ವಸತಿ ಶಾಲೆಗಳಲ್ಲಿ ಬದಲಾದ ಘೋಷವಾಕ್ಯ
ವಸತಿ ಶಾಲೆಗಳಲ್ಲಿ ಬದಲಾದ ಘೋಷವಾಕ್ಯ 
ರಾಜ್ಯ

ವಸತಿ ಶಾಲೆಗಳಲ್ಲಿ ಘೋಷವಾಕ್ಯ ತೆಗೆದುಹಾಕುವ ಯಾವುದೇ ಆದೇಶ ಹೊರಡಿಸಿಲ್ಲ: ಸಚಿವ ಮಹಾದೇವಪ್ಪ ಸ್ಪಷ್ಟನೆ

Lingaraj Badiger

ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ `ಜ್ಞಾನದೇಗುಲವಿದು ಕೈಮುಗಿದು ಒಳಗೆ ಬನ್ನಿ’ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಘೋಷವಾಕ್ಯ ಬದಲಾವಣೆ ವಿವಾದ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಎಚ್ಚೆತ ಸರ್ಕಾರ, ಪ್ರಸ್ತುತ ಇರುವ ಘೋಷವಾಕ್ಯ ತೆಗೆದುಹಾಕುವ ಯಾವುದೇ ಆದೇಶ ನೀಡಿಲ್ಲ ಎಂದು ಸಚಿವ ಮಹಾದೇವಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳಲ್ಲಿ ಕಲಿಕೆಯ ದೃಷ್ಟಿಯಿಂದ ವೈಜ್ಞಾನಿಕತೆ, ವೈಚಾರಿಕತೆ ಮೂಡಿಸಲು ಜೊತೆಗೆ ಯೋಚನಾ ಶಕ್ತಿಯನ್ನು ಹರಡುವ ದೃಷ್ಟಿಯಿಂದ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಸಲಾಗಿದೆ. ಕೆಲವರು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಶಾಲೆಗಳಲ್ಲಿ ಹಾಕಿದರೆ ಹೇಗೆ ಎಂಬ ಆಲೋಚನೆ ಮುಂದಿಟ್ಟಿದ್ದಾರೆ. ಈ ಆಲೋಚನೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿರುತ್ತದೆ. ದೈರ್ಯವಾಗಿ ಪ್ರಶ್ನಿಸಿ ಎಂದರೆ ಕುವೆಂಪು ಅವರ ವಿಚಾರ ಕ್ರಾಂತಿಗೆ ಆಹ್ವಾನ ಪ್ರಬಂಧದ ಆಶಯ. ಕುವೆಂಪು ಅವರಿಗೆ ಅವಮಾನ ಮಾಡುವ ಎಸಗುವ ಯಾವುದೇ ಪ್ರಮಾದ ಇಲ್ಲಿ ಜರುಗಿರುವುದಿಲ್ಲ ಎಂದು ಹೇಳಿದ್ದಾರೆ.

ಶಿಕ್ಷಣದ ಉದ್ದೇಶವೇ ಮಕ್ಕಳಲ್ಲಿ ವೈಚಾರಿಕತೆಯ ಜೊತೆಗೆ, ಪ್ರಶ್ನಿಸುವ ಸಾಮರ್ಥ್ಯ ಬೆಳೆಸುವುದಾಗಿದೆ. ಐಸಾಕ್ ನ್ಯೂಟನ್, ಆಲ್ಬರ್ಟ್ ಐನ್ ಸ್ಟೀನ್ ನಿಂದ ಹಿಡಿದು ಬಹಳಷ್ಟು ವಿಜ್ಞಾನಿಗಳು ಇದನ್ನೇ ಪ್ರತಿಪಾದಿಸಿದ್ದು, ಕಲಿಯುವ ಮಕ್ಕಳಲ್ಲಿ ಪ್ರಶ್ನಿಸುವ ಸಾಮರ್ಥವನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಆಲೋಚನೆಗಳನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ನನ್ನ ಪ್ರಕಾರ ಇದೊಂದು ವಿವಾದದ ಅಂಶವೇ ಅಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

SCROLL FOR NEXT