ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಅಪಘಾತ; ಸ್ಥಳದಲ್ಲೇ ಐವರು ಸಾವು

ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಎರಡು ಕಡೆ ಭೀಕರ ಅಪಘಾತ ಸಂಭವಿಸಿದ್ದು, ಇಂದು ಸಂಜೆ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಶುಕ್ರವಾರ ಎರಡು ಕಡೆ ಭೀಕರ ಅಪಘಾತ ಸಂಭವಿಸಿದ್ದು, ಇಂದು ಸಂಜೆ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಬಾಗ ತಾಲೂಕಿನ ಮುಗಳಖೋಡ ಕಾಲುವೆ ಬಳಿ ನಡೆದಿದೆ.

ಇಂದು ಸಂಜೆ ಜತ್ತ-ಜಾಂಬೋಟಿ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು, ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ಮರಕ್ಕೆ ಡಿಕ್ಕಿ ಹೊಡೆದಿದೆ.

ಮೃತರನ್ನು ಗುರ್ಲಾಪುರದ ನಿವಾಸಿಗಳಾದ ಮಲ್ಲಿಕಾರ್ಜುನ್ ಮರಾಠೆ(16), ಲಕ್ಷ್ಮೀ ಮರಾಠೆ(19), ಆಕಾಶ ಮರಾಠೆ(14), ನಿಪನಾಳ ಗ್ರಾಮದ ಶ್ರೀಕಾಂತ ಪಡತರಿ(22), ಮುಗಳಖೋಡ ಗ್ರಾಮದ ನಾಗಪ್ಪ ಯಡವನ್ನವರ್(48) ಎಂದು ಗುರುತಿಸಲಾಗಿದೆ.

ಗುರ್ಲಾಪುರ ಕಡೆಯಿಂದ ಮುಗಳಖೋಡದತ್ತ ಹೊರಟಿದ್ದ ಕಾರು ಮೊದಲು ಬೈಕ್‌ಗೆ ಗುದ್ದಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ. ದುರಂತದಲ್ಲಿ ಬೈಕ್ ಸವಾರರು ಸೇರಿ ಐವರು ಮೃತಪಟ್ಟಿದ್ದಾರೆ. ಈ ಪೈಕಿ ಮೂವರು ಒಂದೇ ಕುಟುಂಬದವರಾಗಿದ್ದಾರೆ.

ಈ ಸಂಬಂಧ ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ