ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ
ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ 
ರಾಜ್ಯ

ಎಂಎನ್ ಸಿಗಳು ಉದ್ಯೋಗದಲ್ಲಿರುವ ಕನ್ನಡಿಗರ ಸಂಖ್ಯೆಯನ್ನು ಸೂಚನಾ ಫಲಕದಲ್ಲಿ ಪ್ರದರ್ಶಿಸಬೇಕು: ಸಚಿವ ತಂಗಡಗಿ

Lingaraj Badiger

ಬೆಂಗಳೂರು: ರಾಜ್ಯದ ಬಹುರಾಷ್ಟ್ರೀಯ ಕಂಪನಿಗಳು(ಎಂಎನ್ ಸಿ) ಉದ್ಯೋಗದಲ್ಲಿರುವ ಕನ್ನಡಿಗರ ಸಂಖ್ಯೆಯನ್ನು ಸೂಚನಾ ಫಲಕದಲ್ಲಿ ಪ್ರದರ್ಶಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ಬುಧವಾರ ಹೇಳಿದ್ದಾರೆ.

ಬಹುರಾಷ್ಟ್ರೀಯ ಕಂಪನಿಗಳು ಉದ್ಯೋಗದಲ್ಲಿರುವ ಕನ್ನಡಿಗರ ಸಂಖ್ಯೆಯನ್ನು ತಮ್ಮ ಕ್ಯಾಂಪಸ್‌ಗಳಲ್ಲಿ ಸೂಚನಾ ಫಲಕದಲ್ಲಿ ಪ್ರದರ್ಶಿಸಬೇಕಾಗುತ್ತದೆ ಎಂದು ತಂಗಡಗಿ ತಿಳಿಸಿದ್ದಾರೆ.

"ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸೂಚಿಸಿದಂತೆ ಭಾಷಾ ಅವಶ್ಯಕತೆಗಳನ್ನು ಅನುಸರಿಸಲು ವಿಫಲವಾದರೆ ಪರವಾನಗಿ ರದ್ದುಗೊಳಿಸಲಾಗುವುದು" ಎಂದು ಸಚಿವರು ಎಚ್ಚರಿಸಿದ್ದಾರೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ 2022ರ ಇತ್ತೀಚಿನ ತಿದ್ದುಪಡಿಯು ವಾಣಿಜ್ಯ, ಕೈಗಾರಿಕಾ ಮತ್ತು ವ್ಯಾಪಾರ ಉದ್ಯಮಗಳು, ಟ್ರಸ್ಟ್‌ಗಳು, ಸಲಹಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್‌ಗಳು ಸೇರಿದಂತೆ ಹಲವು ಖಾಸಗಿ ಸಂಸ್ಥೆಗಳಿಗೆ ಅನ್ವಯಿಸುತ್ತದೆ.

ಸರ್ಕಾರ ಅಥವಾ ಸ್ಥಳೀಯ ಅಧಿಕಾರಿಗಳ ಅನುಮೋದನೆ ಮತ್ತು ಅನುಮತಿಯೊಂದಿಗೆ ಕಾರ್ಯನಿರ್ವಹಿಸುವ ಈ ಎಲ್ಲಾ ಘಟಕಗಳು ಈಗ ತಮ್ಮ ಹೆಸರಿನ ಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಇರಬೇಕು ಎಂದು ಸೂಚಿಸಲಾಗಿದೆ.

ನಾಮಫಲಕದ ಮೇಲ್ಭಾಗದಲ್ಲಿ ಕನ್ನಡವನ್ನು ಪ್ರಮುಖವಾಗಿ ಪ್ರದರ್ಶಿಸಬೇಕು ಎಂದು ಕಾಯಿದೆಯಲ್ಲಿ ಸೂಚಿಸಲಾಗಿದೆ. ಈ ಕ್ರಮವು ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ ಸ್ಥಳೀಯ ಭಾಷೆ ಬಳಕೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

SCROLL FOR NEXT