ಬೆಂಗಳೂರು ಕರಗ
ಬೆಂಗಳೂರು ಕರಗ ಸಂಗ್ರಹ ಚಿತ್ರ
ರಾಜ್ಯ

ಏಪ್ರಿಲ್ 15ರಿಂದ 23ರವರೆಗೆ ಐತಿಹಾಸಿಕ ಬೆಂಗಳೂರು ಕರಗ

Srinivasamurthy VN

ಬೆಂಗಳೂರು: ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ (Bengaluru Karaga) ಮಹೋತ್ಸವಕ್ಕೆ ಡೇಟ್ ಫಿಕ್ಸ್ ಆಗಿದ್ದು, ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ಬೆಂಗಳೂರು ಕರಗ ಉತ್ಸವ ನಡೆಯಲಿದೆ ಎಂದು ತಿಳಿದುಬಂದಿದೆ.

ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ (A Gyanendra) ಅವರು ಕರಗ ಹೊರಲಿದ್ದಾರೆ ಎಂದು ಹೇಳಲಾಗಿದೆ. ಗ್ಯಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.

ನಿನ್ನೆ ಅಂದರೆ ಫೆ.18ರಂದು ನಡೆದ ಸಭೆಯಲ್ಲಿ ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ.ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ.

ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕರಗದ ಪೂಜಾರಿ ಎ. ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿ ಕರಗಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು, ಆದರೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಅವರು ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿ ಉತ್ಸವ ಮುಗಿಸಿ ಧರ್ಮರಾಯ ಸ್ವಾಮಿ ದೇವಾಲಯ ತಲುಪಿಸಿದ್ದರು.

SCROLL FOR NEXT