‘ಮಸ್ಜಿದ್ ದರ್ಶನ’ದ ವೇಳೆ ಮಹಿಳೆ ಮತ್ತು ಅವರ ಮಗಳು ಬಿಲ್ಲಾಲ್ ಮಸೀದಿಯಲ್ಲಿ ನಮಾಜ್ ಮಾಡಿದರು. 
ರಾಜ್ಯ

ಅಧಿಕಾರಕ್ಕಾಗಿ ಧರ್ಮವನ್ನು ವಿಭಜಿಸುವವರು ದೊಡ್ಡ ದೇಶದ್ರೋಹಿಗಳು: ಸಾಹಿತಿ ಕೆ. ಮರುಳಸಿದ್ದಪ್ಪ

ಅಧಿಕಾರಕ್ಕಾಗಿ ಧರ್ಮವನ್ನು ವಿಭಜಿಸುವವರು ದೊಡ್ಡ ದೇಶದ್ರೋಹಿಗಳು ಎಂದು ಸಾಹಿತಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ ಮರುಳಸಿದ್ದಪ್ಪ ಅವರು ಶನಿವಾರ ಹೇಳಿದರು.

ಬೆಂಗಳೂರು: ಅಧಿಕಾರಕ್ಕಾಗಿ ಧರ್ಮವನ್ನು ವಿಭಜಿಸುವವರು ದೊಡ್ಡ ದೇಶದ್ರೋಹಿಗಳು ಎಂದು ಸಾಹಿತಿ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ ಮರುಳಸಿದ್ದಪ್ಪ ಅವರು ಶನಿವಾರ ಹೇಳಿದರು.

ಬನ್ನೇರುಘಟ್ಟ ರಸ್ತೆಯ ಬಿಲಾಲ್ ಮಸೀದಿಯಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು ಒಗ್ಗಟ್ಟು ಮೂಡಿಸಲು ಮತ್ತು ಸಮುದಾಯದ ಬಗ್ಗೆ ಇರುವ ಭಿನ್ನಾಭಿಪ್ರಾಯ ಮತ್ತು ತಪ್ಪು ಕಲ್ಪನೆಗಳನ್ನು ನಿವಾರಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮರುಳಸಿದ್ದಪ್ಪ ಅವರು ಭಾಗವಹಿಸಿ ಮಾತನಾಡಿದರು.

ಈ ಕಾರ್ಯಕ್ರಮವು ಪರಸ್ಪರ ಧರ್ಮದ ಬಗ್ಗೆ ತಿಳಿದುಕೊಳ್ಳಲು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಇತರ ಸಮುದಾಯಗಳ ಧಾರ್ಮಿಕ ಸ್ಥಳಗಳನ್ನು ಒಳಗೊಂಡ ಇಂತಹ ಕಾರ್ಯಕ್ರಮಗಳು ಸಮುದಾಯಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಮತ್ತು ಐಕ್ಯತೆ ಮೂಡಿಸಲು ವಿಚಾರ ವಿನಿಮಯ ಮಾಡಿಕೊಳ್ಳಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ನಮ್ಮದು ಎಲ್ಲರನ್ನೂ ಒಳಗೊಳ್ಳುವ ಸಂಸ್ಕೃತಿಯಾಗಿದ್ದು, ರಾಜಕೀಯ ಪಕ್ಷಗಳು ಹಾಗೂ ಕೆಲವು ಧಾರ್ಮಿಕ ಮುಖಂಡರು ಮಾಲಿನ್ಯ, ಗದ್ದಲ ಮತ್ತು ಅಸ್ಥಿರ ಪರಿಸ್ಥಿತಿಗಳನ್ನು ಸೃಷ್ಟಿಸುತ್ತಾರೆ. ನಮ್ಮ ಸಂವಿಧಾನ ಏಕತೆಯ ಬಗ್ಗೆ ಹೇಳುತ್ತದೆ. ಆದರೆ, ಚುನಾವಣೆ ಗೆಲ್ಲಲು ರಾಜಕೀಯ ಪಕ್ಷಗಳು ಭಾವನಾತ್ಮಕ ಮತ್ತು ಧಾರ್ಮಿಕ ವಿಚಾರಗಳನ್ನು ಬಳಸಿಕೊಳ್ಳುತ್ತವೆ. ಪಕ್ಷಗಳು ಅಧಿಕಾರ ಹಿಡಿಯಲು ಜನರನ್ನು ಮತ್ತು ಸಮುದಾಯಗಳನ್ನು ಒಡೆಯಬಾರದು. ಬದಲಾಗಿ ಅಭಿವೃದ್ಧಿಯ ಬಗ್ಗೆ ಮಾತನಾಡಬೇಕು. ಜನರ ನಡುವೆ ಒಡಕು ಮೂಡಿಸುವವರೇ ದೊಡ್ಡ ದೇಶದ್ರೋಹಿಗಳು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?