ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ
ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ 
ರಾಜ್ಯ

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಸೋಲು: ವಿಧಾನಪರಿಷತ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು!

Vishwanath S

ಬೆಂಗಳೂರು: ವಿಧಾನಪರಿಷತ್ ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಸೋಲಾಗಿದೆ.

ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಪುಟ್ಟಣ್ಣ 1506 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಆರಂಭದಿಂದಲೂ ಮುನ್ನಡೆ ಕಾಯ್ದುಗೊಂಡಿದ್ದ ಪುಟ್ಟಣ್ಣ ಅಂತಿಮವಾಗಿ ಎಪಿ ರಂಗನಾಥ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ಪುಟ್ಟಣ್ಣ ಗೆಲುವು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.

ಪುಟ್ಟಣ್ಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ಕಳೆದ ಮಾರ್ಚ್ ನಲ್ಲಿ ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿದ್ದು ಇದೀಗ ಪುಟ್ಟಣ್ಣ ಅವರೇ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್​ನ ಪುಟ್ಟಣ್ಣ ಒಟ್ಟು 8,260 ಮತಗಳನ್ನು ಪಡೆದುಕೊಂಡಿದ್ದರೆ, ಜೆಡಿಎಸ್​-ಬಿಜೆಪಿ ಮೈತ್ರಿ ಅಭ್ಯರ್ಥಿ ಎಪಿ ರಂಗನಾಥ್ ಅವರಿಗೆ ಒಟ್ಟು 6753 ಮತಗಳು ಬಿದ್ದಿವೆ. ಇನ್ನು 1239 ಮತಗಳು ತಿರಸ್ಕೃತಗೊಂಡಿವೆ. 

SCROLL FOR NEXT