಣ ಭಾರತಕ್ಕಾಗಿ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಂಬಂಧಿಸಿದಂತೆ ಅಂತಹವರನ್ನು ಗುಂಡಿಟ್ಟು ಹತ್ಯೆ ಮಾಡಬೇಕು ಎಂದು ಹೇಳಿದ್ದ...

ಬೆಂಗಳೂರು: ದಕ್ಷಿಣ ಭಾರತಕ್ಕಾಗಿ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿದ್ದ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಂಬಂಧಿಸಿದಂತೆ ಅಂತಹವರನ್ನು ಗುಂಡಿಟ್ಟು ಹತ್ಯೆ ಮಾಡಬೇಕು ಎಂದು ಹೇಳಿದ್ದ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ನ್ಯಾಯಪೀಠ ಈ ಆದೇಶಗಳನ್ನು ಹೊರಡಿಸಿದ್ದು, ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ರಾಜಕಾರಣಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

'ನಮ್ಮ ನಾಯಕರು ಉತ್ತಮ ಭಾಷೆಯನ್ನು ಏಕೆ ಬಳಸುತ್ತಿಲ್ಲ? ಹೇಳಿಕೆಗಳನ್ನು ನೀಡುವಾಗ ಅವರು ಉತ್ತಮ ಸಂಸ್ಕೃತಿಯನ್ನು ಏಕೆ ಪ್ರತಿಬಿಂಬಿಸುವುದಿಲ್ಲ?' ಎಂದು ಅವರು ಪ್ರಶ್ನಿಸಿದರು.

ಕರ್ನಾಟಕ ರಾಜ್ಯದಲ್ಲಿ ವಿಭಿನ್ನ ಸಿದ್ಧಾಂತಗಳ ಜನರು ಇರುವುದರಿಂದ ರಾಜಕಾರಣಿಗಳು ಜಾಗರೂಕರಾಗಿರಬೇಕು. ಶಾಲಾ ಮಕ್ಕಳು ತಮ್ಮನ್ನು ಗಮನಿಸುತ್ತಿದ್ದಾರೆ ಎಂದು ಅವರಿಗೆ ತಿಳಿದಿರಬೇಕು ಎಂದು ನ್ಯಾಯಪೀಠ ಹೇಳಿದೆ.

ಬಿಜೆಪಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಈಶ್ವರಪ್ಪ, ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಮತ್ತು ಶಾಸಕ ವಿನಯ್ ಕುಲಕರ್ಣಿ ದೇಶ ವಿರೋಧಿಗಳು. "ದೇಶವನ್ನು ವಿಭಜಿಸುವ ಬಗ್ಗೆ ಮಾತನಾಡುವ ಅಂತಹ ವ್ಯಕ್ತಿಗಳನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೆ ತರುವಂತೆ ನಾನು ಪ್ರಧಾನಿ ಮೋದಿಯವರಿಗೆ ಮನವಿ ಮಾಡುತ್ತೇನೆ" ಎಂದು ಹೇಳಿದ್ದರು.

ಕಾಂಗ್ರೆಸ್ ನಾಯಕರು ನೀಡಿದ ದೂರಿನ ಆಧಾರದ ಮೇಲೆ ರಾಜ್ಯ ಪೊಲೀಸರು ಈಶ್ವರಪ್ಪ ವಿರುದ್ಧ ದಾವಣಗೆರೆ ಮತ್ತು ಯಶವಂತಪುರ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್