ಸಂಗ್ರಹ ಚಿತ್ರ 
ರಾಜ್ಯ

ಕೇರಳದಲ್ಲಿ ಆನೆ ದಾಳಿಗೆ ಬಲಿಯಾದ ವ್ಯಕ್ತಿಗೆ ಪರಿಹಾರ ನೀಡಲು ಕರ್ನಾಟಕ ಸರ್ಕಾರ ನಿರ್ಧಾರ

ಕರ್ನಾಟಕದ ಆನೆಯೊಂದು ವಯನಾಡ್ ಗೆ ನುಗ್ಗಿ ಕೇರಳದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಸಾವನ್ನಪ್ಪಿದ ಕೇರಳದ ವ್ಯಕ್ತಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಬೆಂಗಳೂರು: ಕರ್ನಾಟಕದ ಆನೆಯೊಂದು ವಯನಾಡ್ ಗೆ ನುಗ್ಗಿ ಕೇರಳದ ವ್ಯಕ್ತಿಯೊಬ್ಬರ ಮೇಲೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಸಾವನ್ನಪ್ಪಿದ ಕೇರಳದ ವ್ಯಕ್ತಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಆನೆ ದಾಳಿಯಿಂದ ಮೃತಪಟ್ಟ ಕರ್ನಾಟಕದ ಜನರಿಗೆ ನೀಡುವ ಪರಿಹಾರಕ್ಕೆ ಸಮನಾದ ಪರಿಹಾರವನ್ನು ನೀಡಲು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ.

2023ರ ನವೆಂಬರ್ 30ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಆನೆಯನ್ನು ಸೆರೆಹಿಡಿದು ಬಂಡೀಪುರ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲಾಗಿತ್ತು. ಎರಡು ತಿಂಗಳ ನಂತರ, ಅದು ಕೇರಳದ ವಯನಾಡ್ ಜಿಲ್ಲೆಗೆ ದಾರಿ ತಪ್ಪಿದೆ ಎಂದು ತಿಳಿದುಬಂದಿದೆ.

ಫೆಬ್ರವರಿ 10 ರಂದು ಕೇರಳದ ವಯನಾಡ್ ಜಿಲ್ಲೆಯಲ್ಲಿ ಆನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಚುನಾಯಿತ ಪ್ರತಿನಿಧಿಗಳು ಮತ್ತು ಕೇರಳ ಸರ್ಕಾರವು ಕರ್ನಾಟಕ ಸರ್ಕಾರವನ್ನು ವಿಶಾಲ ಹೃದಯದಿಂದ ಆ ಪ್ರಕರಣಕ್ಕೆ ಪರಿಹಾರ ನೀಡುವಂತೆ ವಿನಂತಿಸಿದೆ ಎಂದು ಸಚಿವರ ಕಚೇರಿ ತಿಳಿಸಿದೆ.

ಖಂಡ್ರೆ ಅವರು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಪರಿಹಾರ ಪಾವತಿಸುವ ವಿಷಯವನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಅಜೀಶ್ ಕುಟುಂಬಕ್ಕೆ ಕರ್ನಾಟಕದ ಯಾವುದೇ ವ್ಯಕ್ತಿಗೆ ಸಮಾನವಾಗಿ ಪರಿಹಾರ ನೀಡಲು ಮುಖ್ಯಮಂತ್ರಿ ಒಪ್ಪಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel