ಸಾಂದರ್ಭಿಕ ಚಿತ್ರ 
ರಾಜ್ಯ

ಗೋಕರ್ಣ: ಡ್ರಗ್ಸ್ ನಶೆಯಲ್ಲಿ ಪೊಲೀಸರ ಮೇಲೆ ಹಲ್ಲೆ; ಬೆಂಗಳೂರಿನ ಇಬ್ಬರು ಮಹಿಳಾ ಟೆಕ್ಕಿಗಳ ಬಂಧನ

ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತಿದ್ದ ಅವರು, ಮಹಾಬಲೇಶ್ವರ ದೇವಸ್ಥಾನದ ಬಳಿ ನಿಂತಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರಿಗೆ ತಮ್ಮ ಬಾಡಿಗೆ ವಾಹನದಿಂದ ಡಿಕ್ಕಿ ಹೊಡೆದಿದ್ದಾರೆ.

ಗೋಕರ್ಣ: ಮಾದಕ ದ್ರವ್ಯ ಸೇವಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್ ಡೆವಲಪರ್‌ಗಳನ್ನು ಗೋಕರ್ಣ ಪೊಲೀಸರು ಬಂಧಿಸಿದ್ದಾರೆ.

ಮಹಿಳೆಯರನ್ನು ಬಿಹಾರದ ಮುಂಗೇರ್‌ನ ಜಮಾಲ್‌ಪುರದ ಪಲ್ಲವಿ ಪ್ರಿಯಾ 29 ಮತ್ತು ಜಾರ್ಖಂಡ್‌ನ ಬೆರಾಮೊ, ಬೊಕಾರೊ ಮೂಲದ ಪ್ರಿಯಾ ರಾಯ್ (26) ಎಂದು ಗುರುತಿಸಲಾಗಿದೆ. ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತಿದ್ದ ಅವರು, ಮಹಾಬಲೇಶ್ವರ ದೇವಸ್ಥಾನದ ಬಳಿ ನಿಂತಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರಿಗೆ ತಮ್ಮ ಬಾಡಿಗೆ ವಾಹನದಿಂದ ಡಿಕ್ಕಿ ಹೊಡೆದಿದ್ದಾರೆ.

ಬಾಡಿಗೆ ವಾಹನವನ್ನು ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದುದನ್ನು ಕಂಡ ಪೊಲೀಸರು ತಡೆದಿದ್ದಾರೆ. ಮಹಿಳೆಯರು ಕಾನ್‌ಸ್ಟೆಬಲ್‌ಗೆ ಅಸಭ್ಯ ಭಾಷೆಯಲ್ಲಿ ನಿಂದಿಸಿ ಹಲ್ಲೆ ಮಾಡಲು ಪ್ರಾರಂಭಿಸಿದರು. ಸ್ಥಳದಲ್ಲಿ ಜಮಾಯಿಸಿದ ಜನರು ಕಾನ್‌ಸ್ಟೆಬಲ್‌ನನ್ನು ರಕ್ಷಿಸಿ ಮಹಿಳೆಯರನ್ನು ಠಾಣೆಗೆ ಕರೆದೊಯ್ದರು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ಠಾಣೆಯಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಅಲ್ಲಿಯೂ ಮಹಿಳೆಯರು ಮತ್ತೆ ತಮ್ಮ ಕೃತ್ಯವನ್ನು ಪುನರಾವರ್ತಿಸಿದರು. ನಂತರ ಪೊಲೀಸರು ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಗಾಂಜಾ ಸೇವಿಸಿರುವುದು ಬೆಳಕಿಗೆ ಬಂದಿದೆ.

ಈ ಸಂಬಂಧ ದೂರು ದಾಖಲಾಗಿದ್ದು, ಇಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದೀಗ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ. ಪುಣ್ಯ ಕ್ಷೇತ್ರವಾದ ಗೋಕರ್ಣದಲ್ಲಿ ಡ್ರಗ್ಸ್ ಸೇವನೆ ಹಾಗೂ ಅಕ್ರಮ ಪಾರ್ಟಿ ಮಾಡುವ ಘಟನೆಗಳು ಹೆಚ್ಚುತ್ತಿವೆ. ಗೋಕರ್ಣದಲ್ಲಿ ಮಾದಕ ವಸ್ತು ಸೇವನೆ ಮತ್ತು ಗಲಾಟೆ ಸೃಷ್ಟಿಸಿದ ಮಹಿಳೆಯರನ್ನು ಬಂಧಿಸಿರುವುದು ಇದೇ ಮೊದಲು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!