ಟಿಪ್ಪು ಸುಲ್ತಾನ್ ಸಾಂದರ್ಭಿಕ ಚಿತ್ರ 
ರಾಜ್ಯ

ಟಿಪ್ಪು ಸುಲ್ತಾನ್ ಬ್ಯಾನರ್ ತೆರವಿಗೆ ಪೊಲೀಸ್ ನೋಟಿಸ್‌, ಡಿವೈಎಫ್‌ಐ ವಿರೋಧ

ತೊಕ್ಕೊಟ್ಟಿನಲ್ಲಿ ಫೆ.25ರಿಂದ ನಡೆಯಲಿರುವ ಕರ್ನಾಟಕ ರಾಜ್ಯ ಸಮ್ಮೇಳನದ ಅಂಗವಾಗಿ ಸ್ಥಳೀಯ ಕಚೇರಿಯಲ್ಲಿ ಹಾಕಲಾಗಿದ್ದ ಟಿಪ್ಪು ಸುಲ್ತಾನ್ ಬ್ಯಾನರ್ ತೆರವಿಗೆ ಡಿವೈಎಫ್‌ಐ ನಿರಾಕರಿಸಿದೆ.

ಮಂಗಳೂರು: ಇಲ್ಲಿನ ತೊಕ್ಕೊಟ್ಟಿನಲ್ಲಿ ಫೆ.25ರಿಂದ ನಡೆಯಲಿರುವ ಕರ್ನಾಟಕ ರಾಜ್ಯ ಸಮ್ಮೇಳನದ ಅಂಗವಾಗಿ ಸ್ಥಳೀಯ ಕಚೇರಿಯಲ್ಲಿ ಹಾಕಲಾಗಿದ್ದ ಟಿಪ್ಪು ಸುಲ್ತಾನ್ ಬ್ಯಾನರ್ ತೆರವಿಗೆ ಡಿವೈಎಫ್‌ಐ ನಿರಾಕರಿಸಿದೆ.

ಸಾರ್ವನಿಕ ಸ್ಥಳದಲ್ಲಿ ಬ್ಯಾನರ್ ಹಾಕಲು ಸಂಘಟನೆಯು ಪೂರ್ವಾನುಮತಿ ಪಡೆದಿಲ್ಲದ ಕಾರಣ ಕಚೇರಿ ಬಳಿ ಹಾಕಿರುವ ಟಿಪ್ಪು ಸುಲ್ತಾನ್ ಕಟೌಟ್ ತೆರವು ಮಾಡುವಂತೆ ಕೊಣಾಜೆ ಪೊಲೀಸ್ ಠಾಣಾ ನಿರೀಕ್ಷಕರು ಭಾರತ ಪ್ರಜಾಸತ್ತಾತ್ಮಕ ಯುವ ಒಕ್ಕೂಟದ (ಡಿವೈಎಫ್‌ಐ) ಹರೇಕಳ ಘಟಕದ ಅಧ್ಯಕ್ಷರಿಗೆ ಭಾನುವಾರ ನೋಟಿಸ್ ನೀಡಿದ್ದು, ಸಮಸ್ಯೆ ತಪ್ಪಿಸಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಬ್ಯಾನರ್ ತೆರವಿಗೆ ಪೊಲೀಸರು ಮನವಿ ಮಾಡಿದ್ದಾರೆ.

ಆದರೆ ರಾಜ್ಯ ಸಮ್ಮೇಳನದ ಅಂಗವಾಗಿ ಸಮಾಜ ಸುಧಾರಕರು, ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಇತರರ ಕಟೌಟ್, ಫ್ಲೆಕ್ಸ್ ಬ್ಯಾನರ್ ಹಾಕುತ್ತಿದ್ದು, ಬ್ಯಾನರ್ ಹಾಕುವ ಹಕ್ಕು ಸರ್ಕಾರಕ್ಕೆ ಇಲ್ಲ ಎಂದು ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ.ಇಮ್ತಿಯಾಜ್ ಹೇಳಿದ್ದಾರೆ. ರಾಜ್ಯದಲ್ಲಿ ಸರಕಾರ ಬದಲಾದರೂ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಸಂಘ ಮನೋಭಾವನೆಯಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯ ಸಮ್ಮೇಳನದ ಅಂಗವಾಗಿ ವಿವಿಧ ಸ್ಥಳಗಳಲ್ಲಿ ಹಾಕಲಾಗಿರುವ ಟಿಪ್ಪು, ರಾಣಿ ಅಬ್ಬಕ್ಕ, ಕೋಟಿ-ಚೆನಯ್ಯ ಮತ್ತು ಇತರರ ಕಟೌಟ್‌ಗಳನ್ನು ಡಿವೈಎಫ್‌ಐ ಕಾರ್ಯಕರ್ತರು ರಕ್ಷಿಸಲಿದ್ದಾರೆ ಎಂದು ಇಮ್ತಿಯಾಜ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?