ಡಿಸಿಎಂ ಡಿಕೆ ಶಿವಕುಮಾರ್ ಸಾಂದರ್ಭಿಕ ಚಿತ್ರ 
ರಾಜ್ಯ

ಜಮಖಂಡಿ- ಅಥಣಿ ನಡುವೆ ಕೃಷ್ಣಾ ನದಿಗೆ ಸೇತುವೆ ಕಾಮಗಾರಿ; ಅಂದಾಜು ವೆಚ್ಚ ಏರಿಕೆಗೆ ರಾಜ್ಯ ಸರ್ಕಾರದ ಅನುಮತಿ

ಜಮಖಂಡಿ ಮತ್ತು ಅಥಣಿ ನಡುವೆ ಕೃಷ್ಣಾ ನದಿಯ ಸೇತುವೆ ನಿರ್ಮಾಣದ ಯೋಜನೆಯ ವೆಚ್ಚವನ್ನು 60 ಕೋಟಿಯಿಂದ 99 ಕೋಟಿಗೆ ಏರಿಸುವುದಕ್ಕೆ ಸರ್ಕಾರ ಅನುಮತಿ ನೀಡಿದೆ. ಶೀಘ್ರವೇ ಈ ಸೇತುವೆ ಕಾಮಗಾರಿ ಆರಂಭಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಂಗಳೂರು: ಜಮಖಂಡಿ ಮತ್ತು ಅಥಣಿ ನಡುವೆ ಕೃಷ್ಣಾ ನದಿಯ ಸೇತುವೆ ನಿರ್ಮಾಣದ ಯೋಜನೆಯ ವೆಚ್ಚವನ್ನು 60 ಕೋಟಿಯಿಂದ 99 ಕೋಟಿಗೆ ಏರಿಸುವುದಕ್ಕೆ ಸರ್ಕಾರ ಅನುಮತಿ ನೀಡಿದೆ. ಶೀಘ್ರವೇ ಈ ಸೇತುವೆ ಕಾಮಗಾರಿ ಆರಂಭಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಹನುಮಂತಪ್ಪ ನಿರಾಣಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಈ ವಿಚಾರದಲ್ಲಿ ನಮ್ಮ ಇಲಾಖೆಯ ತಪ್ಪಿದೆ. ಕಾರಣ ಸೇತುವೆಯ ಎತ್ತರ ಅಂದಾಜು ಮಾಡುವಾಗ ಸರಿಯಾಗಿ ಮಾಡಿಲ್ಲ. ನೀರಿನ ಪ್ರಮಾಣ ಹೆಚ್ಚಾಗಿ ಹರಿದಾಗ ಅದರ ಎತ್ತರದ ಬಗ್ಗೆ ಸರಿಯಾಗಿ ಲೆಕ್ಕಾಚಾರ ಮಾಡಿಲ್ಲ. ದಾವಣಗೆರೆಯ ಗುತ್ತಿಗೆದಾರರಿಗೆ ಇದರ ಗುತ್ತಿಗೆ ನೀಡಿಲಾಗಿದ್ದು ಆರಂಭದಲ್ಲಿ 24 ತಿಂಗಳಲ್ಲಿ ಕಾಮಗಾರಿ ಮುಗಿಸಲು ಸೂಚಿಸಲಾಗಿತ್ತು. ಮೊದಲು ಈ ಸೇತುವೆಯನ್ನು 480 ಮೀಟರ್ ನಷ್ಟು ಉದ್ದ, 533 ಮೀ ಎತ್ತರ ಮಾಡಲು ತೀರ್ಮಾನಿಸಲಾಗಿತ್ತು. ಈಗ ಸೇತುವೆ ಗಾತ್ರವನ್ನು ಪರಿಷ್ಕರಿಸಿ ಇದನ್ನು ಕ್ರಮವಾಗಿ 680 ಹಾಗೂ 534 ಮೀ.ಗೆ ಏರಿಕೆ ಮಾಡಲಾಗಿದೆ. ಇದರ ಅಂದಾಜು ವೆಚ್ಚವನ್ನು 60 ಕೋಟಿಯಿಂದ 99 ಕೋಟಿಗೆ ಏರಿಸಲಾಗಿದೆ. ಉಪ ಸಮಿತಿ ಇದಕ್ಕೆ ಅನುಮತಿ ನೀಡಿದ್ದು ಮಂಡಳಿ ಸಭೆಯಲ್ಲಿ ಇದನ್ನು ಪಾಸ್ ಮಾಡಲಾಗಿದೆ. ಹೆಚ್ಚುವರಿ 40 ಕೋಟಿಗೆ ಸರ್ಕಾರ ಅನುಮತಿ ನೀಡಿದ್ದು, ಆದಷ್ಟು ಬೇಗ ಈ ಕಾಮಗಾರಿ ಆರಂಭಿಸಲಾಗುವುದು” ಎಂದು ತಿಳಿಸಿದರು.

ಹಣಕಾಸಿನ ಸ್ಥಿತಿ ನೋಡಿಕೊಂಡು ಕೆರೆಗೆ ನೀರು ತುಂಬಿಸುವ ಯೋಜನೆ: ವೈ.ಎಂ ಸತೀಶ್ ಅವರ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, “ಇವು ಬಳ್ಳಾರಿ ಗ್ರಾಮಾಂತರ ಭಾಗದ ಹೊಸ ಯೋಜನೆಗಳಾಗಿವೆ. ಇನ್ನು ಕುಡಿಯುವ ನೀರಿನ ಪೂರೈಕೆಗೆ 48 ಕೋಟಿ ಮೊತ್ತದ ಯೋಜನೆ ಅಂದಾಜಿಸಲಾಗಿದೆ. ಕೊಟ್ಟುರಿನ 16 ಕೆರೆ ತುಂಬಿಸಲು 399 ಕೋಟಿ ಅಂದಾಜಿಸಲಾಗಿದೆ. ಸಂಡೂರು ತಾಲೂಕಿನ ಕೆರೆ ತುಂಬಿಸಲು 1, 355 ಕೋಟಿ ಅಂದಾಜಿಸಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ 5,300 ಕೋಟಿ ಅನುದಾನ ಬರಬೇಕಿತ್ತು. ಬೊಮ್ಮಾಯಿ ಅವರು ಕೂಡ ಸಿಎಂ ಆಗಿದ್ದಾಗ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರಿಗೆ ಮನವಿ ಮಾಡಿದ್ದರು. ಆದರೆ ಈ ಬಗ್ಗೆ ಬಜೆಟ್ ನಲ್ಲಿ ಮಾತು ಕೊಟ್ಟರೂ ಹಣ ನೀಡಲಿಲ್ಲ. ನಮ್ಮ ಇಲಾಖೆಯ ಬಜೆಟ್ ಕೂಡ 19 ಸಾವಿರ ಕೋಟಿಯಿಂದ 15 ಸಾವಿರ ಕೋಟಿಗೆ ಇಳಿದಿದೆ. ಮುಂದಿನ ದಿನಗಳಲ್ಲಿ ಹಣಕಾಸಿನ ಸಾಧ್ಯತೆ ನೋಡಿಕೊಂಡು ನಾವು ತೀರ್ಮಾನ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

ಮಧ್ಯ ಪ್ರದೇಶದ ಹನಿ ನೀರಾವರಿ ಮಾದರಿ ಜಾರಿಗೆ ಆಲೋಚನೆ: ಶರಣಗೌಡ ಪಾಟೀಲ ಬಯ್ಯಾಪುರ ಅವರು ನಂದಾಡಗಿ ಏತ ನೀರಾವರಿ, ಹನಿ ನೀರಾವರಿ ಕಾಮಗಾರಿ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್,

ಮಧ್ಯಪ್ರದೇಶದಲ್ಲಿ ಹೊಸ ಮಾದರಿಯನ್ನು ಪರಿಚಯಿಸಿದ್ದಾರೆ. ಅದರಲ್ಲಿ ಜಮೀನಿನವರೆಗೂ ನೀರನ್ನು ತಲುಪಿಸುವ ಜವಾಬ್ದಾರಿ ಸರ್ಕಾರದ್ದಾಗಿದ್ದು, ಜಮೀನಿನ ಒಳಗೆ ನೀರನ್ನು ಬಳಸಿಕೊಳ್ಳುವ ಜವಾಬ್ದಾರಿ ರೈತರಿಗೆ ವಹಿಸಲಾಗುತ್ತಿದೆ. ನಾನು ಅದನ್ನು ನೋಡಿ ಈ ಭಾಗದಲ್ಲಿ ಅದೇ ಮಾದರಿ ಅಳವಡಿಸುವ ಬಗ್ಗೆ ಆಲೋಚನೆ ಇದೆ. ಇದರಿಂದ ರೈತರಿಗೂ ಹೊಣೆಗಾರಿಕೆ ಇರುವಂತೆ ಮಾಡಬಹುದು. ಸಧ್ಯದಲ್ಲೇ ಈ ಬಗ್ಗೆ ತೀರ್ಮಾನ ಮಾಡಲಾಗುವುದು” ಎಂದರು.

ಕೃಷ್ಣಾ ಮೇಲ್ದಂಡೆ 3ನೇ ಹಂತ ಯೋಜನೆ ಅಧಿಸೂಚನೆಗೆ ಕಾಯುತ್ತಿದ್ದೇವೆ: ಈ ವಿಚಾರವಾಗಿ ನೋಟಿಫಿಕೇಷನ್ ಆಗುವುದಕ್ಕೆ ನಾವು ಕಾಯುತ್ತಿದ್ದೇವೆ. 2017ರಲ್ಲಿ 52 ಸಾವಿರ ಕೋಟಿ ಅಂದಾಜು ಮಾಡಲಾಗಿತ್ತು. 1,33,867 ಎಕರೆ ಭೂಸ್ವಾಧೀನ ಮಾಡಬೇಕಾಗಿದೆ. ಈವರೆಗೂ 28 ಸಾವಿರ ಎಕರೆ ಭೂಸ್ವಾಧೀನ ಮಾಡಲಾಗಿದೆ. ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಹೊಸ ತೀರ್ಮಾನ ಮಾಡಿ ಭೂಸ್ವಾಧಿನಕ್ಕೆ ಒಣ ಭೂಮಿಗೆ 20 ಲಕ್ಷ, ನೀರಾವರಿ ಭೂಮಿಗೆ 24 ಲಕ್ಷ ನೀಡಲು ತೀರ್ಮಾನಿಸಲಾಗಿದೆ. ಇದನ್ನು ರಾಷ್ಟ್ರೀಯ ಯೋಜನೆ ಮಾಡಬೇಕು ಎಂದು ಎಲ್ಲರೂ ಪ್ರಯತ್ನಿಸುತ್ತಿದ್ದಾರೆ. ಇದು ನಮ್ಮ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಕೈಗೊಳ್ಳುತ್ತೇವೆ. ಈ ಭಾಗದಲ್ಲಿ ಪುನರ್ವಸತಿ ಕಾರ್ಯಕ್ರಮಕ್ಕೆ ಹೆಚ್ಚಿನ ಒತ್ತು ನೀಡುತ್ತೇವೆ” ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಇನ್ನೂ 372 ಕೋಟಿ ಶೌಚಾಲಯ ನಿರ್ಮಾಣ: ಭಾರತಿ ಶೆಟ್ಟಿ ಅವರು ಮಹಿಳಾ ಶೌಚಾಲಯದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಇಂತಹ ವಿಚಾರವಾಗಿ ಗಮನಹರಿಸಿರುವ ಭಾರತಿ ಶೆಟ್ಟಿ ಅವರಿಗೆ ನಾನು ಅಭಿನಂದಿಸುತ್ತೇನೆ. ಬೇರೆ ಪ್ರತಿನಿಧಿಗಳು ಕೂಡ ಈ ಬಗ್ಗೆ ಆಲೋಚನೆ ಮಾಡಬೇಕು. ಇಂತಹ ವಿಚಾರದಲ್ಲಿ ಯಾರೂ ಜವಾಬ್ದಾರಿ ತೆಗೆದುಕೊಳ್ಳುವುದಿಲ್ಲ. ಈ ವಿಚಾರವಾಗಿ ಜನಪ್ರತಿನಿಧಿಗಳು ಅಥವಾ ಅಧಿಕಾರಿಗಳು ಆಗಾಗ್ಗೆ ಪರಿಶೀಲಿಸಬೇಕು. ಇನ್ನು ಸಾರ್ವಜನಿಕ ಶೌಚಾಲಯಗಳಲ್ಲಿ ಶುಲ್ಕದ ವಿಚಾರವಾಗಿ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಉಳಿದಂತೆ ಜನಸಂಖ್ಯೆಗೆ ಅನುಗುಣವಾಗಿ ಇನ್ನು ಹೆಚ್ಚಿನ ಶೌಚಾಲಯ ಮಾಡಬೇಕಿದೆ. ಬೆಂಗಳೂರಿನಲ್ಲಿ ಈಗಾಗಲೇ 957 ಶೌಚಾಲಯಗಳಿದ್ದು, ಇನ್ನು 372 ಶೌಚಾಲಯ ಕಟ್ಟುವ ಆಲೋಚನೆ ಇದೆ. ಬಸ್ ನಿಲ್ದಾಣ, ಪಾದಚಾರಿ ಮಾರ್ಗ, ಸರ್ಕಾರಿ ಜಾಗದಲ್ಲಿ ನಿರ್ಮಾಣ ಮಾಡಲಾಗುವುದು. ಈ ಶೌಚಾಲಯಗಳನ್ನು ಉಚಿತ ಮಾಡುವ ವಿಚಾರದಲ್ಲಿ ಇವುಗಳ ನಿರ್ವಹಣೆ ಮಾಡುವವರು ಬೇಕು. ಈ ವಿಚಾರವಾಗಿ ಪರಿಶೀಲನೆ ಮಾಡುತ್ತೇವೆ” ಎಂದು ಉತ್ತರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕ್ಸಿ ಜಿನ್‌ಪಿಂಗ್ ಜತೆ ಮಾತುಕತೆ: ಗಡಿಯಾಚೆಗಿನ ಭಯೋತ್ಪಾದನೆ ಬಗ್ಗೆ ಪ್ರಧಾನಿ ಮೋದಿ ಪ್ರಸ್ತಾಪ

ಜನರನ್ನು ಮೂರ್ಖರನ್ನಾಗಿಸುವವನೇ ಶ್ರೇಷ್ಠ ನಾಯಕ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಶ್ರಮಿಸುವ 'ಎಜುಕೇಟ್ ಗರ್ಲ್ಸ್' NGOಗೆ ಪ್ರತಿಷ್ಠಿತ ಮ್ಯಾಗ್ಸೆಸೆ ಪ್ರಶಸ್ತಿ

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!

ಬೆಂಗಳೂರು: ಪಿಜಿಯಲ್ಲಿ ಮಲಗಿದ್ದ ಯುವತಿಗೆ ಲೈಂಗಿಕ ಕಿರುಕುಳ, ನಗದು ದೋಚಿ ಪರಾರಿ!

SCROLL FOR NEXT