ನಿಮ್ಹಾನ್ಸ್ ಸಂಸ್ಥೆ(ಸಂಗ್ರಹ ಚಿತ್ರ) 
ರಾಜ್ಯ

ಬೆಂಗಳೂರಿನಲ್ಲಿ ಎರಡನೇ ಹೈಟೆಕ್ ನಿಮ್ಹಾನ್ಸ್ ಆಸ್ಪತ್ರೆ ಸ್ಥಾಪನೆಗೆ ಸರ್ಕಾರ ಮುಂದು!

ವೈದ್ಯಕೀಯ ಶಿಕ್ಷಣ ಇಲಾಖೆಯು ಉತ್ತರ ಬೆಂಗಳೂರಿನಲ್ಲಿ 40 ಎಕರೆ ಜಾಗದಲ್ಲಿ ಮಲ್ಟಿ ಸೂಪರ್ ಸ್ಪೆಷಾಲಿಟಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ಮಾಡಲಿದೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎರಡನೇ ಹೈಟೆಕ್ ನಿಮ್ಹಾನ್ಸ್ ಆಸ್ಪತ್ರೆ ತಲೆಯೆತ್ತಲಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ಉತ್ತರ ಬೆಂಗಳೂರಿನಲ್ಲಿ 40 ಎಕರೆ ಜಾಗದಲ್ಲಿ ಮಲ್ಟಿ ಸೂಪರ್ ಸ್ಪೆಷಾಲಿಟಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಹೇಳಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ಹಲವು ಕಡೆ ರಸ್ತೆ ಅಪಘಾತದಿಂದ ನರ ಹಾಗೂ ಮೆದುಳು ಸಮಸ್ಯೆಯಿಂದ ಸಾವಿರಾರು ಜನರು ಮೃತಪಡುತ್ತಿದ್ದಾರೆ. ಮಾನಸಿಕ ಆರೋಗ್ಯ ಮತ್ತು ನರ ಸಮಸ್ಯೆಗಳಿಂದ ಜೀವ ಕಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ದೇಶದ ಅತ್ಯಂತ ಪ್ರತಿಷ್ಠಿತ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಾಗಿರುವ ನಿಮ್ಹಾನ್ಸ್‌ನ ಎರಡನೇ ಘಟಕವನ್ನು ನಿರ್ಮಾಣ ಮಾಡಲು ಮುಂದಾಗಿದ್ದೇವೆ ಎಂದರು.

ಬೆಂಗಳೂರಿನಲ್ಲಿ ಈಗಿರುವ ನಿಮ್ಹಾನ್ಸ್ ಆಸ್ಪತ್ರೆಯ ಮೇಲೆ ಸಾಕಷ್ಟು ಒತ್ತಡ ಹೆಚ್ಚಾಗಿದೆ. ಸಾಕಷ್ಟು ಬೆಡ್ ಸಮಸ್ಯೆಗಳು ಸೇರಿದಂತೆ ನಾನಾ ರೀತಿಯ ಸಮಸ್ಯೆಗಳು ಕಾಡುತ್ತಿವೆ. ಇದರಿಂದ ಎಲ್ಲರಿಗೂ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ. ಜತೆಗೆ ರೋಗಿಗಳ ಒತ್ತಡವೂ ಹೆಚ್ಚಿದೆ. ಅಲ್ಲದೆ, ನಿಮ್ಹಾನ್ಸ್ ಆಸ್ಪತ್ರೆಗೆ ರಾಜ್ಯದ ಜನರ ಒತ್ತಡದ ಜತೆಗೆ ಕೇರಳ ಆಂಧ್ರಪ್ರದೇಶ, ತಮಿಳನಾಡಿನ ಜನರ ಒತ್ತಡವೂ ಹೆಚ್ಚಾಗಿ ಸಾಕಷ್ಟು ಸಮಸ್ಯೆಗಳು ಎದುರಾಗಿವೆ. ಅದರಲ್ಲೂ ಉತ್ತರ ಬೆಂಗಳೂರಿನ ಜನರಿಗೆ ಆ ಭಾಗದಲ್ಲಿ ಯಾವುದೇ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕೊರತೆಯಿದೆ, ಹೀಗಾಗಿ ಸ್ಥಾಪನೆಗೆ ಮುಂದಾಗಿದ್ದೇವೆ ಎಂದರು.

ರಾಜ್ಯ ಸರ್ಕಾರದಿಂದ 40 ಎಕರೆ ಜಾಗ ಮಂಜೂರು: ವೈದ್ಯಕೀಯ ಶಿಕ್ಷಣ ಸಂಸ್ಥೆಯು ನಿಮ್ಹಾನ್ಸ್ ಎರಡನೇ ಮಲ್ಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಕೇಂದ್ರ ಆರೋಗ್ಯ ಇಲಾಖೆಗೆ ಡಿಮ್ಯಾಂಡ್ ಮಾಡಿತ್ತು. ಇದಕ್ಕೆ ಕೇಂದ್ರ ಆರೋಗ್ಯ ಇಲಾಖೆ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ 40 ಎಕರೆ ಪ್ರದೇಶದಲ್ಲಿ ಬೆಂಗಳೂರಿನ ಕ್ಯಾನ್ಸನಹಳ್ಳಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆಯ ಎರಡನೇ ಘಟಕವನ್ನು ತೆರೆಯಲು ನಿರ್ಧಾರ ಮಾಡಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಜಿಎಸ್‌ಟಿ ಮಂಡಳಿಯಿಂದ ಪ್ರಕ್ರಿಯೆ ಸುಧಾರಣೆಗಳಿಗೆ ಅನುಮೋದನೆ; ಬಂಧನದ ಅಧಿಕಾರಕ್ಕೆ ಕಡಿವಾಣ!

ಶಿಕಾರಿಪುರದ ಈ ಗ್ರಾಮದಲ್ಲಿ ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಸ್ಫೋಟಕ ಕಾರಣ...

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ