ಸಹಕಾರ ಸಚಿವ ಕೆಎನ್ ರಾಜಣ್ಣ 
ರಾಜ್ಯ

ವಿಧಾನಸಭೆಯಲ್ಲಿ ಸಹಕಾರ ಸಂಘಗಳ ತಿದ್ದುಪಡಿ ಮಸೂದೆ ಅಂಗೀಕಾರ; ನಾಮನಿರ್ದೇಶಿತರ ಸಂಖ್ಯೆ ಹೆಚ್ಚಳಕ್ಕೆ ಸದನ ಅಸ್ತು

ಸರ್ಕಾರದ ನಾಮನಿರ್ದೇಶಿತರ ಸಂಖ್ಯೆಯನ್ನು ಮೂರಕ್ಕೆ ಹೆಚ್ಚಿಸುವ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ಮಸೂದೆ, 2024 ಅನ್ನು ಸೋಮವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ಬೆಂಗಳೂರು: ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಮೂಲಕ ರಾಜ್ಯದ ಅಪೆಕ್ಸ್ ಬ್ಯಾಂಕ್ ಸೇರಿದಂತೆ ಪ್ರಮುಖ ಸಹಕಾರ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿ ಮೀಸಲಾತಿ ಆಧಾರದ ಮೇಲೆ ಸರ್ಕಾರದ ನಾಮನಿರ್ದೇಶಿತರ ಸಂಖ್ಯೆಯನ್ನು ಮೂರಕ್ಕೆ ಹೆಚ್ಚಿಸುವ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ಮಸೂದೆ, 2024 ಅನ್ನು ಸೋಮವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಹಕಾರ ಸಂಘಗಳ ತಿದ್ದುಪಡಿ ಮಸೂದೆಯನ್ನು ರಾಜ್ಯ ಸರ್ಕಾರ ಇಂದು ವಿಧಾನಸಭೆಯಲ್ಲಿ ಅಂಗೀಕರಿಸಿದ್ದು, ಎಸ್‌ಸಿ/ಎಸ್‌ಟಿ ಸಮುದಾಯದಿಂದ ಒಬ್ಬರು, ಮಹಿಳೆ ಮತ್ತು ಸಾಮಾನ್ಯ ವರ್ಗದ ಒಬ್ಬರು ನಿರ್ದೇಶಕರಾಗಿರುತ್ತಾರೆ. ಈಗ 22 ಇರುವ ಅಪೆಕ್ಸ್ ಬ್ಯಾಂಕ್‌ನ ಆಡಳಿತ ಮಂಡಳಿಯ ಸಂಖ್ಯೆ ಇನ್ನುಮುಂದೆ 25ಕ್ಕೆ ಏರಲಿದ್ದು, ಪ್ರಮುಖ ನಿರ್ಧಾರ ತೆಗೆದುಕೊಳ್ಳುವಲ್ಲಿ ಸರ್ಕಾರ ಮೇಲುಗೈ ಸಾಧಿಸಬಹುದು.

ಕೆಲವು ಬಿಜೆಪಿ ಶಾಸಕರು ಮಸೂದೆಯನ್ನು ತೀವ್ರವಾಗಿ ವಿರೋಧಿಸಿದರು. ಸರ್ಕಾರ ಸಹಕಾರಿ ಕ್ಷೇತ್ರವನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. ಆದರೆ ಸಹಕಾರ ಸಚಿವ ಕೆಎನ್ ಎನ್ ರಾಜಣ್ಣ ಅವರು, ಅಂತಿಮವಾಗಿ ಕೆಲವು "ಲೋಪದೋಷಗಳು" ಇದ್ದರೆ, ಸರಿಪಡಿಸಲಾಗುವುದು ಎಂದು ಭರವಸೆ ನೀಡಿ ಮಸೂದೆಯನ್ನು ಅಂಗೀಕರಿಸಿದರು.

ಇನ್ನು ಚುನಾವಣೆಯಲ್ಲಿ ನಾಮನಿರ್ದೇಶಿತ ನಿರ್ದೇಶಕರಿಗೆ ಮತದಾನದ ಅಧಿಕಾರ ನೀಡುವ ಬಗ್ಗೆ ಬಿಜೆಪಿ ಶಾಸಕರು ಕಳವಳ ವ್ಯಕ್ತಪಡಿಸಿದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ಕ್ಷೇತ್ರದ ಮೇಲೆ ದೀರ್ಘಕಾಲೀನ ಪರಿಣಾಮವನ್ನು ಗಮನದಲ್ಲಿಟ್ಟುಕೊಂಡು ಕೆಲವು ಬದಲಾವಣೆಗಳನ್ನು ಸೂಚಿಸಿದರು. ಮಸೂದೆಯ ಪ್ರಕಾರ, ಸಾಮಾಜಿಕ ನ್ಯಾಯ ಮತ್ತು ಸಮಾಜದ ವಂಚಿತ ಮತ್ತು ಪ್ರಾತಿನಿಧ್ಯವಿಲ್ಲದ ವರ್ಗಗಳಿಗೆ ಸಹಕಾರ ಚಳವಳಿಯಲ್ಲಿ ಅವಕಾಶವನ್ನು ಖಾತರಿಪಡಿಸುವ ಉದ್ದೇಶದಿಂದ ಎಸ್‌ಸಿ ಅಥವಾ ಎಸ್‌ಟಿ ಸದಸ್ಯರಿಗೆ, ಮಹಿಳೆಯರಿಗೆ ಮತ್ತು ಇತರ ವರ್ಗಗಳಿಗೆ ತಲಾ ಒಂದು ಸ್ಥಾನವನ್ನು ಮೀಸಲಿಡಲಾಗುತ್ತಿದೆ ಎಂದರು.

ಸಹಕಾರಿ ಕ್ಷೇತ್ರದ ಮೇಲೆ ಮಸೂದೆ ವ್ಯತಿರಿಕ್ತ ಪರಿಣಾಮ ಬೀರಲಿದೆ

ಈ ಮಸೂದೆ ಸಹಕಾರಿ ಕ್ಷೇತ್ರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಆರೋಪಿಸಿದರು. ಸಹಕಾರಿ ಸಂಸ್ಥೆಗಳನ್ನು ಗಂಜಿ ಕೇಂದ್ರಗಳಾಗಿ ಪರಿವರ್ತಿಸುವ ಮೂಲಕ ತನ್ನ ಬೆಂಬಲಿಗರಿಗೆ ಪುನರ್ವಸತಿ ಕಲ್ಪಿಸುವ ಮಸೂದೆಯನ್ನು ರಾಜ್ಯ ಸರ್ಕಾರ ಅಂಗೀಕರಿಸುತ್ತಿದೆ ಎಂದು ತರಾಟೆಗೆ ತೆಗೆದುಕೊಂಡರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!