ಸಂಗ್ರಹ ಚಿತ್ರ 
ರಾಜ್ಯ

ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ - ಈ ದಿನದ ಸುದ್ದಿ ಮುಖ್ಯಾಂಶಗಳು: 17-02-24

ಮಂಗಳೂರು ಸೇಂಟ್ ಜೆರೋಸಾ ಶಾಲೆಯ ಘಟನೆ ದುರದೃಷ್ಟಕರ ಎಂದಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಕುರಿತು ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದರು.

ಸೇಂಟ್ ಜೆರೋಸಾ ಶಾಲೆ ಪ್ರಕರಣ: ಐಎಎಸ್ ಅಧಿಕಾರಿ ನೇತೃತ್ವದಲ್ಲಿ ತನಿಖೆಗೆ ಆದೇಶ

ಮಂಗಳೂರು ಸೇಂಟ್ ಜೆರೋಸಾ ಶಾಲೆಯ ಘಟನೆ ದುರದೃಷ್ಟಕರ ಎಂದಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಕುರಿತು ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದರು. ಜೆರೋಸಾ ಶಾಲೆ ಶಿಕ್ಷಕಿಯಿಂದ ಹಿಂದೂ ಧರ್ಮದ ಅವಹೇಳನ ಆರೋಪ ಸಂಬಂಧ ಸಮಗ್ರ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಆಕಾಶ್ ಕೆ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೂರು ಆಧರಿಸಿ ಎಫ್​ಐಆರ್​ ದಾಖಲಿಸಲಾಗಿದೆ. ಶೀಘ್ರದಲ್ಲೇ ಸತ್ಯಾಂಶ ತಿಳಿಯುತ್ತದೆ. ತುರ್ತಾಗಿ ತನಿಖೆ ಮಾಡಿ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದರು.

ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ

ಬಾಗಲಕೋಟೆಯ ಕಲಾದಗಿಯಲ್ಲಿ ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ವಿವಾದಕ್ಕೆ ಸಂಬಂಧಿಸಿದಂತೆ ರಂಭಾಪುರಿ ಶ್ರೀಗಳ ವಿರುದ್ಧ ಮಠದ ಭಕ್ತರು ಪ್ರತಿಭಟನೆ ನಡೆಸಿದ್ದು ಅಲ್ಲದೆ ಅವರ ಕಾರಿಗೆ ಚಪ್ಪಲಿ ಎಸೆದಿರುವ ಘಟನೆ ನಡೆದಿದೆ. ಉದಗಟ್ಟಿ ಗ್ರಾಮಕ್ಕೆ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಶ್ರೀಗಳ ಕಾರನ್ನು ಅಡಗಟ್ಟಿದ್ದ ಭಕ್ತರು, ವಿವಾದ ಕೋರ್ಟ್‌ನಲ್ಲಿದ್ದಾಗಲೇ ಗಂಗಾಧರ ಸ್ವಾಮೀಜಿ ಅವರಿಂದ ಮಠದ ದುರಸ್ತಿ, ಹೊಲದ ಉಳುಮೆ ಮಾಡಿದ್ದಕ್ಕೆ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ತಳ್ಳಾಟ, ನೂಕಾಟ ನಡೆದು ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಮಧ್ಯ ಪ್ರವೇಶಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದರು. ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯರಾದ ಬಳಿಕ ಅವರ ಉತ್ತರಾಧಿಕಾರಿಯನ್ನಾಗಿ ರಂಭಾಪುರಿ ಶ್ರೀಗಳು ಮಧ್ಯಸ್ಥಿಕೆ ವಹಿಸಿ ತಮ್ಮದೇ ಪೀಠದ ಶಿಷ್ಯರಾಗಿರುವ ಕೆ.ಎಂ​.ಗಂಗಾಧರ ಸ್ವಾಮೀಜಿಯನ್ನು ನೇಮಕ ಮಾಡಿದ್ದರು. ಗ್ರಾಮಸ್ಥರ ಸಮ್ಮುಖದಲ್ಲಿ ಉತ್ತರಾಧಿಕಾರಿ ನೇಮಕ ಮಾಡದೇ ಏಕಪಕ್ಷೀಯವಾಗಿ ರಂಭಾಪುರಿ ಶ್ರೀಗಳು ನಿರ್ಧಾರ ತೆಗೆದುಕೊಂಡಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮಹಿಳಾ ಪೊಲೀಸ್ ಪೇದೆ ಆತ್ಮಹತ್ಯೆಗೆ ಶರಣು

ಬೆಂಗಳೂರಿನ ಮೈಕೊ ಲೇಔಟ್ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ಆಗಿದ್ದ ರಾಮನಗರ ದ್ಯಾವಸಂದ್ರದ ಮಂಜುಶ್ರೀ ಕಳದ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2020-21‌ರಿಂದ ಪೊಲೀಸ್ ಸಿಬ್ಬಂದಿಯಾಗಿ ಕೆಲಸ‌ ಮಾಡುತ್ತಿದ್ದ ಮಂಜುಶ್ರೀ ಬೆಂಗಳೂರಿನ ಮೈಕೋ ಲೇಔಟ್​ನಲ್ಲಿ ಪೊಲೀಸ್ ಪೇದೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಂಜುಶ್ರೀ ಅವರು ಇತ್ತೀಚೆಗೆ ಶಿವಾಜಿನಗರ ಪೊಲೀಸ್ ಠಾಣೆಗೆ ನಿಯೋಜನೆಗೊಂಡಿದ್ದರು. ಶುಕ್ರವಾರ ದ್ಯಾವಸಂದ್ರ ಗ್ರಾಮಕ್ಕೆ ಬಂದಿದ್ದ ಅವರು, ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಸ್ಥಳಕ್ಕೆ ಹಾರೋಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮರಣೋತ್ತರ ಪರೀಕ್ಷೆಗೆ ಶವ ರವಾನಿಸಿದ್ದಾರೆ.

ಅಪಘಾತ ಮೂವರ ದುರ್ಮರಣ

ಲಾರಿ ಹಾಗೂ ಟಿಟಿ ವಾಹನ ನಡುವೆ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಚನ್ನಪಟ್ಟಣದ ಬೈರಾಪಟ್ಟಣದ ಚಾಮುಂಡೇಶ್ವರಿ ಮೆಡಿಕಲ್ ಕಾಲೇಜು ಬಳಿ ಅಪಘಾತ ಸಂಭವಿಸಿದ್ದು ಸೋಮಲಿಂಗಪ್ಪ, ಶಿವಲಿಂಗಪ್ಪ, ರಾಜೇಶ್ವರಿ ಮೃತ ದುರ್ದೈವಿಗಳು. ಅಪಘಾತದಲ್ಲಿ ಆರು ಮಂದಿಗೆ ಗಾಯಗಳಾಗಿದ್ದು ಅವರಿಗೆ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಗಂಭೀರ ಸ್ಥಿತಿಯಲ್ಲಿರುವವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT