ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಸಿಎಂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ರಾಜ್ಯ

ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ: ಸಿಎಂ ಸಿದ್ದರಾಮಯ್ಯ

Manjula VN

ಹಾವೇರಿ: ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸುವುದು ಅಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದು, ಈ ಹೇಳಿಕೆ ಹಲವರ ಹುಬ್ಬೇರಿಸುವಂತೆ ಮಾಡಿದೆ.

ಭ್ರಷ್ಟಾಚಾರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಭ್ರಷ್ಟಾಚಾರ ಇಲ್ಲ ಎಂದು ಯಾರು ಹೇಳಿದರು? ಭ್ರಷ್ಟಾಚಾರ ಮುಕ್ತವಾಗುವುದು ಅಸಾಧ್ಯ. ಎಲ್ಲದರಲ್ಲೂ 'ಕಪ್ಪುಕುಳಗಳು' ಇದ್ದೇ ಇರುತ್ತವೆ, ಆದರೆ ಅಂತಹದ್ದನ್ನು ಗುರ್ತಿಸಿ, ಶಿಕ್ಷಿಸಲಾಗುತ್ತದೆ.

ಇದೇ ವೇಳೆ ಅಮಿತ್ ಶಾ ಅವರ ದಲಿತರು ಹಾಗೂ ಹಿಂದುಳಿದವರು ಈ ದೇಶದ ಸಂಪತ್ತು ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಕೇವಲ ಮುಸ್ಲಿಂ, ಕ್ರಿಶ್ಚಿಯನ್ನರು ಹಾಗೂ ದಲಿತರಷ್ಟೇ ಅಲ್ಲ 140 ಕೋಟಿ ಜನರೂ ಈ ದೇಶದ ಆಸ್ತಿಯೇ ಎಂದು ಹೇಳಿದರು.

ಬಳಿಕ ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಇತ್ತೀಚೆಗಷ್ಟೇ ಮಂಡಿಸಿದ ಬಜೆಟ್‌ನಲ್ಲಿ ತಮ್ಮ ವಿಧಾನಸಭಾ ಕ್ಷೇತ್ರ ವರುಣಾ ಕ್ಷೇತ್ರಕ್ಕೆ 2000 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ ಅವರು, ಯಡಿಯೂರಪ್ಪ ಅವರು ಈಗ ಯಾವ ಹುದ್ದೆಯಲ್ಲಿದ್ದಾರೆ? ಅನುದಾನ ಹಂಚಿಕೆ ಕುರಿತು ಮಾಧ್ಯಮ ವರದಿ ಸುಳ್ಳು ಎಂದು ಸ್ಪಷ್ಟಪಡಿಸಿದರು.

SCROLL FOR NEXT