ಎಲೆ ಮಲ್ಲಪ್ಪ ಶೆಟ್ಟಿ ಕೆರೆ ಆವರಣದಲ್ಲಿ ಸುರಿದಿರುವ ಕಟ್ಟಡ ಅವಶೇಷಗಳು 
ರಾಜ್ಯ

ಬೆಂಗಳೂರು: ಎಲೆ ಮಲ್ಲಪ್ಪ ಶೆಟ್ಟಿ ಕೆರೆಯಲ್ಲಿ ಕಟ್ಟಡ ಅವಶೇಷಗಳ ರಾಶಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ

506.8 ಎಕರೆ ವಿಸ್ತೀರ್ಣದಲ್ಲಿರುವ ಸಣ್ಣ ನೀರಾವರಿ ಇಲಾಖೆಯ ಎಲೆ ಮಲ್ಲಪ್ಪ ಶೆಟ್ಟಿ ಕೆರೆ ಆವರಣದಲ್ಲಿ ಕಟ್ಟಡದ ಅವಶೇಷಗಳನ್ನು ಸುರಿಯುತ್ತಿರುವುದರಿಂದ ಹಲವು ಅಪಾಯಗಳಿಗೆ ಎಡೆಮಾಡಿಕೊಟ್ಟಿದೆ.

ಬೆಂಗಳೂರು: 506.8 ಎಕರೆ ವಿಸ್ತೀರ್ಣದಲ್ಲಿರುವ ಸಣ್ಣ ನೀರಾವರಿ ಇಲಾಖೆಯ ಎಲೆ ಮಲ್ಲಪ್ಪ ಶೆಟ್ಟಿ ಕೆರೆ ಆವರಣದಲ್ಲಿ ಕಟ್ಟಡದ ಅವಶೇಷಗಳನ್ನು ಸುರಿಯುತ್ತಿರುವುದರಿಂದ ಹಲವು ಅಪಾಯಗಳಿಗೆ ಎಡೆಮಾಡಿಕೊಟ್ಟಿದೆ. ಸಿಸಿಟಿವಿ ಅಳವಡಿಸಿ ಕೆರೆಯ ಸುತ್ತ ಬೇಲಿ ಹಾಕುವ ಕಾಮಗಾರಿಯನ್ನು ಇಲಾಖೆ ಕೈಗೆತ್ತಿಕೊಳ್ಳಬೇಕು ಎಂದು ಆಕ್ರೋಶಗೊಂಡ ನಿವಾಸಿಗಳು ಆಗ್ರಹಿಸಿದ್ದಾರೆ. ಈ ಹಿಂದೆ ಬಡಾವಣೆಗಳ ಕೊಳಚೆ ನೀರನ್ನು ನೇರವಾಗಿ ಕೆರೆಗೆ ಬಿಡುತ್ತಿರುವ ಬಗ್ಗೆ ವರದಿಯಾಗಿತ್ತು.

ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಜಣ್ಣ ಮಾತನಾಡಿ, 'ಕೆರೆ ಆವರಣದಲ್ಲಿ ಅಕ್ರಮವಾಗಿ ತ್ಯಾಜ್ಯ ಸುರಿಯುತ್ತಿರುವ ಬಗ್ಗೆ ಇಲಾಖೆ ಗಮನಕ್ಕೆ ಬಂದಿದ್ದು, ಬೇಲಿ ಹಾಕುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. 'ಎರಡು ಪಂಚಾಯಿತಿಗಳು ಮತ್ತು ಬಿಬಿಎಂಪಿ ವ್ಯಾಪ್ತಿಯನ್ನು ಒಳಗೊಂಡಿರುವ ಕೆರೆಯ 10 ಕಿಮೀ ವ್ಯಾಪ್ತಿಯಲ್ಲಿ ಬೇಲಿ ಹಾಕುವ ಕಾರ್ಯವನ್ನು ಪೂರ್ಣಗೊಳಿಸಬೇಕು. ತಹಸೀಲ್ದಾರ್ ಆದೇಶ ಮತ್ತು ಸರ್ವೆ ಆಧರಿಸಿ 3 ಕಿ.ಮೀ ಬೇಲಿ ಹಾಕಲಾಗಿದೆ. ಇನ್ನೊಂದು ತಿಂಗಳಲ್ಲಿ ಇಲಾಖೆ ವತಿಯಿಂದ ಎಲ್ಲ ಬೇಲಿ ಹಾಕುವ ಕಾಮಗಾರಿ ಪೂರ್ಣಗೊಳಿಸಿ ಕೆರೆಯ ರಕ್ಷಣೆಗೆ ಕ್ರಮಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಇಲಾಖೆ ಕಾರ್ಯಪಾಲಕ ಅಭಿಯಂತರ ರವೀಂದ್ರನಾಥ್ ಮಾತನಾಡಿ, ಕೆರೆಯನ್ನು ಪುರಸಭೆಗೆ ಹಸ್ತಾಂತರಿಸಲು ಚಿಂತನೆ ನಡೆಸಲಾಗಿದ್ದು, ಜಲಾನಯನ ಪುನಶ್ಚೇತನಕ್ಕೆ ಸಾಕಷ್ಟು ಹಣ ದೊರೆಯಲಿದೆ ಎಂದರು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಕೆರೆಗೆ 15 ಎಂಎಲ್‌ಡಿ ಕೊಳಚೆ ನೀರು ಸಂಸ್ಕರಣಾ ಘಟಕ ಅಳವಡಿಸಲಾಗಿದ್ದರೂ, ಕೊಳಚೆ ನೀರು ನೇರವಾಗಿ ಕೆರೆ ಸೇರುತ್ತಿದೆ. ಇದನ್ನು ಸರಿಪಡಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಬಿಡಬ್ಲ್ಯುಎಸ್‌ಎಸ್‌ಬಿಗೆ ಪತ್ರ ಬರೆಯಲಾಗಿದೆ ಎಂದು ಅವರು ಹೇಳಿದರು.

ಬೆಂಗಳೂರಿನ ಎರಡನೇ ಅತಿ ದೊಡ್ಡ ಜಲಮೂಲವಾಗಿರುವ ಕೆರೆಯಲ್ಲಿ ಕಟ್ಟಡದ ಅವಶೇಷಗಳನ್ನು ಸುರಿಯುತ್ತಿರುವ ದುಷ್ಕರ್ಮಿಗಳನ್ನು ಪತ್ತೆಹಚ್ಚಲು ಸರ್ಕಾರ ಸಿಸಿಟಿವಿಗಳನ್ನು ಅಳವಡಿಸಬೇಕು ಎಂದು ಕೆರೆ ಕಾರ್ಯಕರ್ತರು ಮತ್ತು ನಿವಾಸಿಗಳು ಒತ್ತಾಯಿಸಿದ್ದಾರೆ.

'ಹೆಚ್ಚಿನ ಕಾರ್ಯಕರ್ತರು ಮತ್ತು ನಿವಾಸಿಗಳು ಕೆಲಸದ ಮೇಲೆ ಹೊರಗಿದ್ದಾರೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ. ಕೆಆರ್ ಪುರಂ ಹಾಗೂ ಸುತ್ತಮುತ್ತಲಿನ ಬಡಾವಣೆಗಳಲ್ಲಿ ಕಟ್ಟಡಗಳನ್ನು ನಿರ್ಮಿಸುತ್ತಿರುವವರು ರಾತ್ರಿ ಅಥವಾ ಮಧ್ಯಾಹ್ನದ ವೇಳೆಯಲ್ಲಿ ಅವಶೇಷಗಳನ್ನು ತಂದು ಸುರಿದು ಪರಾರಿಯಾಗುತ್ತಿದ್ದಾರೆ’ ಎಂದು ನಿವಾಸಿಯೊಬ್ಬರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT