2024-25ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3.71 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ
2024-25ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3,71,383 ಕೋಟಿ ರೂ.ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3.8 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳು ಸೀಮಿತವಾಗಿರುವುದಿಲ್ಲ ಎಂದ ಸಿದ್ದರಾಮಯ್ಯ ಬಜೆಟ್ ಮಂಡನೆಯ ಆರಂಭದಲ್ಲೇ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷಗಳ ಟೀಕೆಯನ್ನು ಉಲ್ಲೇಖಿಸಿದರು. ಬಜೆಟ್ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳು ಕೇವಲ ಚುನಾವಣಾ ಗಿಮಿಕ್ ಅಲ್ಲ. 5 ಗ್ಯಾರಂಟಿ ಜಾರಿಯಿಂದ ಇಡೀ ಜಗತ್ತು ರಾಜ್ಯದತ್ತ ನೋಡುತ್ತಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ಸಂತಸಗೊಂಡಿದ್ದಾರೆ. 5 ಗ್ಯಾರಂಟಿ ಜಾರಿಯಿಂದ ಸರ್ಕಾರದಲ್ಲಿ ಹಣವಿಲ್ಲ ಎಂದು ಸುಳ್ಳು ಹೇಳ್ತಿದ್ದಾರೆ. ಕೇಂದ್ರ ಸರ್ಕಾರ ಮಾಡದ್ದನ್ನು ನಾವು ಮಾಡಿದ್ದೇವೆ. ಬಿಟ್ಟಿ ಗ್ಯಾರಂಟಿ, ದಿವಾಳಿ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಎಲ್ಲರನ್ನೂ ಒಳಗೊಂಡಂತೆ ರಾಜ್ಯ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.