ಡಾಲಿ ಧನಂಜಯ್ 
ರಾಜ್ಯ

ರಾಜಕೀಯಕ್ಕೆ ಡಾಲಿ ಧನಂಜಯ: ಮೈಸೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕೆ?

ಬೆಂಗಳೂರು: ವಿಧಾನಸಭಾ ಚುಣಾವಣೆಯಲ್ಲಿ ಬಹುಮತ ಪಡೆದ ಕಾಂಗ್ರೆಸ್ ಮುಂದಿನ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿದೆ. ಕಾಂಗ್ರೆಸ್‌ ಗೆ ಲೋಕಸಭಾ ಚುನಾವಣೆಯಲ್ಲಿ ಠಕ್ಕರ್‌ ಕೊಡುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದ್ದು, ಕಾಂಗ್ರೆಸ್‌ ಮುಂದಿನ ಲೋಕಸಭಾ ಚುಣಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ‌ ದೊಡ್ಡದೊಂದು ಸಂಚಲನ ಸೃಷ್ಟಿ ಮಾಡಲು ಕಾಂಗ್ರೆಸ್‌ ಕಾರ್ಯತಂತ್ರ ಸಿದ್ಧವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯ ಕ್ಷೇತ್ರವಾಗಿರುವ ಮೈಸೂರು ಕ್ಷೇತ್ರವನ್ನು ಗೆಲ್ಲಲು ಒಂದು ರಣತಂತ್ರವನ್ನು ಚರ್ಚಿಸಲಾಗುತ್ತಿದೆ. ಅದೇನೆಂದರೆ, ಇಲ್ಲಿ ಖ್ಯಾತ ಚಿತ್ರ ನಟ ʻಬಡವರ ಮಕ್ಕಳು ಬೆಳೀಬೇಕುʼ ಖ್ಯಾತಿಯ ನಟ ರಾಕ್ಷಸ ಡಾಲಿ ಧನಂಜಯ ಅವರನ್ನು ಕಣಕ್ಕಿಳಿಸಲು ಪ್ಲ್ಯಾನ್‌ ನಡೆದಿದೆ ಎಂದು ತಿಳಿದುಬಂದಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಸಂಸದರಾಗಿರುವವರು ಪ್ರತಾಪ್‌ ಸಿಂಹ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ನೇರವಾದ ಠಕ್ಕರ್‌ ಕೊಡುತ್ತಿದ್ದಾರೆ. ಒಂದು ಹಂತದಲ್ಲಿ ಪ್ರತಾಪ್‌ ಸಿಂಹ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಅವರೇ ಕಣಕ್ಕಿಳಿಯುತ್ತಾರೆ ಎಂಬ ಚರ್ಚೆ ನಡೆದಿತ್ತು.

ಪುತ್ರನನ್ನ ಲೋಕಸಭಾ ಕಣಕ್ಕಿಳಿಸುವ ನಿಟ್ಟಿನಲ್ಲಿ ಮೈಸೂರು ಜಿಲ್ಲೆ ಶಾಸಕರು, ಸಚಿವರು ಹಾಗೂ ಮುಖಂಡರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದ್ದರು. ಆದರೆ, ಸಭೆಯಲ್ಲಿ ಒಮ್ಮತ್ತದ ಅಭಿಪ್ರಾಯ ಕೇಳಿ ಬರದ ಹಿನ್ನೆಲೆ ಡಾಲಿ ಧನಂಜಯ ಅವರ ಹೆಸರು ಕೇಳಿ ಬಂದಿದೆ..

ಒಂದು ವೇಳೆ ಡಾಲಿ ಧನಂಜಯ ಅವರು ಮೈಸೂರು ಕ್ಷೇತ್ರದಲ್ಲಿ ಕಣಕ್ಕಿಳಿದರೆ ದೊಡ್ಡ ಮಟ್ಟದ ಸಂಚಲನವಂತೂ ಕ್ರಿಯೇಟ್ ಆಗಲಿದೆ. ಸಿದ್ದರಾಮಯ್ಯ ಜತೆ ಆಪ್ತ ಒಡನಾಟ ಹೊಂದಿರುವ ಡಾಲಿ ಅವರು ಜನಪ್ರಿಯ ನಟ ಆಗಿರುವ ಕಾರಣಕ್ಕೆ ಪ್ರಚಾರ ನಿರಾಯಾಸವಾಗಿ ನಡೆಯುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT