ಸಂಗ್ರಹ ಚಿತ್ರ 
ರಾಜ್ಯ

ಈ ದಿನದ ಸುದ್ದಿ ಮುಖ್ಯಾಂಶಗಳು: 20-02-24

ವಿಧಾನಪರಿಷತ್ ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಪುಟ್ಟಣ್ಣ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಪಿ ರಂಗನಾಥ್ ವಿರುದ್ಧ 1507 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಗೆ ಮುಖಭಂಗ; ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

ವಿಧಾನಪರಿಷತ್ ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಪುಟ್ಟಣ್ಣ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಪಿ ರಂಗನಾಥ್ ವಿರುದ್ಧ 1507 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​ನ ಪುಟ್ಟಣ್ಣ ಒಟ್ಟು 8,260 ಮತಗಳನ್ನು ಪಡೆದುಕೊಂಡಿದ್ದರೆ, ಜೆಡಿಎಸ್​-ಬಿಜೆಪಿ ಮೈತ್ರಿ ಅಭ್ಯರ್ಥಿ ಎಪಿ ರಂಗನಾಥ್ ಅವರಿಗೆ ಒಟ್ಟು 6753 ಮತಗಳು ಬಿದ್ದಿವೆ. ಇನ್ನು 1239 ಮತಗಳು ತಿರಸ್ಕೃತಗೊಂಡಿವೆ. ಪುಟ್ಟಣ್ಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ಕಳೆದ ಮಾರ್ಚ್ ನಲ್ಲಿ ಬಿಜೆಪಿಗೆ ರಾಜಿನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆದಿದ್ದು ಇದೀಗ ಪುಟ್ಟಣ್ಣ ಅವರೇ ಗೆಲುವು ಸಾಧಿಸಿದ್ದಾರೆ. ಪುಟ್ಟಣ್ಣ ಗೆಲುವು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಭ್ರಮ ಮನೆ ಮಾಡಿದೆ.

ಕೇರಳದ ವ್ಯಕ್ತಿಗೆ ರಾಜ್ಯ ಸರ್ಕಾರದಿಂದ ಪರಿಹಾರ: ಬಿಜೆಪಿ ವಾಗ್ದಾಳಿ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಲಹೆ ಹಿನ್ನೆಲೆಯಲ್ಲಿ ಕಾಡಾನೆ ದಾಳಿಯಿಂದ ಮೃತಪಟ್ಟ ಕೇರಳದ ವ್ಯಕ್ತಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡುವ ತೀರ್ಮಾನ ಪ್ರಕಟಿಸಿದ ಅರಣ್ಯ ಮಂತ್ರಿ ಈಶ್ವರ ಖಂಡ್ರೆ ನಡೆ ಈಗ ಚರ್ಚೆಗೆ ಗ್ರಾಸವಾಗಿದೆ. ವಯನಾಡು ಜಿಲ್ಲೆಯ ಮೃತ ಅಜೀಶ್‌ ಎಂಬುವವರು ಕರ್ನಾಟಕ ಮೂಲದ ಆನೆಯ ದಾಳಿಯಿಂದ ಮೃತಪಟ್ಟಿದ್ದರು. ಅಜೀಶ್‌ ಅವರ ಕುಟುಂಬಕ್ಕೆ ನೆರವು ನೀಡುವಂತೆ ಕಾಂಗ್ರೆಸ್‌ ನಾಯಕ ಹಾಗೂ ವಯನಾಡು ಸಂಸದರಾದ ರಾಹುಲ್‌ ಗಾಂಧಿ ಕರ್ನಾಟಕ ಸಚಿವರು, ಮುಖ್ಯಮಂತ್ರಿಗಳಿಗೆ ಸೂಚಿಸಿದ್ದರು. ಅದರಂತೆ ಪರಿಹಾರ ಘೋಷಿಸಲಾಗಿದ್ದು ಈ ಬಗ್ಗೆ ವಿಪಕ್ಷ ಬಿಜೆಪಿ ಕಿಡಿಕಾರಿದೆ. ವಿಪಕ್ಷ ನಾಯಕ ಆರ್ ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದು 'ಕನ್ನಡಿಗರ ಶ್ರಮದ ದುಡಿಮೆಯ ತೆರಿಗೆ–ರಾಹುಲ್ ಗಾಂಧಿಯ ವಯನಾಡ್‌ನ ಮಡಿಲಿಗೆ ಎಂದು ಟೀಕಿಸಿದ್ದಾರೆ. ಇನ್ನು ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿರುವ ಸಚಿವ ಪ್ರಿಯಾಂಕ್ ಖರ್ಗೆ ದಾಳಿ ಮಾಡಿದ್ದ ಆನೆ ಕರ್ನಾಟಕದ್ದು. ಹಾಸನದಲ್ಲಿ ಸೆರೆಹಿಡಿದು ರೇಡಿಯೋ ಕಾಲರ್ ಸಹ ಹಾಕಲಾಗಿತ್ತು. ಅದು ಬೇರೆ ರಾಜ್ಯಕ್ಕೆ ಹೋಗಿ ಒಬ್ಬ ವ್ಯಕ್ತಿ ಮೇಲೆ ದಾಳಿ ಮಾಡಿದೆ. ಹೀಗಾಗಿ ಮಾನವೀಯತೆ ದೃಷ್ಟಿಯಿಂದ ಪರಿಹಾರ ನೀಡಲಾಗಿದೆ ಎಂದು ಹೇಳಿದ್ದಾರೆ.

ಪಿಎಸ್ಐ ತನ್ವೀರ್ ಅಮಾನತಿಗೆ ವಕೀಲರ ಆಗ್ರಹ

ರಾಮನಗರದಲ್ಲಿ 40 ಮಂದಿ ವಕೀಲರ ವಿರುದ್ಧ ಪಿಎಸ್​ಐ ತನ್ವೀರ್ ಎಫ್​ಐಆರ್​ ದಾಖಲಿಸಿರುವ ವಿಚಾರ ಇದೀಗ ರಾಜಕೀಯ ಆಯಾಮ ಪಡೆದುಕೊಂಡಿದೆ. ಎಫ್​ಐಆರ್ ರದ್ದು ಮಾಡುವಂತೆ ಆಗ್ರಹಿಸಿ ವಕೀಲರು ಆರಂಭಿಸಿರುವ ಪ್ರತಿಭಟನೆ ಮುಂದುವರೆದಿದ್ದು ರಾಮನಗರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ವಕೀಲರು ಪ್ರತಿಭಟಿಸುತ್ತಿದ್ದಾರೆ. ಧರಣಿ ನಿರತ ವಕೀಲರು ಎಸ್‌ಐ ಅವರನ್ನು ಅಮಾನತು ಮಾಡುವವರೆಗೂ ಇಲ್ಲಿಂದ ಕದಲುವುದಿಲ್ಲ ಮತ್ತು ಬುಧವಾರ 'ವಿಧಾನಸೌಧ ಚಲೋ' ಚಳವಳಿ ನಡೆಸುವುದಾಗಿ ಹೇಳಿದ್ದಾರೆ. ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ತೀರ್ಪು ನೀಡಿದ ವಾರಾಣಸಿ ಜಿಲ್ಲಾ ಕೋರ್ಟ್ ನ್ಯಾಯಾಧೀಶರ ವಿರುದ್ಧ ಎಸ್​ಡಿಪಿಐ ಕಾರ್ಯಕರ್ತನೂ ಆಗಿರುವ ವಕೀಲ ಚಾಂದ್ ಪಾಷಾ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು ಇದು ವಕೀಲರ ನಡುವೆ ಜಗಳಕ್ಕೆ ಕಾರಣವಾಗಿತ್ತು. ನಂತರ ಚಾಂದ್ ಪಾಷಾ ಬೆಂಬಲಿಗರು ಪೊಲೀಸ್ ಠಾಣೆಗೆ ತೆರಳಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಿದ್ದು ಈ ಸಂಬಂಧ 40 ವಕೀಲರ ವಿರುದ್ಧ ಪಿಎಸ್ಐ ತನ್ವೀರ್ ಎಫ್ಐಆರ್ ದಾಖಲಿಸಿದ್ದರು.

ಗೋಕರ್ಣದಲ್ಲಿ ಬೆಂಗಳೂರು ಟೆಕ್ಕಿಗಳ ಬಂಧನ

ಮಾದಕ ದ್ರವ್ಯ ಸೇವಿಸಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬೆಂಗಳೂರಿನ ಇಬ್ಬರು ಸಾಫ್ಟ್‌ವೇರ್ ಟೆಕ್ಕಿಗಳನ್ನು ಗೋಕರ್ಣ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಿಹಾರದ ಜಮಾಲ್‌ಪುರದ ಪಲ್ಲವಿ ಪ್ರಿಯಾ ಮತ್ತು ಜಾರ್ಖಂಡ್‌ನ ಪ್ರಿಯಾ ರಾಯ್ ಎಂದು ಗುರುತಿಸಲಾಗಿದೆ. ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ್ದ ಯುವತಿಯರು ಮಹಾಬಲೇಶ್ವರ ದೇವಸ್ಥಾನದ ಬಳಿ ನಿಂತಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರಿ ಡಿಕ್ಕಿ ಹೊಡೆದಿದ್ದಾರೆ. ನಂತರ ಕಾರನ್ನು ತಡೆದ ಕಾನ್‌ಸ್ಟೆಬಲ್‌ಗೆ ಯುವತಿಯರು ಅಸಭ್ಯವಾಗಿ ನಿಂದಿಸಿ ಹಲ್ಲೆ ಮಾಡಲು ಪ್ರಾರಂಭಿಸಿದರು. ಈ ವೇಳೆ ಸ್ಥಳದಲ್ಲಿ ಜಮಾಯಿಸಿದ ಜನರು ಕಾನ್‌ಸ್ಟೆಬಲ್‌ನನ್ನು ರಕ್ಷಿಸಿ ಮಹಿಳೆಯರನ್ನು ಠಾಣೆಗೆ ಕರೆದೊಯ್ದಿದ್ದರು. ನಂತರ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅವರು ಗಾಂಜಾ ಸೇವಿಸಿರುವುದು ಪತ್ತೆಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್